ಮಳೆಗಾಲದಲ್ಲಿ ನಿರಂತರ ಕಾಡುವ ಮುಳುಗು ಸೇತುವೆ 

Team Udayavani, Aug 12, 2018, 10:18 AM IST

12-agust-3.jpg

ಕಡಬ: ಮಳೆಗಾಲದಲ್ಲಿ ಆಗಾಗ ನೆರೆನೀರಿನಲ್ಲಿ ಮುಳುಗಡೆಯಾಗಿ ರಸ್ತೆ ಸಂಚಾರಕ್ಕೆ ತೊಡಕುಂಟುಮಾಡುತ್ತಿರುವ ಹೊಸಮಠದ ಮುಳುಗು ಸೇತುವೆ ಕಡಬ ಪರಿಸರದ ವ್ಯಾಪಾರ ವ್ಯವಹಾರಗಳಿಗೂ ತೀವ್ರ ಹೊಡೆತ ನೀಡುತ್ತಿದೆ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಉದ್ಯೋಗಿಗಳು, ಕಾರ್ಮಿಕರು, ವಾಹನ ಚಾಲಕ – ಮಾಲಕರು, ಯಾತ್ರಾರ್ಥಿಗಳು ಹೀಗೆ ಎಲ್ಲ ವರ್ಗದ ಜನರು ಸೇತುವೆಯ ಮೇಲೆ ನೆರೆನೀರು ಹರಿಯುವ ಸಂದರ್ಭದಲ್ಲಿ ನಿಗದಿತ ಸಮಯಕ್ಕೆ ಸೇರಬೇಕಾದ ಜಾಗವನ್ನು ತಲುಪದೆ ಪರಿತಪಿಸುತ್ತಾರೆ. ಬಹುತೇಕ ಎಲ್ಲ ವ್ಯವಹಾರಗಳೂ ಏರುಪೇರಾಗಿ ಅತಂತ್ರ ಪರಿಸ್ಥಿತಿ ಎದುರಾಗುತ್ತದೆ. 

ಮೊದಲೇ ಮಳೆಗಾಲವೆಂದರೆ ಎಲ್ಲ ವ್ಯಾಪಾರ ವ್ಯವಹಾರಗಳೂ ಅಷ್ಟಕ್ಕಷ್ಟೇ. ಅದರಲ್ಲಿಯೂ ವಿಪರೀತ ಮಳೆ ಮತ್ತು ಹೊಸಮಠ ಸೇತುವೆ ಮುಳುಗಡೆ ಸಮಸ್ಯೆ ಒಟ್ಟಾಗಿ ಎದುರಾದರೆ ಸ್ಥಳೀಯ ಜನರು ಪೇಟೆಯತ್ತ ಹೊರಡುವುದೇ ವಿರಳ. ಅದರ ಪರಿಣಾಮ ನೇರವಾಗಿ ಬೀಳುವುದು ವರ್ತಕರ ಮೇಲೆ. ನಷ್ಟದ ಮೇಲೆ ನಷ್ಟ ವ್ಯಾಪಾರಿಗಳಿಗೆ. ಕಳೆದ ತಿಂಗಳು ನಿರಂತರವಾಗಿ 10 ದಿನಗಳ ಕಾಲ ಸೇತುವೆ ಮುಳುಗಡೆಯಾಗಿ ಕಡಬ-ಉಪ್ಪಿನಂಗಡಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡ ಪರಿಣಾಮ ಕಡಬದ ಎಲ್ಲ ವ್ಯಾಪಾರ- ವ್ಯವಹಾರಗಳು ದೊಡ್ಡ ಮಟ್ಟದಲ್ಲಿ ನಷ್ಟ ಅನುಭವಿಸಬೇಕಾಯಿತು. ಕಳೆದ ಕೆಲದಿನಗಳಿಂದ ಅದೇ ಪರಿಸ್ಥಿತಿ ಎದುರಾಗಿದೆ. ಈ ಸ್ಥಿತಿ ಇಂದು ನಿನ್ನೆಯದಲ್ಲ. ಆರು ದಶಕಗಳಿಂದ ಮುಂದುವರಿದಿದೆ. ಹೊಸ ಸೇತುವೆಯ ನಿರ್ಮಾಣ ಕಾಮಗಾರಿ ಈ ಬಾರಿ ಪೂರ್ಣಗೊಂಡರೆ ಮುಂದಿನ ಮಳೆಗಾಲದಲ್ಲಿ ಸೇತುವೆ ಮುಳುಗಡೆಯ ಭೀತಿ ದೂರವಾಗಲಿದೆ ಎನ್ನುವುದು ಜನರ ಆಶಾಭಾವನೆ.

ಹೊಸ ಸೇತುವೆಗೂ ಮಳುಗಡೆ ಭೀತಿ
ನಿರ್ಮಾಣ ಹಂತದಲ್ಲಿರುವ ಹೊಸ ಸೇತುವೆಯ ಮಟ್ಟಕ್ಕೆ ಈ ಬಾರಿ ನೆರೆ ನೀರು ಏರಿ ಹೊಸ ಸೇತುವೆಗೂ ಮುಳುಗಡೆಯ ಭೀತಿ ಎದುರಾಯಿತು. ಸೇತುವೆಯ ಕಾಮಗಾರಿ ಆರಂಭಗೊಂಡು ಪಿಲ್ಲರ್‌ಗಳ ನಿರ್ಮಾಣವಾಗುತ್ತಿದ್ದ ಸಂದರ್ಭದಲ್ಲಿಯೇ ಸೇತುವೆಯ ಎತ್ತರದ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸುಳ್ಯ ಶಾಸಕ ಎಸ್‌. ಅಂಗಾರ ಅವರು ಸೇತುವೆ ನಿರ್ಮಾಣದ ಉಸ್ತವಾರಿ ನೋಡಿಕೊಳ್ಳುತ್ತಿರುವ ಕೆಆರ್‌ಡಿಸಿಎಲ್‌ (ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ) ದ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದು ಸೇತುವೆಯನ್ನು ಇನ್ನಷ್ಟು ಎತ್ತರಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಆದರೆ ಅದಕ್ಕೆ ಕೆಆರ್‌ಡಿಸಿಎಲ್‌ ಅಧಿಕಾರಿಗಳು, ‘ಹಲವು ವರ್ಷಗಳ ನೆರೆಯ ಪ್ರಮಾಣವನ್ನು ಅಧ್ಯಯನ ಮಾಡಿ ಸೇತುವೆಯ ಎತ್ತರವನ್ನು ನಿಗದಿಪಡಿಸಲಾಗಿದೆ.

ನೆರೆನೀರು ಹೊಸ ಸೇತುವೆಯ ತನಕ ಬಾರದು’ ಎಂದು ಪ್ರತಿಕ್ರಿಯಿಸಿದ್ದರು. ಆದರೆ ಇದೀಗ ನೆರೆನೀರಿನ ಮಟ್ಟ ಹೊಸ ಸೇತುವೆಯ ಸ್ಲ್ಯಾಬ್ ನ ತನಕ ಏರುವ ಮೂಲಕ ಅಧಿಕಾರಿಗಳ ಮಾತು ಸುಳ್ಳಾಗಿದೆ. ಸೇತುವೆಯನ್ನು ಎತ್ತರಿಸುವಂತೆ ಶಾಸಕರು ಹಾಗೂ ಸಾರ್ವಜನಿಕರು ಮಾಡಿದ ಮನವಿಯನ್ನು ಪುರಸ್ಕರಿಸದ ಅತಿ ಬುದ್ಧಿವಂತ ಅಧಿಕಾರಿಗಳ ವಿರುದ್ಧ ಇದೀಗ ಜನರು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ

ನಷ್ಟ-ಕಷ್ಟ
ಸೇತುವೆಯ ಮುಳುಗಡೆಯಾದರೆ ಅರ್ಧಕ್ಕರ್ಧ ವ್ಯಾಪಾರ ಕಡಿಮೆ. ಸಾಮಗ್ರಿಗಳು ಕೂಡ ಸಮಯಕ್ಕೆ ಸರಿಯಾಗಿ ಸರಬರಾಜಾಗುವುದಿಲ್ಲ. ಸುತ್ತು ಬಳಸಿ ತರಿಸಿದರೆ ಸಾಗಾಟ ವೆಚ್ಚವೂ ಹೆಚ್ಚಾಗುತ್ತದೆ. ಅದನ್ನು ಗ್ರಾಹಕರ ಮೇಲೆ ಹೊರಿಸಲು ಸಾಧ್ಯವಿಲ್ಲ. ಅದರಿಂದಲೂ ನಮಗೇ ನಷ್ಟ. ಕೆಲವೊಂದು ಕಂಪೆನಿಯ ವಿತರಕರು ಸುತ್ತು ಬಳಸಿ ಸಾಮಗ್ರಿ ಕಳುಹಿಸಲು ಮುಂದೆ ಬಾರದ ಕಾರಣ ಅಗತ್ಯ ವಸ್ತುಗಳ ಕೊರತೆಯೂ ಎದುರಾಗುತ್ತದೆ. ಅಂಗಡಿಯ ಕೆಲಸಗಾರರೂ ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗುವುದಿಲ್ಲ.
– ದಯಾನಂದ ಪ್ರಭು
ವರ್ತಕರು, ಕಡಬ

ನಾಗರಾಜ್‌ ಎನ್‌.ಕೆ. 

ಟಾಪ್ ನ್ಯೂಸ್

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.