ತೋಟಗಾರಿಕೆ ವಿವಿಯಿಂದ ಕೆರಕಲಮಟ್ಟಿ ಗ್ರಾಮ ದತ್ತು 

Team Udayavani, Aug 9, 2018, 5:15 PM IST

9-agust-23.jpg

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮವನ್ನು ಇಲ್ಲಿನ ತೋಟಗಾರಿಕೆ ವಿವಿ ದತ್ತು ಪಡೆದಿದ್ದು, ಮಾದರಿ ಗ್ರಾಮವನ್ನಾಗಿ ರೂಪಿಸಲು ಹಲವು ಯೋಜನೆ ಹಾಕಿಕೊಂಡಿದೆ. ದತ್ತು ಪಡೆದ ಬಳಿಕ ಮೊದಲ ಕಾರ್ಯಕ್ರಮವಾಗಿ ಹಲಸಿನ ಆಂದೋಲನ ನಡೆಸಲಾಯಿತು. ರಾಜ್ಯಪಾಲರ ಹಾಗೂ ಕುಲಪತಿಗಳ ಆದೇಶದಂತೆ ರಾಜ್ಯದ ಪ್ರತಿ ವಿಶ್ವವಿದ್ಯಾಲಯಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಿಂದುಳಿದ ಒಂದು ಗ್ರಾಮದಲ್ಲಿ ವಿಶ್ವವಿದ್ಯಾಲಯದ ಮುಖ್ಯ ದ್ಯೇಯದ ಜ್ಞಾನ ಮತ್ತು ಪರಿಣತಿಯೊಂದಿಗೆ ಗ್ರಾಮವನ್ನು ಅಭಿವೃದ್ಧಿಪಡಿಸಿ ಮಾದರಿ ಗ್ರಾಮವನ್ನಾಗಿ ಮಾರ್ಪಾಡಿಸಲು ನಿರ್ದೇಶನ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೆರಕಲಮಟ್ಟಿ ಗ್ರಾಮ ದತ್ತು ಪಡೆಯಲಾಗಿದೆ.

ಗ್ರಾಮದಲ್ಲಿ ತೋಟಗಾರಿಕೆಯ ಅಭಿವೃದ್ಧಿಪರ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಪ್ರಾಥಮಿಕ ಹಂತದ ಸಮೀಕ್ಷೆಯನ್ನು ಬುಧವಾರ ಕೈಗೊಳ್ಳಲಾಯಿತು. ವಿವಿಯ ಮೂರನೇ ವರ್ಷದ ಸ್ನಾತಕ ವಿದ್ಯಾರ್ಥಿಗಳು ತಮ್ಮ ಪ್ರಾಯೋಗಿಕ ಕಲಿಕಾ ವಿಷಯದಲ್ಲಿ ತೊಡಗಿಸಿಕೊಳ್ಳಲು ಕೆರಕಲಮಟ್ಟಿ ಗ್ರಾಮದ ಪ್ರಾಥಮಿಕ ಹಂತದ ಸಮೀಕ್ಷೆಯಲ್ಲಿ ಕೆಲವು ರೈತರ ಮನೆಗಳಿಗೆ ಹಾಗೂ ಕ್ಷೇತ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.

ಗ್ರಾಮದಲ್ಲಿ ತೋಟಗಾರಿಕೆ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಹಲಸಿನ ಆಂದೋಲನದಡಿ ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಹಲಸಿನ ಮಹತ್ವ ಹಾಗೂ ಹಲಸಿನ ಬೆಳೆ ಉತ್ಪಾದನಾ ತಾಂತ್ರಿಕತೆ ತಿಳಿಸಿಕೊಟ್ಟರು. ಆಯ್ದ 20 ಕೃಷಿಕರಿಗೆ ಉತ್ಕೃಷ್ಠ ಹಲಸಿನ ತಳಿಯ ಸಸಿಗಳನ್ನು ವಿಶ್ವವಿದ್ಯಾಲಯದ ಪ್ರಾತ್ಯಕ್ಷಿಕೆಯ ಕಾರ್ಯಕ್ರಮದಡಿ ವಿತರಿಸಿದರು. ತೋಟಗಾರಿಕೆ ವಿವಿಯ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಹಾಗೂ ವಿಸ್ತರಣಾ ಮುಂದಾಳು ಡಾ| ಶಶಿಕುಮಾರ ಎಸ್‌. ಮಾತನಾಡಿ, ಹಲಸಿನ ಬೆಳೆಯು ನವ ಕಲ್ಪವೃಕ್ಷವಾಗಿದೆ. ಉಷ್ಣ ಹಾಗೂ ಸಮಶೀತೋಷ್ಣ ವಲಯದಲ್ಲಿ ಉತ್ತಮವಾಗಿ ಬೆಳೆಯಬಹುದೆಂದು ತಿಳಿಸಿದರು.

ಸಸಿ ನಾಟಿಯ 4 ವರ್ಷಗಳ ನಂತರದಲ್ಲಿ 25ರಿಂದ 30 ಕೆ.ಜಿ. ಗಾತ್ರದ ಹಣ್ಣುಗಳನ್ನು 25 ರಿಂದ 100ಸಂಖ್ಯೆ ಹಣ್ಣುಗಳನ್ನು ಪ್ರತಿ ಗಿಡದಿಂದ ಪಡೆಯಬಹುದಾಗಿದೆ. ಉತ್ತಮ ನಿರ್ವಹಣೆಯಿಂದ 6 ವರ್ಷಗಳ ನಂತರದಲ್ಲಿ 50ರಿಂದ 100ಕೆಜಿ. ಗಾತ್ರದ ಹಣ್ಣುಗಳನ್ನು, 100 ರಿಂದ 200 ಸಂಖ್ಯೆ ಹಣ್ಣು ಪ್ರತಿ ಗಿಡದಿಂದ ಪಡೆಯಬಹುದಾಗಿದೆ ಎಂದರು. ಸಹಾಯಕ ಪ್ರಾಧ್ಯಾಪಕ ಡಾ| ಶ್ರೀಪಾದ ವಿಶ್ವೇಶ್ವರ, ಡಾ| ವಾಸಿಂ ಎಮ್‌.ಎ. ಹಾಗೂ ಡಾ|ಲೀಲಾವತಿ ಅವರು 85 ಸ್ನಾತಕ ವಿದ್ಯಾರ್ಥಿಗಳ ಸಹಾಯದೊಂದಿಗೆ ಗ್ರಾಮದ ಪ್ರಾಥಮಿಕ ಸಮೀಕ್ಷೆ ಕೈಗೊಳ್ಳಲು ಸಹಕರಿಸಿದರು.

ಗ್ರಾಮದ ರೈತರು ಸಮೀಕ್ಷೆಯಲ್ಲಿ ಹಾಗೂ ಆಂದೋಲನದಲ್ಲಿ ಭಾಗವಹಿಸಿ ಹಲಸಿನ ಹಣ್ಣಿನ ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ಆಗುವ ಲಾಭಗಳಾದ ಮನುಷ್ಯನ ದೇಹದ ರೋಗದ ನಿರೋಧಕತೆ ಹೆಚ್ಚಿಸುವ, ಜೀರ್ಣ ಕ್ರಿಯೆ ಹೆಚ್ಚಿಸುವ, ಕ್ಯಾನ್ಸರ್‌ ರೋಗ ದೂರಮಾಡುವ, ಕಣ್ಣಿನ ಹಾಗೂ ಚರ್ಮದ ಆರೋಗ್ಯ ವೃದ್ಧಿಸುವ, ಅಧಿಕ ರಕ್ತದೊತ್ತಡ ನಿರ್ವಹಣೆ, ಅಸ್ಥಮಾ ಹಾಗೂ ಥೈರ್ಯಾಡ್‌ ಸಮಸ್ಯೆ ತಡೆಯುವ, ಮನುಷ್ಯನ ಮೊಳೆಗಳನ್ನು ಗಟ್ಟಿಗೊಳಿಸುವ ಹಾಗೂ ರಕ್ತಹೀನತೆ ಹೋಗಲಾಡಿಸುವ ಅದ್ಭುತ ಶಕ್ತಿಯನ್ನು ಹಲಸಿನ ಹಣ್ಣು ದೊರಕಿಸಿಕೊಡುತ್ತದೆ ಎಂದು ವಿವರಿಸಲಾಯಿತು. ಹಲಸಿನ ಆಂದೋಲನದಡಿ 2018-19 ರ ಸಾಲಿನಲ್ಲಿ ಇನ್ನು ಕೆಲವು ಆಯ್ದ ಗ್ರಾಮಗಳಲ್ಲಿ ಕೈಗೊಳ್ಳುವುದಾಗಿ ವಿವಿಯ ಅಧಿಕಾರಿಗಳು ತಿಳಿಸಿದರು. 

ಟಾಪ್ ನ್ಯೂಸ್

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.