ಎನರ್ಜಿ ಕ್ಯಾಲ್ಕ್ಯುಲೇಟರ್ ವೆಬ್ಟೂಲ್ ಬಿಡುಗಡೆ
Team Udayavani, Aug 10, 2018, 6:00 AM IST
ಬೆಂಗಳೂರು: ಇಂಧನ ಭದ್ರತೆ ಹಾಗೂ ಇಂಧನ ಸದ್ಬಳಕೆಗೆ ಯೋಜನೆ ರೂಪಿಸಲು ಪೂರಕವಾದ “ಕರ್ನಾಟಕ ಸ್ಟೇಟ್ ಎನರ್ಜಿ ಕ್ಯಾಲ್ಕ್ಯುಲೇಟರ್ 2050′ ವೆಬ್ಟೂಲ್ ಅನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ಬಿಡುಗಡೆಗೊಳಿಸಿದರು.
ಗುರುವಾರ ತಮ್ಮನ್ನು ಭೇಟಿಯಾದ ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ ಡಾಮ್ನಿಕ್ ಅಸ್ಕ್ವಿತ್ ಅವರೊಂದಿಗೆ ಮಾತುಕತೆ ನಡೆಸಿದ ಅವರು, ಬಳಿಕ ಬ್ರಿಟನ್ನಿನ ಸಹಯೋಗದಲ್ಲೇ ರಚನೆಯಾಗಿರುವ ಎನರ್ಜಿ ಕ್ಯಾಲ್ಕ್ಯುಲೇಟರ್ ವೆಬ್ಟೂಲ್ ಅನಾವರಣಗೊಳಿಸಿದರು.
ಬಳಿಕ ಮಾತನಾಡಿದ ಡಾಮ್ನಿಕ್ ಅಸ್ಕ್ವಿತ್, ಆಂಧ್ರಪ್ರದೇಶ, ಗುಜರಾತ್ ಹಾಗೂ ಅಸ್ಸಾಂ ರಾಜ್ಯಗಳ ಬಳಿಕ ಕರ್ನಾಟಕವು ಎನರ್ಜಿ ಕ್ಯಾಲ್ಕುéಲೇಟರ್ ವೆಬ್ಟೂಲ್ ವ್ಯವಸ್ಥೆ ರೂಪಿಸಿದ ನಾಲ್ಕನೇ ರಾಜ್ಯವಾಗಿದೆ. ಮಹಾರಾಷ್ಟ್ರ, ತಮಿಳುನಾಡು ರಾಜ್ಯದಲ್ಲೂ ಈ ವ್ಯವಸ್ಥೆ ಸಿದ್ಧವಾಗುತ್ತಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಇಂಧನ ಬಳಕೆ, ಇಂಗಾಲದ ಪ್ರಮಾಣ ಲೆಕ್ಕ ಹಾಕಲು ಅನುಕೂಲವಾಗಲಿದೆ. ಇದನ್ನು ರಾಜ್ಯಗಳ ಅಗತ್ಯಕ್ಕೆ ತಕ್ಕಂತೆ ರೂಪಿಸಲಾಗಿದೆ ಎಂದು ಹೇಳಿದರು.
ನೀತಿ ಆಯೋಗವು 2015ರಲ್ಲಿ ಬ್ರಿಟನ್ನಿನ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದ ಇಂಡಿಯಾ ಎನರ್ಜಿ ಸೆಕ್ಯುರಿಟಿ ಸಿನಾರಿಯೋ 2047′ ವೆಬ್ಟೂಲ್ ಮಾದರಿಯಲ್ಲಿ ರಾಜ್ಯ ಮಟ್ಟದ ಎನರ್ಜಿ ಕ್ಯಾಲ್ಕ್ಯುಲೇಟರ್ ರೂಪಿಸಲಾಗಿದೆ. ಕರ್ನಾಟಕವು ಅತಿ ಹೆಚ್ಚು ನವೀಕರಿಸಬಹುದಾದ ಇಂಧನ ಉತ್ಪಾದಿಸುವ ರಾಜ್ಯವಾಗಿದೆ. ಪಾವಗಡದ ಸೌರ ಪಾರ್ಕ್ ಮಾದರಿಯಲ್ಲಿ ಮುಂದಿನ ದಿನಗಳಲ್ಲಿ ಬ್ರಿಟನ್ನಿನ ಸಹಯೋಗದಲ್ಲಿ ಇನ್ನಷ್ಟು ಯೋಜನೆಗಳಿಗೆ ಕೈಜೋಡಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನಲ್ಲಿರುವ ಬ್ರಿಟಿಷ್ ಡೆಪ್ಯುಟಿ ಹೈಕಮೀಷನರ್ ಡಾಮ್ನಿಕ್ ಮ್ಯಾಕ್ಅಲಿಸ್ಟರ್, ಬ್ರಿಟಿಷ್ ಕೌನ್ಸಿಲ್ನ ಅಧಿಕಾರಿಗಳು, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್ ಇತರರು ಉಪಸ್ಥಿತರಿದ್ದರು.
ಸಿಎಂ ಅಭಿನಂದನೆ
ಬ್ರಿಟಿಷ್ ಕೌನ್ಸಿಲ್ನ 70ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗಾಗಿ ಬ್ರಿಟನ್ನಿನಲ್ಲಿ ಒಂದು ವರ್ಷದ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತಶಾಸ್ತ್ರ (ಎಸ್ಟಿಇಎಂ) ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ನಡಿ ವಿದ್ಯಾರ್ಥಿ ವೇತನ ನೀಡುವ ಯೋಜನೆಗೆ 100 ಮಹಿಳೆಯರು ಆಯ್ಕೆಯಾಗಿದ್ದಾರೆ. ಇದರಲ್ಲಿ 15 ಮಹಿಳೆಯರು ಕರ್ನಾಟಕದವರಾಗಿದ್ದು, ಅವರನ್ನು ಎಚ್.ಡಿ.ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.