“ಎ’ ಟೆಸ್ಟ್: ಹನುಮ ವಿಹಾರಿ ಶತಕ ವಿಹಾರ
Team Udayavani, Aug 11, 2018, 8:36 AM IST
ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ “ಎ’ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನ ಹನುಮ ವಿಹಾರಿ ಅಜೇಯ ಶತಕ ಬಾರಿಸಿ ಭಾರತ “ಎ’ ತಂಡದ ದೊಡ್ಡ ಮೊತ್ತಕ್ಕೆ ಕಾರಣರಾಗಿದ್ದಾರೆ. ಮೊದಲ ದಿನದಾಟದ ಅಂತ್ಯಕ್ಕೆ ಭಾರತ 4 ವಿಕೆಟಿಗೆ 322 ರನ್ ಪೇರಿಸಿದ್ದು, ಇದರಲ್ಲಿ ವಿಹಾರಿ ಪಾಲು ಅಜೇಯ 138 ರನ್.
ಆರಂಭಿಕ ಆಘಾತ
ಮೊದಲ ಪಂದ್ಯದಲ್ಲಿ ಅಮೋಘ ದ್ವಿಶತಕ ಬಾರಿಸಿದ ಮಾಯಾಂಕ್ ಅಗರ್ವಾಲ್ ಈ ಸಲ ಖಾತೆ ತೆರೆಯುವ ಮೊದಲೇ ನಿರ್ಗಮಿಸಿ ನಿರಾಸೆ ಮೂಡಿಸಿದರು. ಆಗ ಭಾರತ ಕೇವಲ ಒಂದು ರನ್ ಮಾಡಿತ್ತು. ಪೃಥ್ವಿ ಶಾ ಕೇವಲ 16 ರನ್ನಿಗೆ ಔಟಾದರು. 18 ರನ್ ಆಗುವಷ್ಟರಲ್ಲಿ ಆರಂಭಿಕರಿಬ್ಬರು ಪೆವಿಲಿಯನ್ ಸೇರಿದ್ದರು. ಈ ಸಂದರ್ಭದಲ್ಲಿ ಹನುಮ ವಿಹಾರಿ ತಂಡದ ನೆರವಿಗೆ ನಿಂತರು. ಅವರಿಗೆ ನಾಯಕ ಶ್ರೇಯಸ್ ಅಯ್ಯರ್ (39), ಅಂಕಿತ್ ಬವೆ° (80) ಉತ್ತಮ ಬೆಂಬಲ ನೀಡಿದರು. ವಿಹಾರಿ ಜತೆ 30 ರನ್ ಮಾಡಿರುವ ಕೀಪರ್ ಕೆ.ಎಸ್. ಭರತ್ ಕ್ರೀಸಿನಲ್ಲಿದ್ದಾರೆ.
ಅತ್ಯಂತ ಜವಾಬ್ದಾರಿಯುತ ಆಟವಾಡಿದ ಹನುಮ ವಿಹಾರಿ 273 ಎಸೆತಗಳನ್ನು ನಿಭಾಯಿಸಿದ್ದು, 13 ಬೌಂಡರಿ ಹೊಡೆದಿದ್ದಾರೆ. ಬವೆ° ಅವರ 80 ರನ್ 146 ಎಸೆತಗಳಿಂದ ಬಂತು (10 ಬೌಂಡರಿ, 1 ಸಿಕ್ಸರ್). ಇವರಿಬ್ಬರ 4ನೇ ವಿಕೆಟ್ ಜತೆಯಾಟದಲ್ಲಿ 177 ರನ್ ಸಂಗ್ರಹಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.