ದೇಗುಲ ಸ್ವತ್ಛತಾ ಅಭಿಯಾನ
Team Udayavani, Aug 10, 2018, 3:10 PM IST
ಸಿರುಗುಪ್ಪ: ದೇವಸ್ಥಾನದ ಪರಿಸರ ಹಾಗೂ ಸಮುದಾಯ ಭವನಗಳನ್ನು ಶುಚಿಯಾಗಿಸಿ, ಸ್ವತ್ಛಗೊಳಿಸುವ ಮೂಲಕ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇಲ್ಲಿನ ಪರಿಸರದಲ್ಲಿನ ಸ್ವತ್ಛತೆ ನೋಡಿ ಭಕ್ತಿಯಿಂದ ಕೆಲ ಸಮಯ ಜ್ಞಾನಾಸ್ತರಾಗಿ ನೆಮ್ಮದಿ ಕಂಡುಕೊಳ್ಳುವಂತ ವಾತಾವರಣ ನಿರ್ಮಿಸಬೇಕೆಂದು ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಆರ್.ಭಾರತಿ ಅಭಿಪ್ರಾಯಪಟ್ಟರು.
ತಾಲೂಕಿನ ಶಾಲಿಗನೂರು ಗ್ರಾಮದ ಶ್ರೀರಾಮಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವತ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಂದು ಗ್ರಾಮದಲ್ಲಿನ ದೇವಸ್ಥಾನವನ್ನು ನಮ್ಮ ಸಂಸ್ಥೆಯ ಸದಸ್ಯರು ಸ್ವತ್ಛಗೊಳಿಸುವ ಕಾರ್ಯವನ್ನು ನಡೆಸಲಿದ್ದಾರೆ.
ದೇವಸ್ಥಾನದ ಪರಿಸರದಲ್ಲಿ ನಿರ್ಮಲ, ಪ್ರಶಾಂತ ವಾತಾವರಣ ನಿರ್ಮಾಣ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು. ರಾರಾವಿ ಗ್ರಾಪಂ ಸದಸ್ಯೆ ಯಶೋಧ, ಮುಖಂಡ ಆರ್.ಶಿವಪ್ಪ, ಸೇವಾ ಪ್ರತಿನಿಧಿ ವಾಣಿಶ್ರೀ ಹಾಗೂ ಗ್ರಾಮದ ಮಹಿಳಾ ಸದಸ್ಯರು ಭಾಗವಹಿಸಿದ್ದರು.
ಹುಲಿಕೆರೆ ಶ್ರೀಕಲ್ಲೇಶ್ವರ ದೇವಸ್ಥಾನದಲ್ಲಿ ಸ್ವತ್ಛ
ಕೂಡ್ಲಿಗಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಹುಲಿಕೆರೆ ಗ್ರಾಮದ ಪ್ರಗತಿಬಂಧು ಸ್ವ ಸಹಾಯ ಸಂಘದ ಮಹಿಳಾ ಸದಸ್ಯರು ಐತಿಹಾಸಿಕ ಶ್ರೀಕಲ್ಲೇಶ್ವರ ದೇವಸ್ಥಾನ ಮತ್ತು ಆವರಣದ ಪರಿಸರ ಸ್ವತ್ಛತಾ ಕಾರ್ಯ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯೋಜನೆಯ ಕ್ಷೇತ್ರ ಮೇಲ್ವಿಚಾರಕ ರಮೇಶ್, ಚಾಲುಕ್ಯರ ಕಾಲದ ಆಡಳಿತಾವಧಿಯಲ್ಲಿ ನಿರ್ಮಿಸಲಾದ ಕಲ್ಲೇಶ್ವರ ದೇವಾಲಯವು ಐತಿಹಾಸಿಕ ಮಹತ್ವ ಪಡೆದಿದೆ. ಈ ದೇವಾಲಯವನ್ನು ಸಂರಕ್ಷಣಾ ದೃಷ್ಟಿಯಿಂದ ಮಹತ್ವದಾಗಿದ್ದು, ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಿಂದ ಲಕ್ಷಾಂತರ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಕಾರ್ಯ ಕೈಗೊಂಡು ದುರಸ್ತಿ ಮಾಡಿಸಿದ ಕೀರ್ತಿ ಧರ್ಮಸ್ಥಳ ಧರ್ಮಾಧಿಕಾರಿಗಳಿಗೆ ಸಲ್ಲುತ್ತದೆ. ಅವರು ಕೈಗೊಂಡ ಕಾರ್ಯಗಳಂತೆ ನಾವು ಇಂದು ದೇವಾಲಯ ಸ್ವತ್ಛತೆ ಮಾಡಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರ ಪರಸನಗೌಡ, ಸೇವಾ ಪ್ರತಿನಿಧಿ ಕಮಲಮ್ಮ, ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ಮಂಜುನಾಥ್, ಒಕ್ಕೂಟದ ಅಧ್ಯಕ್ಷ ಕಲ್ಲೇಶಪ್ಪ, ಸೇರಿದಂತೆ ಸಂಘದ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.