ರಾಜ್ಯದ ಕಾಂಗ್ರೆಸ್ ಶಾಸಕರು ಮಾರಾಟದ ವಸ್ತುಗಳು
Team Udayavani, Aug 10, 2018, 12:32 PM IST
ಮೈಸೂರು: ಕಾಂಗ್ರೆಸ್ ಶಾಸಕರು ಮಾರಾಟದ ವಸ್ತುಗಳಾಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರು ಹಾಗೂ ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ ಎಂದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟಾಂಗ್ ನೀಡಿದರು.
ನಗರದ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾವು ಯಾವುದೇ ಕಾಂಗ್ರೆಸ್ ಶಾಸಕರನ್ನು ಸರ್ಕಾರ ಬೀಳಿಸೋಣಾ ಬನ್ನಿ ಎಂದು ಕರೆದಿಲ್ಲ.
ಬಿಜೆಪಿ ನಾಯಕರು ಕರೆದ ಕೂಡಲೇ ನಮ್ಮೊಂದಿಗೆ ಬರುವಷ್ಟು ಕಾಂಗ್ರೆಸ್ ಶಾಸಕರು ದುರ್ಬಲರೇ? ಎಂದು ಪ್ರಶ್ನಿಸಿದ ಅವರು, ಬಿಜೆಪಿ ಶಾಸಕರು ಸಿಂಹ ರೂಪದವರಾಗಿದ್ದು, ನಮ್ಮ ಒಬ್ಬ ಶಾಸಕರನ್ನು ಮುಟ್ಟಲಿ ನೋಡೋಣಾ ಎಂದ ಈಶ್ವರಪ್ಪ, ಕಾಂಗ್ರೆಸ್ ಶಾಸಕರ ಬಗ್ಗೆ ಅವರ ಅಧ್ಯಕ್ಷರಿಗೆ ನಂಬಿಕೆ ಇಲ್ಲದಂತಾಗಿ¨ರಾಜ್ಯದಲ್ಲಿ ಸರ್ಕಾರ ಇದೆ ಎಂಬ ಭಾವನೆ ಯಾರಿಗೂ ಇಲ್ಲದಂತಾಗಿದೆ.
ಎಲ್ಲಾ ಹಂತದ ಅಧಿಕಾರಿಗಳ ವರ್ಗಾವಣೆಗೆ ಲಂಚ ಪಡೆಯುತ್ತಿದ್ದಾರೆ. ಅಧಿಕಾರಿಗಳು ಯಾವ ಕ್ಷಣದಲ್ಲಿ ಈ ಸರ್ಕಾರ ಬೀಳುತ್ತೋ, ಯಾವ ಕ್ಷಣದಲ್ಲಿ ನಮ್ಮ ವರ್ಗಾವಣೆ ಆಗುತ್ತೋ ಎಂಬ ಆತಂಕದಲ್ಲಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಕಣ್ಮುಚ್ಚಿ ಕುಳಿತಿರುವುದು ಒಳ್ಳೆಯದಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ. ರಾಜೇಂದ್ರ, ಆನೇಕಲ್ ದೊಡ್ಡಯ್ಯ, ಶಿವಕುಮಾರ್, ಜೋಗಿ ಮಂಜು, ಸುರೇಶ್ ಬಾಬು ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.