ಮುರಳಿ ಫೋಟೋ “ಭರಾಟೆ’
Team Udayavani, Aug 11, 2018, 6:13 PM IST
“ಮಫ್ತಿ’ ನಂತರ ಮುರಳಿ ಮುಂದೇನು ಮಾಡುತ್ತಾರೆ ಎಂಬ ಕುತೂಹಲಕ್ಕೆ ಉತ್ತರ ಸಿಕ್ಕಿದ್ದು ಈ ವರ್ಷದ ಯುಗಾದಿ ಹಬ್ಬದಂದು. “ಬಹದ್ದೂರ್’ ಚೇತನ್ ನಿರ್ದೇಶನದಲ್ಲಿ ಮುರಳಿ ಒಂದು ಹೊಸ ಚಿತ್ರ ಮಾಡುತ್ತಿದ್ದಾರೆ ಎಂಬ ಜಾಹೀರಾತು ಎಲ್ಲರ ಪ್ರಶ್ನೆಗಳಿಗೆ ಉತ್ತರ ಕೊಟ್ಟಿತು.
“ಭರಾಟೆ’ ಚಿತ್ರದ ಸ್ಕ್ರಿಪ್ಟ್ ಪೂಜೆ ಕಳೆದ ತಿಂಗಳು ನಡೆದಿದ್ದು, ಇತ್ತೀಚೆಗೆ ಚಿತ್ರತಂಡದವರು ರಾಜಸ್ತಾನಕ್ಕೆ ಹೋಗಿ ಅಲ್ಲಿ ಫೋಟೋ ಶೂಟ್ ಮಾಡಿಕೊಂಡು ಬಂದಿದ್ದಾರೆ. ಅಲ್ಲಿನ ಅರಮನೆಗಳಲ್ಲಿ, ಮರಳುಗಾಡಿನಲ್ಲಿ ಮುರಳಿ ಮತ್ತು ನಾಯಕಿ ಶ್ರೀಲೀಲ ಅವರ ಹಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ ಛಾಯಾಗ್ರಾಹಕ ಭುವನ್ ಗೌಡ.
ಇದೀಗ ರಾಜಸ್ತಾನದಿಂದ ವಾಪಸ್ಸಾಗಿರುವ ಚಿತ್ರತಂಡದವರು, ಚಿತ್ರದ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಆ ಫೋಟೋ ಶೂಟ್‌ನ ಕೆಲವು ಫೋಟೋಗಳು ಇಲ್ಲಿವೆ. ಅಂದಹಾಗೆ, “ಭರಾಟೆ’ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ರಾಜಸ್ತಾನದಲ್ಲಿ 21 ದಿನಗಳ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.
ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗವಹಿಸುವುದಕ್ಕೆ ಚಿತ್ರತಂಡ ಸದ್ಯದಲ್ಲೇ ರಾಜಸ್ತಾನಕ್ಕೆ ಪ್ರಯಾಣ ಬೆಳೆಸಲಿದೆ. “ಬಹದ್ದೂರ್’ ಚೇತನ್ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ರಚಿಸಿದ್ದಾರೆ. ಇನ್ನು ಈ ಚಿತ್ರವನ್ನು ಸುಪ್ರೀತ್ ನಿರ್ಮಿಸುತ್ತಿದ್ದಾರೆ. ಭುವನ್ ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.