ಸುನಿ “ಬಜಾರ್’ನಲ್ಲಿ “ಲವ್ ಫೇಲ್ಯೂರ್’: Watch
Team Udayavani, Aug 11, 2018, 3:59 PM IST
“ಚಮಕ್’ ನಂತರ “ಬಜಾರ್’ ಎಂಬ ಹೊಸ ಚಿತ್ರವನ್ನು ಸುನಿ ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಅಲ್ಲದೇ ಚಿತ್ರದ ಟೀಸರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದ್ದು, ಇದೀಗ ಚಿತ್ರತಂಡ ಚಿತ್ರದ “ಲವ್ ಫೇಲ್ಯೂರ್’ ಸಾಂಗ್ ನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿದೆ. ಈ ಹಾಡಿಗೆ ವಿಜಯ್ ಪ್ರಕಾಶ್ ಮತ್ತು ಸಾಧುಕೋಕಿಲಾ ಧ್ವನಿ ನೀಡಿದ್ದು, ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.
ನೋಡಲು ಪಕ್ಕಾ ಕಮರ್ಷಿಯಲ್ ಸಿನಿಮಾದಂತೆ ಕಾಣಿಸುತ್ತಿರುವ “ಬಜಾರ್’ ಸಿನಿಮಾ ಅಂಡರ್ ವರ್ಲ್ಡ್ ಕಥಾಹಂದರವನ್ನೊಳಗೊಂಡಿದ್ದು, ಈ ಚಿತ್ರದಲ್ಲಿ ಪ್ರೇಮ ಸಂದೇಶ ಸಾರುವ ಪಾರಿವಾಳಕ್ಕೂ ಪ್ರಮುಖ ಪಾತ್ರವಿದೆ. ಪಾರಿವಾಳಗಳ ಬೆಟ್ಟಿಂಗ್‍ನಲ್ಲಿ ನಡೆಯುವ ಪ್ರೇಮಕಥೆಯನ್ನು ನಿರ್ದೇಶಕರು ಹೇಳಲು ಹೊರಟಿದ್ದಾರೆ. “ಬಜಾರ್’ ಚಿತ್ರದ ಮೂಲಕ ಧನ್‌ವೀರ್ ಎಂಬ ಹೊಸ ನಟನನ್ನು ಸುನಿ ಕನ್ನಡಕ್ಕೆ ಪರಿಚಯಿಸುತ್ತಿದ್ದು, ಧನ್‌ವೀರ್ ಎದುರು ನಾಯಕಿಯಾಗಿ “ಧೈರ್ಯಂ’ನ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ.
“ಬಜಾರ್’ ಚಿತ್ರವನ್ನು ಭಾರತಿ ಫಿಲಂ ಪ್ರೊಡಕ್ಷನ್ಸ್‌ನಡಿ ತಿಮ್ಮೇಗೌಡ ನಿರ್ಮಿಸುತ್ತಿದ್ದು, ಎಂ.ಎಲ್. ಪ್ರಸನ್ನ ಅವರ ಕಥೆಗೆ ಸುನಿ ಚಿತ್ರಕಥೆ ರಚಿಸಿದ್ದಾರೆ. ಸುನಿ ಮತ್ತು “ಮೃಗಶಿರ’ ಶ್ರೀಕಾಂತ್ ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದ್ದು, ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಇನ್ನು ನಟ ಶಿವಧ್ವಜ್, ಚಿತ್ರದ ಪ್ರೊಡಕ್ಷನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.