ಕಠಿಣ ಪರಿಶ್ರಮದಿಂದಅಭ್ಯಸಿಸಿ ಗುರಿ ತಲುಪಿ: ನಿಷ್ಟಿ
Team Udayavani, Aug 9, 2018, 10:23 AM IST
ಕಲಬುರಗಿ: ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ನಿರೀಕ್ಷಿಸಿದ ಫಲಿತಾಂಶ ಹಾಗೂ ಬಯಸಿದ ಹುದ್ದೆ ಪಡೆಯುವಂತೆ ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ| ನಿರಂಜನ ನಿಷ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ದೊಡ್ಡಪ್ಪ ಅಪ್ಪ ವಸತಿ ವಿಜ್ಞಾನ ಪದವಿ-ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಸಕ್ತ ವರ್ಷದ ವಿಜ್ಞಾನ ಚಟುವಟಿಕೆಗಳನ್ನು ಉದ್ಘಾಟನೆ ನೆರವೇರಿಸಿ, ಶ್ರಮವಹಿಸಿ ಅಧ್ಯಯನದಲ್ಲಿ ತೊಡಗಿದರೆ
ಜ್ಞಾನದ ಜತೆಗೆ ಗುರಿ ಸಾಧಿಸಬಹುದು. ಆದ್ದರಿಂದ ವಿದ್ಯಾರ್ಥಿಗಳಿಗೆ ಓದುವಿನ ಕಡೆ ಮಾತ್ರ ಹೆಚ್ಚಿನ ಲಕ್ಷ್ಮೀ ಇರಬೇಕೆಂದು ಸಲಹೆ ನೀಡಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜದೇಶಮುಖ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮಾದರಿ ಗುರಿ ಇಟ್ಟುಕೊಳ್ಳುವುದು ಬಹಳ ಅಗತ್ಯವಿದೆ. ಅದೇ ರೀತಿ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡಬಾರದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ 2018ನೇ ಸಾಲಿನ ಪದವಿ ಪೂರ್ವ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಐ.ಐ.ಟಿ, ಜೆಇಇ ಹಾಗೂ ನೀಟ್ ಪರೀಕ್ಷೆಗಳಲ್ಲಿ ಸ್ಥಾನ ಗಿಟ್ಟಿಸಿದವರಿಗೆ ನಗದು
ಪುರಸ್ಕಾರದೊಂದಿಗೆ ಸನ್ಮಾನಿಸಲಾಯಿತು. ಶರಣ ಬಸವೇಶ್ವರ ವಿಜ್ಞಾನ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ರಾಮಕೃಷ್ಣರೆಡ್ಡಿ ಹಾಜರಿದ್ದರು. ಕಾಲೇಜಿನ ಪ್ರಾಚಾರ್ಯ ವಿನೋದಕುಮಾರ ಎಲ್ ಪತಂಗೆ ವಂದಿಸಿದರು. ಕಾಲೇಜಿನ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.