ಉತ್ತರ ಕರ್ನಾಟಕ ಬರ ಘೋಷಣೆಗೆ ಎಂಬಿಪಿ ಆಗ್ರಹ
Team Udayavani, Aug 12, 2018, 6:30 AM IST
ಬೆಂಗಳೂರು:ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರ ತಾಲೂಕುಗಳ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಂಡ್ಯದಲ್ಲಿ ಮಳೆ ಆಗಿರುವುದರಿಂದ ಆ ಭಾಗದಲ್ಲಿ ಭತ್ತ ನಾಟಿ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಆ ಭಾಗದ ಪರಿಸ್ಥಿತಿ ಮುಖ್ಯಮಂತ್ರಿಗೆ ಗೊತ್ತಿದೆ. ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಆದರೆ, ಕಾಲುವೆ ಇರುವ ಕಡೆಗೆ ಮಾತ್ರ ಬೆಳೆ ಬೆಳೆಯಲು ಅವಕಾಶವಿದ್ದು, ಉಳಿದ ಪ್ರದೇಶದಲ್ಲಿ ಬರ ಪರಿಸ್ಥಿತಿ ಇದೆ. ಉತ್ತರ ಕರ್ನಾಟಕ ಭಾಗದಲ್ಲಿ ಬೆಳೆ ಹಾನಿಯಾಗಿದ್ದು, ಮೇವಿನ ಕೊರತೆ ಉಂಟಾಗಲಿದೆ.ಅಲ್ಲದೇ ಜನರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.