ತೆನೆ-ಕೈಗೆ ಲೋಕಲ್‌ ವಾರ್‌ ಪ್ರತಿಷ್ಠೆ


Team Udayavani, Aug 9, 2018, 4:16 PM IST

man.jpg

ಮಂಡ್ಯ: ನಗರಸಭೆ ಚುನಾವಣೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ಗೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ನಗರಸಭೆ ಆಡಳಿತ ಸದ್ಯ ಕೈ ವಶದಲ್ಲಿದೆ. ಅದನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ದೊಡ್ಡ ಸವಾಲಾಗಿದೆ. ಸ್ಥಳೀಯ ನಾಯಕತ್ವವಿಲ್ಲದೇ ಸೊರಗಿರುವ ಕಾಂಗ್ರೆಸ್‌ ಅತಂತ್ರ ಪರಿಸ್ಥಿತಿಯಲ್ಲಿದ್ದು, ಜಿಲ್ಲೆಯ ಏಳು ಕ್ಷೇತ್ರಗಳನ್ನು ವಶಕ್ಕೆ ಪಡೆದಿರುವ ಜೆಡಿಎಸ್‌ ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದೆ. ನಗರಸಭೆ ಅಧಿಕಾರ ಹಿಡಿಯುವುದಕ್ಕೆ ರಣತಂತ್ರ ನಡೆಸಿದೆ.

ಸಮರ್ಥ ನಾಯಕರು ಇಲ್ಲ: ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ಸರಿಸಮನಾಗಿ ತನ್ನ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಚುನಾವಣಾ ರಣರಂಗದಲ್ಲಿ ಹೋರಾಡಲು ಬಿಜೆಪಿ ಸಿದ್ಧತೆ ನಡೆಸಿದೆ. ಆದರೆ, ಬಿಜೆಪಿಯಲ್ಲಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಅಭಾವವಿದೆ. ಸಮರ್ಥ ನಾಯಕರೂ ಇಲ್ಲದೇ ಸಾಂಪ್ರದಾ ಯಿಕ ಪೈಪೋಟಿ ನೀಡುವುದಕ್ಕೆ ತಯಾರಿ ನಡೆಸಿದೆ.

ಜೆಡಿಎಸ್‌ನಲ್ಲಿ ಆಕಾಂಕ್ಷಿಗಳು ಹೆಚ್ಚು: ನಗರಸಭೆಯ 35 ವಾರ್ಡ್‌ಗಳಿಂದ ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಟಿಕೆಟ್‌ಗೆ ಬಿರುಸಿನ ಪೈಪೋಟಿ ಏರ್ಪಟ್ಟಿದೆ. ವಾರ್ಡ್‌ ಜನರ ವಿಶ್ವಾಸಗಳಿಸುವುದಕ್ಕಿಂತ ಮೊದಲು ಟಿಕೆಟ್‌ಗಾಗಿ ಸಮರ ನಡೆಸುತ್ತಿದ್ದಾರೆ. ಒಂದೊಂದು ವಾರ್ಡ್‌ನಲ್ಲಿ ಕನಿಷ್ಠ 3 ರಿಂದ 4 ಮಂದಿ ಆಕಾಂಕ್ಷಿಗಳಿದ್ದಾರೆ. ಈ ಹಿಂದೆ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದವರಲ್ಲಿ ಕೆಲವರು ಜೆಡಿಎಸ್‌ ನಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.
 
ಕೆಲವರು ಸ್ಥಳೀಯ ಶಾಸಕರನ್ನು ಬಿಟ್ಟು ಪ್ರಭಾವಿ ನಾಯಕರಾದ ಸಿ.ಎಸ್‌.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಅವರ ಮೂಲಕ ವರಿಷ್ಠರ ಮೇಲೆ ಪ್ರಭಾವ ಬೀರಿ ಟಿಕೆಟ್‌ ಗಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಎರಡನೇ ಹಂತದ ನಾಯಕರ ಬೆನ್ನು ಹತ್ತಿರುವ ಹಲವರು ಬಿ-ಫಾರಂಗಾಗಿ ಪ್ರಯಾಸಪಡುತ್ತಿದ್ದಾರೆ.

ನಾಯಕತ್ವವಿಲ್ಲದ ಕಾಂಗ್ರೆಸ್‌: ಕಾಂಗ್ರೆಸ್‌ನಲ್ಲಿ ಸ್ಥಳೀಯವಾಗಿ ಸಮರ್ಥ ನಾಯಕತ್ವವಿಲ್ಲ. ಈ ಹಿಂದೆ ಅಂಬರೀಶ್‌ ನಾಯಕತ್ವ ಜಿಲ್ಲೆಯಲ್ಲಿತ್ತು. ಕಳೆದ ಚುನಾವಣಾ ಸಮಯದಲ್ಲೇ ಅವರು ಚುನಾವಣೆಗೆ ನಿರುತ್ಸಾಹ ತೋರಿಸಿ ಹೋರಾಟದಿಂದ ಹಿಂದೆ ಸರಿದರು. ಅವರಿಗೀಗ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಆಸಕ್ತಿಯೂ ಇಲ್ಲ. ಪ್ರಚಾರಕ್ಕೆ ಬರುವ ಸಾಧ್ಯತೆಗಳೂ ತೀರಾ ಕಡಿಮೆ. 

ಕಾಂಗ್ರೆಸ್‌ನಲ್ಲಿ ಮೊದಲ ಹಂತದ ನಾಯಕತ್ವದ ಜೊತೆಗೆ ಎರಡನೇ ಹಂತದ ನಾಯಕತ್ವವೂ ಹೆಚ್ಚು ಪ್ರಬಲವಾಗಿಲ್ಲ. ಭಿನ್ನಮತ, ಬಣ ರಾಜಕೀಯದಿಂದ ತಾಂಡವವಾಡುತ್ತಿದ್ದು, ಒಬ್ಬೊಬ್ಬರು ಒಂದೊಂದು ಹಾದಿಯಲ್ಲಿ ಸಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಪಕ್ಷದ ಸ್ಪರ್ಧಾಕಾಂಕ್ಷಿಗಳು ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ.

 ಕಳೆದ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 15 ಸ್ಥಾನಗಳಲ್ಲಿ ಜಯಗಳಿಸಿತ್ತು. ಪಕ್ಷೇತರರ ಬೆಂಬಲದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಪ್ರಸ್ತುತ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯಲು ಹೋರಾಟ ನಡೆಸಬೇಕಿದ್ದರೂ ಸಮರ್ಥ ಸಾರಥಿ ಇಲ್ಲದೆ ಕಾಂಗ್ರೆಸ್‌ ಪಾಳಯದಲ್ಲಿ ಉತ್ಸಾಹ ಅಷ್ಟಾಗಿ ಕಂಡುಬರುತ್ತಿಲ್ಲ.

ಬಿಜೆಪಿಯಲ್ಲಿ ಅಭ್ಯರ್ಥಿಗಳ ಅಭಾವ: ಕಾಂಗ್ರೆಸ್‌ -ಜೆಡಿಎಸ್‌ಗೆ ಸಮರ್ಥ ಪೈಪೋಟಿ ನೀಡುವುದಕ್ಕೆ ಬಿಜೆಪಿ ಉತ್ಸಾಹವೇನೋ ತೋರುತ್ತಿದೆ. ಆದರೆ, ನಗರದ 35 ವಾರ್ಡ್‌ಗಳಿಂದ ಸ್ಪರ್ಧಿಸುವುದಕ್ಕೆ ಆ ಪಕ್ಷದಲ್ಲಿ ಅಭ್ಯರ್ಥಿಗಳ ಅಭಾವ ಎದುರಾಗಿದೆ. ಆದರೂ, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಚ್‌.ಆರ್‌.ಅರವಿಂದ್‌ ಈಗಾಗಲೇ ಕಾರ್ಯಕರ್ತರ ಪೂರ್ವ ಭಾವಿಸಭೆ ನಡೆಸಿ ಚುನಾವಣೆಗೆ ಕಣಕ್ಕಿಳಿಸುವ ಅಭ್ಯರ್ಥಿಗಳನ್ನು ಸಜ್ಜುಗೊಳಿಸುವ ತಯಾರಿಯಲ್ಲಿದ್ದಾರೆ.
 
ಚುನಾವಣಾ ಸಮಯದಲ್ಲಿ ಮಂಡ್ಯದೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದ ತೇಜಸ್ವಿನಿ ರಮೇಶ್‌ ಈಗ ವಿಧಾನಪರಿಷತ್‌ ಸದಸ್ಯೆಯಾಗಿದ್ದಾರೆ. ಆದರೂ, ಮಂಡ್ಯ ಕಡೆ ಮುಖ ಮಾಡುತ್ತಿಲ್ಲ. ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್‌ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಮರೆಯಾಗಿದ್ದಾರೆ. ಉಳಿದಂತೆ ಬಿಜೆಪಿ ನಾಯಕರು ಮಂಡ್ಯ ಕಡೆ ಬರುತ್ತಿಲ್ಲ. ಹೀಗಾಗಿ ನಗರಸಭೆ ಚುನಾವಣೆಗೆ ಬಿಜೆಪಿ ಪಾಳಯದೊಳಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 

 ಕಳೆದ ಚುನಾವಣೆಯಲ್ಲಿ ಹತ್ತು ಮಂದಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಈ ಬಾರಿಯೂ ಸ್ಪರ್ಧಾಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕಾರಣ ಎರಡೂ ಪಕ್ಷಗಳಲ್ಲಿ ಟಿಕೆಟ್‌ ವಂಚಿತರಾದವರು ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ. ಒಟ್ಟಾರೆ ಸ್ಥಳೀಯ ಸಂಸ್ಥೆ ಚುನಾವಣೆ ಕಣ ದಿನೇ ದಿನೆ ರಂಗೇರುತ್ತಿದ್ದು, ನಾಮಪತ್ರ ಸಲ್ಲಿಕೆ ದಿನದಿಂದ ಪ್ರಚಾರದ ಕಾವೇರಲಿದೆ.

ಟಾಪ್ ನ್ಯೂಸ್

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.