ಆಟಿ ವಿಶೇಷ ಗಂಜಿ, ಖಾದ್ಯ ಪ್ರದರ್ಶನ
Team Udayavani, Aug 10, 2018, 11:02 AM IST
ಬದಿಯಡ್ಕ : ಕರ್ಕಾಟಕ ಮಾಸದಲ್ಲಿಪ್ರಕೃತಿಯು ಔಷಧೀಯ ಗುಣಗಳಿಂದ ಕೂಡಿರುತ್ತದೆ. ಆದುದರಿಂದಲೇ ಆ ಸತ್ವವನ್ನು ಸ್ವೀಕರಿಸಿ ಶಾರೀರಿಕ ಮಾನಸಿಕ ಆರೋಗ್ಯವನ್ನು ಸುದೃಢಗೊಳಿಸುವ ನಿಟ್ಟಿನಲ್ಲಿ ಪ್ರಾಕೃತಿಕವಾಗಿ ದೊರೆಯುವ ವಸ್ತುಗಳನ್ನು ಉಪಯೋಗಿಸಿ ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಿ ಸೇವಿಸುವುದು ರೂಢಿ ಎಂದು ಬದಿಯಡ್ಕ ಪಂಚಾಯತ್ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಹೇಳಿದರು.
ಅವರು ಬದಿಯಡ್ಕ ಗ್ರಾಮ ಪಂಚಾಯತ್ ಕುಟುಂಬಶ್ರೀ ಸಿಡಿಎಸ್ ಸಂಯುಕ್ತ ಆಶ್ರಯದಲ್ಲಿ ಬದಿಯಡ್ಕ ಪಂಚಾಯತ್ ಸಮೀಪ ಜರ ಗಿದ ಆಟಿ ವಿಶೇಷ ಗಂಜಿ ಹಾಗೂ ಖಾದ್ಯಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ವೈವಿಧ್ಯಮಯವಾದ, ಶುಚಿ ರುಚಿಯ ಹತ್ತಾರು ಆಹಾರಗಳನ್ನು ಸಿಹಿ, ಖಾರ, ಹುಳಿ ರುಚಿಯಲ್ಲಿ ಬಾಯಲ್ಲಿ ನೀರೂರಿಸುವಂತೆ ಜೋಡಿಸಿಡಲಾಗಿತ್ತು. ಆರೋಗ್ಯಕ್ಕೆ ಸ್ಫೂರ್ತಿದಾಯಕವಾದ ಆಹಾರ ಪದಾರ್ಥಗಳ ಸೇವನೆಯಿಂದ ಆರೋಗ್ಯ ಭಾಗ್ಯವನ್ನು ವರ್ಧಿಸ ಬಹುದಾಗಿದೆ. ಆಧುನಿಕತೆ ನಮ್ಮ ಬದುಕು ಮತ್ತು ಆಹಾರ ಪದ್ಧತಿಯನ್ನು ನಿಯಂತ್ರಿಸುತ್ತಿರುವ ಈ ಕಾಲಘಟ್ಟದಲ್ಲಿ ಆಟಿ ತಿಂಗಳ ಮಹತ್ವವನ್ನು ಅರಿತು ನಡೆಯಬೇಕಾದ ಅಗತ್ಯವಿದೆ ಎಂದರು.
ಪಂ. ಉಪಾಧ್ಯಕ್ಷೆ ಸೈಬುನ್ನಿಸ ಅಧ್ಯಕ್ಷತೆ ವಹಿಸಿದರು. ಸ್ಥಾಯೀ ಸಮಿತಿ ಅಧ್ಯಕ್ಷ ಶಾಮ್ ಪ್ರಸಾದ್ ಮಾನ್ಯ, ಪಂ. ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಎಲ್.ಎನ್.ಪೈ, ಜಯಂತಿ, ಡಿ.ಶಂಕರ, ವಿಶ್ವನಾಥ ಪ್ರಭು, ಅನಿತಾ ಕ್ರಾಸ್ತಾ, ಪ್ರೇಮಾ, ರಾಜೇಶ್ವರಿ, ಸಿ.ಡಿ.ಎಸ್. ಅಧ್ಯಕ್ಷೆ ಸುಧಾ ಜಯರಾಮ್, ಲೀಲಾವತಿ, ಗ್ರೇಸಿ, ಉಷಾ ಪಳ್ಳತ್ತಡ್ಕ, ಮಮತಾ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.