ಜಿಲ್ಲೆ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಲಿ
Team Udayavani, Aug 10, 2018, 1:20 PM IST
ದಾವಣಗೆರೆ: ಎಲ್ಲಾ ಶಾಸಕರು, ಜನಪ್ರತಿನಿಧಿಗಳ ಸಹಕಾರದೊಂದಿಗೆ ಸರ್ಕಾರದಿಂದ ಜಿಲ್ಲೆಯಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯ, ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಶ್ರೀನಿವಾಸ್(ವಾಸು) ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಮೊದಲ ಬಾರಿ ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಎಲ್ಲಾ ಇಲಾಖೆಗಳ ಮಾಹಿತಿ ಜೊತೆಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸರ್ಕಾರದಿಂದ ಪ್ರತಿ ಇಲಾಖೆಗೆ ಬರಬೇಕಾಗಿರುವ ಅನುದಾನ, ಆಗಬೇಕಿರುವ ಮಂಜೂರಾತಿ ಒಳಗೊಂಡಂತೆ ಯಾವುದೇ ರೀತಿಯ ಸಮಸ್ಯೆಯೇ ಇರಲಿ ಅಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ತಮ್ಮ ಗಮನಕ್ಕೆ ತರಬೇಕು. ಸಂಬಂಧಿತರೊಂದಿಗೆ ಚರ್ಚಿಸಿ, ಅನುದಾನ ಬಿಡುಗಡೆ, ಅನುಮೋದನೆ, ಮಂಜೂರಾತಿಗೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.
ಮುಂದೆ ಪ್ರತಿ ತಿಂಗಳು 3-4 ಬಾರಿ ಜಿಲ್ಲೆಗೆ ಭೇಟಿ ನೀಡುತ್ತೇನೆ. ಯಾವುದೇ ರೀತಿಯ ಸಮಸ್ಯೆ ಇರಲಿ ಪರಿಹರಿಸಲು ಪ್ರಾಮಾಣಿಕ ಪ್ರಯತ್ನಿಸುವೆ. ಜಿಲ್ಲೆಯ ಶಾಸಕರು ಸಹ ತಮ್ಮೊಂದಿಗೆ ಕೈ ಜೋಡಿಸಬೇಕು. ಮುಖ್ಯವಾಗಿ ಅಧಿಕಾರಿಗಳು ಚೆನ್ನಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಗೌರವ ಬರುತ್ತದೆ ಎಂದರು.
ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಟಿ.ಆರ್. ವೇದಮೂರ್ತಿ, ಕಪ್ಪುತಲೆ ಹುಳು ಬಾಧೆ ಬಗ್ಗೆ ಪ್ರಸ್ತಾಪಿಸಿ, ಕಪ್ಪುತಲೆ ಹುಳು ಒಂದು ತೆಂಗಿನಗರಿಯಲ್ಲಿ ಕಂಡು ಬಂದರೂ 5-6 ಗರಿ ಕತ್ತರಿಸಿ, ಸುಟ್ಟು ಹಾಕಬೇಕು. ಮೋನೋಕ್ರೋಟಾಫಾಸ್ ಸಿಂಪಡಿಸಬೇಕು ಎಂಬುದಾಗಿ ಕಪ್ಪುತಲೆ ಹುಳು ಬಾಧೆ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದಾಗ, ಒಣಕೊಬ್ಬರಿ ರಫಿಗೆ ವ್ಯವಸ್ಥೆ ಮಾಡಬಹುದಿತ್ತಿಲ್ಲ ಎಂದು ಸಚಿವರು ಪ್ರಶ್ನಿಸಿದರು. ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದಲ್ಲಿ ನೀರಾ ಘಟಕ ಪ್ರಾರಂಭಿಸುವ ಚಿಂತನೆ ಇದೆ ಎಂದು ವೇದಮೂರ್ತಿ ತಿಳಿಸಿದರು.
ದಾವಣಗೆರೆ ನಗರದಲ್ಲಿ 386 ಒಳಗೊಂಡಂತೆ ಜಿಲ್ಲೆಯಲ್ಲಿ 630 ಅಂಗನವಾಡಿ ಕೇಂದ್ರಗಳಿಗೆ ಕಟ್ಟಡ ಇಲ್ಲ. ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯಡಿ 200ಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳ ನಿರ್ಮಾಣ ನಡೆಯುತ್ತಿದೆ. ದಾವಣಗೆರೆ ನಗರದಲ್ಲೇ ನಿವೇಶನ ಸಮಸ್ಯೆ ಬಹಳ ಕಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್. ವಿಜಯ್‌ಕುಮಾರ್ ತಿಳಿಸಿದಾಗ, ಸ್ಮಾರ್ಟಸಿಟಿ ಯೋಜನೆಯಡಿ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಆಯುಕ್ತ ಮಂಜುನಾಥ್ ಬಳ್ಳಾರಿ, ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವರು ಸೂಚಿಸಿದರು.
ಅಂಬೇಡ್ಕರ್, ದೇವರಾಜ ಅರಸು ಅಭಿವೃದ್ಧಿ ನಿಗಮ ಒಳಗೊಂಡಂತೆ ಜಿಲ್ಲೆಯಲ್ಲಿ 548 ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಬೇಕಾಗಿದೆ ಎಂದು ಬೆಸ್ಕಾಂ ಸಹಾಯಕ ಇಂಜಿನಿಯರ್ ತಿಳಿಸಿದಾಗ, ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಿರುವ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವುದು ಸಾಕಷ್ಟು ತಡವಾಗುತ್ತಿದೆ. ವಿದ್ಯುತ್
ಸಂಪರ್ಕ ಕಲ್ಪಿಸುವ ಹೊತ್ತಿಗೆ ಬೋರ್‌ನಲ್ಲಿ ನೀರೇ ಖಾಲಿ ಆಗಿರುತ್ತದೆ. ಆ ರೀತಿ ಆಗಬಾರದು. ಪೈಲಟ್ ಯೋಜನೆಯಂತೆ ಬೋರ್ ಕೊರೆಸಿದ ವರ್ಷದಲ್ಲೇ ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಸಚಿವ ಶ್ರೀನಿವಾಸ್ ಸೂಚಿಸಿದರು.
ಜಿಲ್ಲೆಯಲ್ಲಿ 627 ಶಾಲಾ ಕೊಠಡಿಗಳು ಅತಿ ಶಿಥಿಲಾವಸ್ಥೆಯಲ್ಲಿವೆ. 350 ಕೊಠಡಿಗಳ ದುರಸ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಎಸ್. ಪರಮೇಶ್ವರಪ್ಪ ಮಾಹಿತಿ ನೀಡಿದರು. ಯಾವುದೇ ಸಂದರ್ಭದಲ್ಲಿ ಬೀಳಬಹುದಾದಂತಹ ಕೊಠಡಿಗಳನ್ನು ಕೆಡವಿ ಬಿಡಿ. ಯಾವುದೇ ರೀತಿಯ ಅನಾಹುತಕ್ಕೆ ಆಸ್ಪದ ಕೊಡಲೇಬೇಡಿ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ತಿಳಿಸಿದರು.
ನರೇಗಾ ಯೋಜನೆಯಡಿ ಅಕ್ಟೋಬರ್ 2 ರ ವೇಳೆಗೆ ಎಲ್ಲಾ ಶಾಲೆಯಲ್ಲಿ ಶೌಚಾಲಯ ನಿರ್ಮಾಣ ಮಾಡಬೇಕು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಪಟ್ಟಿಯಲ್ಲಿ ದಾವಣಗೆರೆ ಜಿಲ್ಲೆ ಟಾಪ್-10 ಪಟ್ಟಿಯ ಒಳಗಡೆ ಇರುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೃಷಿ, ಲೋಕೋಪಯೋಗಿ, ಮೀನುಗಾರಿಕೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಡಿ. ದೇವರಾಜ ಅರಸು ಅಭಿವೃದ್ಧಿ, ಸಹಕಾರ, ಸಾರಿಗೆ, ಭೂ ಮತ್ತು ಗಣಿ ವಿಜ್ಞಾನ, ನೋಂದಣಿ, ಅಬಕಾರಿ, ಕನ್ನಡ ಮತ್ತು ಸಂಸ್ಕೃತಿ, ಅರಣ್ಯ… ಹೀಗೆ ಪ್ರತಿ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ| ಎನ್. ಲಿಂಗಣ್ಣ, ಎಸ್. ರಾಮಪ್ಪ, ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷೆ ಸವಿತಾ ಕಲ್ಲೇಶಪ್ಪ, ಜಿಲ್ಲಾ ರಕ್ಷಣಾಧಿಕಾರಿ ಆರ್. ಚೇತನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಎಸ್. ಅಶ್ವತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.