ಮುಚ್ಚುವ ಹಂತದಲ್ಲಿದ್ದ ಕನ್ನಡ ಶಾಲೆಯಲ್ಲೀಗ 85 ವಿದ್ಯಾರ್ಥಿಗಳು

Team Udayavani, Aug 10, 2018, 12:47 PM IST

10-agust-12.jpg

ಕಾರ್ಕಳ: ಕನ್ನಡ ಮಾಧ್ಯಮ ಶಾಲೆಗಳು ದಿನೇದಿನೇ ಮುಚ್ಚುತ್ತಿದ್ದರೂ ಕಾರ್ಕಳ ತಾಲೂಕಿನ ಬೋಳ ಕೋಡಿಯಲ್ಲಿರುವ ಇರುವ ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಶ್ರಮದೊಂದಿಗೆ ಬಹಳ ಉತ್ತಮವಾಗಿ ಕಾರ್ಯನಿರ್ವಸುತ್ತಿದೆ.

1926ರಲ್ಲಿ ಸ್ಥಾಪಿತವಾದ ಈ ಶಾಲೆಯು 1991ರಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಮುಚ್ಚುವ ಹಂತಕ್ಕೆ ಬಂದು ತಲುಪಿತ್ತು. ಅಂದು ಸುಮಾರು 1 ವರ್ಷದ ಕಾಲ ಬೋಳಕೋಡಿಯ ಮೃತ್ಯುಂಜಯರುದ್ರ ಸೋಮನಾಥೇಶ್ವರ ದೇವಸ್ಥಾನದ ಅಂಗಣದಲ್ಲಿ ಮೇಲ್ಛಾವಣಿ ಇಲ್ಲದೆ ಟರ್ಪಾಲು ಹೊದೆಸಿಕೊಂಡು ತರಗತಿಗಳು ನಡೆದವು. 1992ರ ಎಪ್ರಿಲ್‌ 11ರಂದು ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್‌. ವಿನಯ ಹೆಗ್ಡೆ ಅವರನ್ನು ಶಿಕ್ಷಕಿಯರ ತಂಡವು ಭೇಟಿ ಮಾಡಿ ಶಾಲೆಯ ಉಳಿವಿಗಾಗಿ ಪ್ರೋತ್ಸಾಹಿಸುವಂತೆ ಮನವಿ ಮಾಡಿತು. ಅಂದು ವಿನಯ ಹೆಗ್ಡೆ ಅವರು ಈ ಶಾಲೆಯನ್ನು ಮುಂದುವರಿಸಲು ಬೇಕಾದ ಎಲ್ಲ ಬೆಂಬಲವನ್ನು ನಿಟ್ಟೆ ಸಂಸ್ಥೆ ನೀಡಲಿದೆ ಎಂಬ ಭರವಸೆ ನೀಡಿದ್ದರು.

15 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ
ಅವರ ಭರವಸೆ ಶಾಲೆಯ ಅಭಿವೃದ್ಧಿಗೆ ಮಹತ್ವದ ತಿರುವು ನೀಡಿತು. ಬೋಳಕೋಡಿ ಗ್ರಾಮದ ಕೆ.ಎಂ. ಶೆಟ್ಟಿ ಅವರು ಶಾಲಾ ಕಟ್ಟಡಕ್ಕೆ ಬೇಕಾದ ಸ್ಥಳವನ್ನು ದಾನಮಾಡಿದರು. 1995ರಲ್ಲಿ ಸುಮಾರು 15 ಲಕ್ಷ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿ ಶಾಲಾ ಚಟುವಟಿಕೆಗಳು ಪ್ರಾರಂಭಗೊಂಡವು.

ಶಾಲಾ ಸಂಚಾಲಕ ವಿಶಾಲ್‌ ಹೆಗ್ಡೆ ಅವರ ಮುಂದಾಳತ್ವದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಎಂ. ವಿಮಲಾ ಅವರ ಮಾರ್ಗದರ್ಶನದಲ್ಲಿ ಪ್ರಸ್ತುತ ಮುಖ್ಯೋಪಾಧ್ಯಾಯ ಎ. ಆರ್‌. ಲಕ್ಕುಂಡ ಅವರ ನೇತೃತ್ವದಲ್ಲಿ ಒಟ್ಟು 7 ಮಂದಿ ಶಿಕ್ಷಕ/ಶಿಕ್ಷಕಿಯರು ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

ಸದ್ಯ ಶಾಲೆಯಲ್ಲಿ ಸುಮಾರು 85 ಮಂದಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಕಡಂದಲೆ, ಸಚ್ಚರಿಪೇಟೆ, ಕಲ್ಲೋಳಿ, ಅಂಬರಾಡಿ, ಬೊಮ್ಮಲಗುಡ್ಡೆ ಭಾಗದಿಂದ ಬರುವ ಸುಮಾರು 60 ಮಕ್ಕಳಿಗೆ ಶಾಲಾ ಬಸ್ಸಿನ ವ್ಯವಸ್ಥೆಯನ್ನೂ ನಿಟ್ಟೆ ವಿದ್ಯಾ ಸಂಸ್ಥೆಯ ವತಿಯಿಂದ ಮಾಡಲಾಗಿದೆ.

ಹಲವು ವರ್ಷಗಳಿಂದ ನಿಟ್ಟೆ ವಿದ್ಯಾ ಸಂಸ್ಥೆಯ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕವನ್ನು ದೇಣಿಗೆಯಾಗಿ ನೀಡಲಾಗುತ್ತಿದೆ. ಅನುದಾನಿತ ಶಾಲೆಯಾಗಿರುವ ಕಾರಣ ಇಲ್ಲಿ ಸರಕಾರದ ಬಿಸಿಯೂಟ, ಹಾಲು ವಿತರಣೆ ಮುಂತಾದ ಪೌಷ್ಟಿಕ ಆಹಾರಗಳನ್ನೂ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಮಾನಸಿಕ, ಶಾರೀರಿಕ, ಸಾಂಸ್ಕೃತಿಕ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಗುಣಮಟ್ಟದ ಶಿಕ್ಷಣ
ಗ್ರಾಮೀಣ ಪ್ರದೇಶದಲ್ಲಿ ಸುಸಂಸ್ಕೃತ ಹಾಗೂ ಉತ್ತಮ ಗುಣಮಟ್ಟದ ಕನ್ನಡ ಮಾಧ್ಯಮ ಶಿಕ್ಷಣ ನೀಡಬಲ್ಲ ಶಾಲೆಗಳ ಅಗತ್ಯವಿದೆ. ಗುಣಮಟ್ಟದ ಶಿಕ್ಷಣ ಪಡೆಯುವ ಇಚ್ಛೆಯಲ್ಲಿರುವ ವಿದ್ಯಾರ್ಥಿಗಳು ಈ ಶಾಲೆಗೆ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಸಂತಸದ ವಿಚಾರ. ಈ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ವಿವಿಧ ದೇಶಗಳಲ್ಲಿ ಉತ್ತಮ ಹುದ್ದೆಗಳಲ್ಲಿ ಉದ್ಯೋಗದಲ್ಲಿರುವುದು ಶಾಲೆಯ ಶಿಕ್ಷಣದ ಗುಣಮಟ್ಟಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.