ತಲೆಕೆಳಗಾಗಿ ತ್ರಿವರ್ಣ ಧ್ವಜ ಹಾರಿಸಿದ ಉತ್ತರಾಖಂಡ ಕಾಂಗ್ರೆಸ್ ನಾಯಕರು
Team Udayavani, Aug 10, 2018, 11:05 AM IST
ಡೆಹರಾಡೂನ್ : ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಉತ್ತರಾಖಂಡ ಕಾಂಗ್ರೆಸ್ ನಾಯಕರು ಮತ್ತು ಪದಾಧಿಕಾರಿಗಳು ನಡೆಸಿದ ರಾಲಿಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಚಿತ್ರ ಸಾಮಾಜಿಕ ಜಾಲ ಮಾಧ್ಯಮದಲ್ಲಿ ವೈರಲ್ ಆಗಿದ್ದು ಈ ಪ್ರಹಸನ ಕಾಂಗ್ರೆಸ್ ವರಿಷ್ಠರ ಕೆಂಗಣ್ಣಿಗೆ ಕಾರಣವಾಗಿದೆ.
ಉತ್ತರಾಖಂಡ ಕಾಂಗ್ರೆಸ್ ನಾಯಕರು ಚಲೇ ಜಾವ್ ಚಳವಳಿಯ 76ನೇ ವರ್ಷಾಚರಣೆ ಪ್ರಯುಕ್ತ ಮೆರವಣಿಗೆ ನಡೆಸಿದ್ದರು.
ಉತ್ತರಾಖಂಡದಲ್ಲಿ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸುವ ಪ್ರಯತ್ನದಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕರು ಆ ಉದ್ದೇಶಕ್ಕಾಗಿ ಸಂಘಟಿಸಿದ್ದರು.
2017ರ ಉತ್ತರಾಖಂಡ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಗೆದ್ದಿತ್ತು; ಅಂತೆಯೇ ತ್ರಿವೇಂದ್ರ ಸಿಂಗ್ ರಾವತ್ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿತ್ತು.
71 ಸ್ಥಾನ ಬಲದ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಅಂದು ಬಿಜೆಪಿ 57 ಸ್ಥಾನಗಳನ್ನು ಜಯಿಸಿತ್ತು. ಕಾಂಗ್ರೆಸ್‌ಗೆ ಕೇವಲ 11 ಸ್ಥಾನಗಳು ಮಾತ್ರವೇ ದಕ್ಕಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.