ದೊಡ್ಡಾಲದ ಮರ ಅಭಿವೃದ್ಧಿಗೆ ಚಾಲನೆ
Team Udayavani, Aug 10, 2018, 12:15 PM IST
ಕೆಂಗೇರಿ: ರಾಜ್ಯ ಪ್ರವಾಸೋದ್ಯಮ ಇಲಾಖೆ ನೀಡುವ ಒಂದು ಕೋಟಿ ರೂ. ವಿಶೇಷ ಅನುದಾನ ಬಳಸಿ ದೊಡ್ಡ ಆಲದಮರ ಪ್ರವಾಸಿ ತಾಣದ ಅಬಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.
ಚುಂಚುನಗುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಚ್ಚ ಅರಸಯ್ಯನ ಪಾಳ್ಯ, ಕೇತೋಹಳ್ಳಿಯ ಕಾಂಕ್ರೀಟ್ ರಸ್ತೆ ಕಾಮಗಾರಿ ಹಾಗೂ ದೊಡ್ಡ ಆಲದಮರ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಗುರುವಾರ ಭೂಮಿ ಪೂಜೆ ನೇರವೇರಿಸಿ ಮಾತನಾಡಿ, ಅರಣ್ಯ ಕಾಯಿದೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಖ್ಯ ಪ್ರವೇಶ ದ್ವಾರವನ್ನು ಸುಂದರವಾಗಿ ನಿರ್ಮಿಸಲಾಗುತ್ತಿದೆ. ಜತೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಆಲದಮರದ ಸುತ್ತ ಒಡಾಡಲು ಪಾದಚಾರಿ ಮಾರ್ಗ ನಿರ್ಮಿಸಲಾಗುತ್ತಿದೆ ಎಂದರು.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿಜಯ್‌ಕುಮಾರ್, ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಇಂಜಿನಿಯರ್ ವೆಂಕಟೇಶ್, ತಾ.ಪಂ ಸದಸ್ಯರಾದ ವೆಂಕಟಮ್ಮ, ರೇವಣಸಿದ್ದಯ್ಯ, ಲೋಕೇಶ್, ಗಂಗರೇವಣ್ಣ, ಶಂಭುಲಿಂಗಯ್ಯ, ಕುಮಾರ್, ರಮೇಶ್, ಪುಟ್ಟರಾಜು, ರುದ್ರೇಶ್, ಸೂಲಿವಾರ ಬಸವರಾಜು, ಚೇತನ್, ಮೋಹನ್, ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.