10 ಬಿಜೆಪಿ ಶಾಸಕರಿಗೆ ಕೈ-ತೆನೆ ಗಾಳ

Team Udayavani, Aug 11, 2018, 6:00 AM IST

con-jds-11.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರ ಕೆಡವಲು ಆಪರೇಷನ್‌ ಕಮಲ ಕಾರ್ಯಾಚರಣೆಗೆ ಕಾರ್ಯತಂತ್ರ ರೂಪಿಸಿರುವ ಬಿಜೆಪಿಗೆ ತಿರುಗೇಟು ನೀಡಲು ಆ ಪಕ್ಷದ ಹತ್ತು ಶಾಸಕರನ್ನು ಸೆಳೆಯಲು ಕಾಂಗ್ರೆಸ್‌-ಜೆಡಿಎಸ್‌ ಮುಂದಾಗಿದೆ.

ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ತೆರೆಮರೆಯ ಪ್ರಯತ್ನ ನಡೆಸುತ್ತಿರುವುದರಿಂದ ಇದಕ್ಕೆ ಪ್ರತಿಯಾಗಿ ಬಿಜೆಪಿಯ ಹತ್ತು ಶಾಸಕರಿಗೆ ಗಾಳ ಹಾಕಲಾಗಿದೆ. ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಮೊದಲ ಸುತ್ತಿನ ಮಾತುಕತೆ ನಡೆಸಿದ್ದು, ಯಶಸ್ವಿಯಾದರೆ ಖುದ್ದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಆವರೇ ಫೀಲ್ಡಿಗೆ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಆಪರೇಷನ್‌ ತೆನೆ-ಹಸ್ತ ನಡೆಸಲು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ಒಪ್ಪಿಗೆಗೆ ಕಾಯಲಾಗುತ್ತಿದೆ. ಇಬ್ಬರಿಂದ  ಹಸಿರು ನಿಶಾನೆ ದೊರೆತ ತಕ್ಷಣ ಕಾರ್ಯಾಚರಣೆ ಪ್ರಾರಂಭವಾಗಲಿದೆ.

ಯಾರಿಗೆ ಗಾಳ?
ಜೆಡಿಎಸ್‌ ಹಾಗೂ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿ ಚುನಾವಣೆಯಲ್ಲಿ ಗೆದ್ದಿರುವ ಶಾಸಕರಿಗೆ ಗಾಳ ಹಾಕಲಾಗಿದ್ದು, ರಾಯಚೂರಿನ ಡಾ.ಎಸ್‌.ಶಿವರಾಜ್‌ಪಾಟೀಲ್‌, ಹೊಸದುರ್ಗ ಗೂಳಿಹಟ್ಟಿ ಶೇಖರ್‌, ಚಿತ್ರದುರ್ಗ ತಿಪ್ಪಾರೆಡ್ಡಿ, ದೇವದುರ್ಗದ ಕೆ.ಶಿವನಗೌಡ,ಸಿರಗುಪ್ಪದ ಎಂ.ಎಸ್‌.ಸೋಮಲಿಂಗಪ್ಪ, ಹೊಳಲ್ಕೆರೆ ಚಂದ್ರಪ್ಪ, ಮಾಯಕೊಂಡದ ಲಿಂಗಣ್ಣ, ಹಿರಿಯೂರಿನ ಪೂರ್ಣಿಮಾ, ಜಗಳೂರು  ಎಸ್‌.ವಿ.ರಾಮಚಂದ್ರ, ಆಳಂದದ ಸುಭಾಷ್‌ ಗುತ್ತೇದಾರ್‌ ಅವರನ್ನು ಸೆಳೆಯಲು ಮುಂದಾಗಿದೆ ಎಂದು ಹೇಳಲಾಗಿದೆ.

ಕಾಂಗ್ರೆಸ್‌-ಜೆಡಿಎಸ್‌ನಲ್ಲಿದ್ದು ಕಾರಣಾಂತರಗಳಿಂದ ಪಕ್ಷ ತೊರೆದು ಬಿಜೆಪಿ ಸೇರಿ ಗೆಲುವು ಸಾಧಿಸಿರುವ ಶಾಸಕರಿಗೆ ಹೆಚ್ಚಾಗಿ ಗಾಳ ಹಾಕಿದ್ದು, ಕೆಲವರಿಗೆ ಮಂತ್ರಿಗಿರಿಯ ಆಮಿಷ ಸಹ ಒಡ್ಡಲಾಗಿದೆ. ಮತ್ತೆ ಕೆಲವರಿಗೆ ಸಂಪುಟ ದರ್ಜೆ ಸ್ಥಾನಮಾನದ ಜತೆಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ನೀಡುವುದಾಗಿಯೂ ತಿಳಿಸಲಾಗಿದೆ.

ಲೋಕಸಭೆ ಚುನಾವಣೆ ವೇಳೆಗೆ ಸಮ್ಮಿಶ್ರ ಸರ್ಕಾರ ಕೆಡವಿ ಹೊಸ ಸರ್ಕಾರ ಅಥವಾ ಹೊಸದಾಗಿ ಚುನಾವಣೆಗೆ ಹೋಗುವ ಚಿಂತನೆಯಲ್ಲಿರುವ ಬಿಜೆಪಿಗೆ ಮರ್ಮಾಘಾತ ನೀಡಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಮಾಸ್ಟರ್‌ ಪ್ಲ್ರಾನ್‌ ಸಿದ್ಧಪಡಿಸಿದ್ದಾರೆ. ನಾಲ್ವರು ಶಾಸಕರನ್ನು ಜೆಡಿಎಸ್‌ಗೆ, ಆರು ಶಾಸಕರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ.

ಈ ಮಧ್ಯೆ, ಆಪರೇಷನ್‌ ಹಸ್ತ-ತೆನೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌. ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ  ಅವರು ಬಿಜೆಪಿ ಶಾಸಕರ ಮನವಿಗಳಿಗೆ ತ್ವರಿತವಾಗಿ  ಸ್ಪಂದಿಸುತ್ತಿದ್ದಾರೆ. ಖುದ್ದು ದೂರವಾಣಿ ಕರೆ ಮಾಡಿ ನಿಮ್ಮ ಕೆಲಸ ಮಾಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಹೇಳುತ್ತಿದ್ದಾರೆ.  ವೈಯಕ್ತಿಕವಾಗಿ  ಉತ್ತಮ ಬಾಂಧವ್ಯ ಹೊಂದಿರುವ ಶಾಸಕರ ಜತೆ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ.

ಶಾಸಕರಿಗೆ ಚುನಾವಣೆ ಭಯ: ಸಮ್ಮಿಶ್ರ ಸರ್ಕಾರ ಪತನವಾದರೆ ಮತ್ತೂಮ್ಮೆ ಚುನಾವಣೆ ಎದುರಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಬಹುತೇಕ ಶಾಸಕರಿಗೆ ಚುನಾವಣೆಗೆ ಹೋಗಲು ಆತಂಕವಿದೆ. ಹೀಗಾಗಿ, ಯಾವುದಾದರೂ ಸರ್ಕಾರ ಇರಲಿ, ಚುನಾವಣೆ ಮಾತ್ರ ಬೇಡ ಎಂಬ ಅಭಿಪ್ರಾಯ ಬಿಜೆಪಿ ಶಾಸಕರಲ್ಲೂ ಇದೆ. ಅದನ್ನು ಲಾಭ ಮಾಡಿಕೊಳ್ಳಲು ಕಾಂಗ್ರೆಸ್‌-ಜೆಡಿಎಸ್‌ ಮುಂದಾಗಿದೆ.

ಮತ್ತೂಂದು ಮೂಲಗಳ ಪ್ರಕಾರ, ಬಿಜೆಪಿ ನಾಯಕರು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರನ್ನು ಸಂಪರ್ಕಿಸಿರುವುದರಿಂದ ಬಿಜೆಪಿ ಶಾಸಕರನ್ನು ಸೆಳೆಯಲು ಪ್ರಯತ್ನಿಸಿ ಆಪರೇಷನ್‌ ಕಮಲಕ್ಕೆ ಹೈ ಹಾಕದಂತೆ ಮಾಡುವುದು. ಜತೆಗೆ, ಬಿಜೆಪಿಗೆ ಸೇರಲು ಮುಂದಾಗಿರುವ ತಮ್ಮ ಪಕ್ಷಗಳ ಶಾಸಕರಿಗೂ ಸಂದೇಶ ರವಾನಿಸುವುದು ಇದರ ಹಿಂದಿನ ಉದ್ದೇಶ ಎನ್ನಲಾಗಿದೆ.

ಬಿಜೆಪಿಯ 20 ಶಾಸಕರು ಜೆಡಿಎಸ್‌ ಸೇರಲು ಸಿದ್ಧರಿದ್ದಾರೆ. ಆಪರೇಷನ್‌ ಮಾಡುವುದು ಬೇಡ ಎಂದು ನಾವೇ ಸುಮ್ಮನಿದ್ದೇವೆ. 2008-09ರಲ್ಲಿ 110 ಸದಸ್ಯ ಬಲ ಇದ್ದ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸದಸ್ಯರಿಂದ ರಾಜೀನಾಮೆ ಕೊಡಿಸಿ ಆಪರೇಷನ್‌ ಕಮಲ ನಡೆಸಿತ್ತು. ಅಂತಹ ರಾಜಕಾರಣ ಮಾಡುವುದು ಬೇಡ. ಬಿಜೆಪಿ ಶಾಸಕರು ಜೆಡಿಎಸ್‌ಗೆ ಬಂದರೆ ಯಡಿಯೂರಪ್ಪನವರಿಗೆ ನೋವಾಗುತ್ತದೆ.

ಯಡಿಯೂರಪ್ಪನವರು ಇನ್ನಷ್ಟು ದಿನ ಆರೋಗ್ಯದಿಂದಿರಲಿ ಎಂದು ಜೆಡಿಎಸ್‌ಗೆ ಬರಬೇಡಿ ಎಂದು ಬಿಜೆಪಿ ಶಾಸಕರಿಗೆ ಹೇಳಿದ್ದೇವೆ.
– ಎಚ್‌.ಡಿ.ರೇವಣ್ಣ, ಲೋಕೋಪಯೋಗಿ ಸಚಿವ

– ಎಸ್‌. ಲಕ್ಷ್ಮಿನಾರಾಯಣ
 
ಟಾಪ್ ನ್ಯೂಸ್

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.