ಗೋವಾ ಅಧಿಕಾರಿಗಳ ತಡೆದಿದ್ದಕ್ಕೆ ಕಾನೂನು ಹೋರಾಟ: ಪಾಲೇಕರ್
Team Udayavani, Aug 11, 2018, 7:00 AM IST
ಪಣಜಿ: ಮಹದಾಯಿ ನದಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಛಾಯಾಚಿತ್ರ ತೆಗೆಯಲು ಕಣಕುಂಬಿಗೆ ತೆರಳಿದ್ದ ಗೋವಾ ಅಧಿಕಾರಿಗಳ ತಂಡವನ್ನು ಕರ್ನಾಟಕ ಪೊಲೀಸರು ಐಬಿಗೆ ಕರೆದೊಯ್ದ ಪ್ರಕರಣವನ್ನು ಗೋವಾ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಗೋವಾ ಜಲಸಂಪನ್ಮೂಲ ಸಚಿವ ವಿನೋದ ಪಾಲೇಕರ್ ಈ ಕುರಿತಂತೆ ರಾಜ್ಯದ ಅಡ್ವೋಕೇಟ್ ಜನರಲ್ ದತ್ತಪ್ರಸಾದ ಲಾವಂಡೆ ಬಳಿ ಚರ್ಚೆ ನಡೆಸಿದ್ದಾರೆ. ಈ ಕುರಿತು ಗೋವಾ ಸರ್ಕಾರವು ಕರ್ನಾಟಕದ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಲು ಸಿದ್ಧತೆ ನಡೆಸುತ್ತಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪಾಲೇಕರ್, ಕರ್ನಾಟಕ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲೇಬೇಕು. ಮುಖ್ಯಮಂತ್ರಿ ಪರೀಕ್ಕರ್ ಸದ್ಯ ಅಮೆರಿಕಕ್ಕೆ ತೆರಳಿರುವುದರಿಂದ ಅವರೊಂದಿಗೆ ಈ ಕುರಿತಂತೆ ಚರ್ಚೆ ನಡೆಸಲು ಸಾಧ್ಯವಾಗುತ್ತಿಲ್ಲ. ಕಣಕುಂಬಿಗೆ ತೆರಳಿದ್ದ 8 ಮಂದಿ ಗೋವಾ ಅಧಿಕಾರಿಗಳನ್ನು ಅಪರಾಧಿಗಳಂತೆ ಕರೆದೊಯ್ದು, ಕರ್ನಾಟಕ ಪೊಲೀಸರೊಂದಿಗೆ ನಿಲ್ಲಿಸಿ ಫೋಟೊ ತೆಗೆಯಲಾಗಿದೆ. ಗೋವಾ ಅಧಿಕಾರಿಗಳನ್ನು ಒಂದು ಬಂಗಲೆಯಲ್ಲಿರಿಸಿ ದೂರವಾಣಿ ಕರೆ ಮಾಡಲು ಕೂಡ ಅವಕಾಶ ನೀಡಿಲ್ಲ ಎಂದರು.
ಕರ್ನಾಟಕ ಪೊಲೀಸರು ಗೋವಾ ಅಧಿಕಾರಿಗಳೊಂದಿಗೆ ಅವಮಾನಕರ ರೀತಿಯಲ್ಲಿ ನಡೆಸಿಕೊಂಡಿರುವುದು ಖಂಡನೀಯ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಸರ್ಕಾರವು ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ಮಹದಾಯಿ ವಿಷಯದಲ್ಲಿ ಆಕ್ರಮಣಕಾರಿ ಹೋರಾಟ ನಡೆಸುವ ಸಂದರ್ಭ ಇದೀಗ ಬಂದಾಗಿದೆ.
– ಡಾ.ಪ್ರಮೋದ್ ಸಾವಂತ, ಗೋವಾ ವಿಧಾನಸಭೆ ಸಭಾಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.