ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿ: ಶೈಕ್ಷಣಿಕ ದತ್ತು ಸ್ವೀಕಾರ


Team Udayavani, Aug 12, 2018, 3:45 PM IST

1008mum08.jpg

ಡೊಂಬಿವಲಿ: ಕಳೆದ ಹಲವಾರು ವರ್ಷಗಳಿಂದ ಸಂಘದ ಡೊಂಬಿವಲಿ ಪ್ರಾದೇಶಿಕ ಸಮಿತಿಯನ್ನು ಬಹಳ ಹತ್ತಿರದಿಂದ ಕಾಣುತ್ತಿದ್ದೇನೆ. ನಾಡಿನ ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರಗಳನ್ನು  ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಸಮಿತಿಯ ಕಾರ್ಯವೈಖರಿ ಅಭಿನಂದನೀಯವಾಗಿದೆ. ನಮ್ಮ ಸಮಾಜದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸಂಘವು ಪ್ರತೀ ವರ್ಷ ಕೋಟ್ಯಂತರ ರೂ. ಗಳನ್ನು ವ್ಯಯಿಸುತ್ತಿದೆ. ಅದರಲ್ಲೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆ ಯಲ್ಲಿರುವ ಡೊಂಬಿವಲಿ ಪ್ರಾದೇಶಿಕ ಸಮಿತಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ. ಸಮಿತಿಯು 45 ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಿ ಮಾನವೀಯತೆ ಮೆರೆದಿದೆ. ಇದರೊಂದಿಗೆ ತುಳುನಾಡ ಸಂಸ್ಕೃತಿ, ಆಚಾರ, ವಿಚಾರವನ್ನು ಬಿಂಬಿಸುವ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು ವೈವಿಧ್ಯಮಯ ವಾಗಿ ಆಯೋಜಿಸಿರುವುದು ಬಹಳಷ್ಟು ಖುಷಿ ತಂದಿದೆ ಎಂದು ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಅಭಿಪ್ರಾಯಿಸಿದರು.
ಡೊಂಬಿವಲಿ ಪೂರ್ವದ ಎಂಐಡಿಸಿಯ ಪೆಂಡಾರRರ್‌ ಕಾಲೇಜು ಎದುರುಗಡೆಯಿರುವ ರೋಟರಿ ಕ್ಲಬ್‌ ಸಭಾಗೃಹದಲ್ಲಿ ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ವಾರ್ಷಿಕ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಮಹಿಳಾ ವಿಭಾಗದ ಆಟಿಡೊಂಜಿ ದಿನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

 ಸುಧಾಕರ ಶೆಟ್ಟಿ ಅವರ ಪುತ್ರನ ವತಿಯಿಂದ ಇಂದು ಸಂಘಕ್ಕೆ 25 ಸಾವಿರ ರೂ. ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದು ಇತರರರಿಗೆ ಮಾದರಿಯಾಗಲಿ. ಸಂಘದಿಂದ ನೆರವು ಪಡೆದ ಸಮಾಜದ ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧನೆ   ಮಾಡಿ ಸಮಾಜದ ಹಾಗೂ ಸಂಘದ ಋಣ ತೀರಿಸುವ ಕಾರ್ಯದಲ್ಲೂ ತೊಡಗಬೇಕು. ಬಂಟರ ಸಂಘವು ಇಂದು ದಾನಿಗಳ ಸಹಕಾರ, ಪ್ರೋತ್ಸಾಹದಿಂದ ಸಮಾಜದ ಆರ್ಥಿಕ ವಾಗಿ ಹಿಂದುಳಿದವರನ್ನು ಗುರುತಿಸಿ, ಶಿಕ್ಷಣ, ಆರೋಗ್ಯ, ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ವಿಶೇಷ ಯೋಗದಾನ ನೀಡುತ್ತಿದೆ. ಡೊಂಬಿವಲಿ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯ-ಸದಸ್ಯೆಯರ ಒಗ್ಗಟ್ಟು, ಒಮ್ಮತದ ಗುಣದಿಂದ ಇಂತಹ ಕಾರ್ಯಕ್ರಮ  ಸಾಕಾರಗೊಳ್ಳಲು ಸಾಧ್ಯವಾಗುತ್ತಿದೆ ಎಂದು ಅವರು ಹೇಳಿದರು.

 ಸಮಾಜದ ಮಕ್ಕಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆಯು ವುದರೊಂದಿಗೆ ಗುರುಹಿರಿಯರಿಗೆ ಗೌರವ ನೀಡುವುದನ್ನು ಕಲಿಯ ಬೇಕಾಗಿದೆ ಎಂದರು.

ಪ್ರಾದೇಶಿಕ ಸಮಿತಿಗಳಿಗೆ ಮಾದರಿ
ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಅವರು ಮಾತನಾಡಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯು ಇತರ ಪ್ರಾದೇಶಿಕ ಸಮಿತಿಗಳಿಗೆ ಮಾದರಿಯಾಗುವ ರೀತಿಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿದೆ. ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ ಅವರಿಗೆ ಸಹಾಯಹಸ್ತ ನೀಡುವುದು ದೇವರು ಮೆಚ್ಚು ವಂಥಹ ಕಾರ್ಯವಾಗಿದೆ. ಇಂದು ಮಹಿಳೆಯರು ವಿವಿಧ ಖಾದ್ಯ ಪದಾರ್ಥಗಳನ್ನು ತಯಾರಿಸಿ ತಂದು ಪ್ರದರ್ಶಿಸಿರುವುದು ಸಂತೋಷದ ವಿಷಯ. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಾಗ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದಂತಾಗುತ್ತದೆ. ಸಂಘದ ಪ್ರತಿಯೊಂದು ಯೋಜನೆಗಳಿಗೆ ಪ್ರಾದೇಶಿಕ ಸಮಿತಿಗಳ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದರು.

ಬಂಟರ ಸಂಘ ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ ಅವರು ಮಾತನಾಡಿ, ಹನ್ನೊಂದು ಮಕ್ಕಳಿಂದ ಪ್ರಾರಂಭಗೊಂಡ ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮವು ಇಂದು 45 ಮಕ್ಕಳಿಗೆ ಏರಿಕೆಯಾಗಿರುವುದು ಉತ್ತಮ ಬೆಳವಣಿಗೆ. ಇದ್ದವರು ಇಲ್ಲದವರಿಗೆ ನೀಡಿ ಸಮಾಜವನ್ನು ಮೇಲಕ್ಕೆತ್ತುವ ಕಾರ್ಯ ಮಾಡುತ್ತಿರುವ ಹೃದಯವಂತರ ದಾನಿಗಳಿಗೆ ಶಿರಬಾಗಿ ವಂದನೆಗಳು ಎಂದರು.
ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ  ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕೃಷಿ¡ ಶೆಟ್ಟಿ, ಆಟಿ ತಿಂಗಳ ಆಚರಣೆಯ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಸುಜಾತಾ ಶೆಟ್ಟಿ ಪುತ್ರನ ವತಿಯಿಂದ ಬಂಟರ ಸಂಘಕ್ಕೆ 25 ಸಾವಿರ ರೂ. ದೇಣಿಗೆಯನ್ನು ನೀಡಿದರು.  ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಅವರ ವತಿಯಿಂದ ಮಹಿಳೆಯರಿಗೆ ವಿಶೇಷ ಬಹುಮಾನ ನೀಡಲಾಯಿತು. ಅಶೋಕ್‌ ಶೆಟ್ಟಿ ಮುಂಡ್ಕೂರು, ಸುಧಾಕರ ಶೆಟ್ಟಿ, ದಿನೇಶ್‌ ಶೆಟ್ಟಿ ಅವರನ್ನು ಸಮಿತಿಯ ವತಿಯಿಂದ ವಿಶೇಷವಾಗಿ ಸತ್ಕರಿಸಲಾಯಿತು.

ಆಟಿಕಳಂಜ ಪ್ರಾತ್ಯಕ್ಷಿಕೆ, ವಿವಿಧ ನೃತ್ಯ ಹಾಗೂ ಗಣೇಶ್‌ ಎರ್ಮಾಳ್‌ ಅವರಿಂದ ಸಂಗೀತ ರಸಮಂಜರಿ ನಡೆಯಿತು. ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಮಂಜುಳಾ ಶೆಟ್ಟಿ, ಮಹಿಳಾ ವಿಭಾಗದ ಕೋಶಾಧಿಕಾರಿ ಸುಜಾತಾ ಶೆಟ್ಟಿ, ಕಾರ್ಯದರ್ಶಿ ಯೋಗಿನಿ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು. ಸುನಂದಾ ಶೆಟ್ಟಿ ಮತ್ತು ಬಳಗದವರು ಪ್ರಾರ್ಥನೆಗೈದರು. ಯೋಗಿನಿ ಶೆಟ್ಟಿ ಮತ್ತು  ಸುನಂದಾ ಶೆಟ್ಟಿ ಅವರು ಪಾಡªನ ಹಾಡಿದರು. ಸುಕುಮಾರ್‌ ಎನ್‌. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ದಿನೇಶ್‌ ಶೆಟ್ಟಿ ವಂದಿಸಿದರು.

ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ್‌ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಸಂಚಾಲಕ ರಾಜೀವ್‌ ಎಂ. ಭಂಡಾರಿ, ಉಪ ಕಾರ್ಯಾಧ್ಯಕ್ಷರುಗಳಾದ ಸುಕುಮಾರ್‌ ಶೆಟ್ಟಿ, ಆನಂದ್‌ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಡೊಂಬಿವಲಿ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಆರ್‌. ಶೆಟ್ಟಿ, ಸಮಿತಿಯ ಗೌರವ ಕಾರ್ಯದರ್ಶಿ ದಿನೇಶ್‌ ಎನ್‌. ಶೆಟ್ಟಿ, ಜತೆ ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ, ಕೋಶಾಧಿಕಾರಿ ಜಯಕರ ಶೆಟ್ಟಿ ಪಡುಕುಡೂರು, ಜತೆ ಕೋಶಾಧಿಕಾರಿ ಉಮೇಶ್‌ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿಜಯ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗದ ಜತೆ ಕಾರ್ಯದರ್ಶಿ ಸುಮತಾ ರೈ, ಜತೆ ಕೋಶಾಧಿಕಾರಿ ಶೋಭಾ ರೈ ಮೊದಲಾದವರು ಉಪಸ್ಥಿತರಿದ್ದರು.

ಸಮಿತಿಯ ವತಿಯಿಂದ ಪ್ರಸ್ತುತ ವರ್ಷದ ಆರ್ಥಿಕವಾಗಿ ಹಿಂದುಳಿದ ಸಮಾಜದ 40 ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು. ಡೊಂಬಿವಲಿ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಯಿತು. ಡೊಂಬಿವಲಿ ಪರಿಸರದ ಸಮಾಜದ ಮಹಿಳೆಯರು ವಿವಿಧ ಬಗೆಯ ಆಟಿ ತಿಂಗಳ ವಿಶೇಷತೆಯನ್ನು ಸಾರುವ ಖಾಧ್ಯ ಪದಾರ್ಥಗಳನ್ನು  ತಯಾರಿಸಿ ಪ್ರದರ್ಶಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.  ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯ-ಸದಸ್ಯೆಯರು  ಯಶಸ್ಸಿಗೆ ಸಹಕರಿಸಿದರು.  ಸಮಾಜದವರು, ವಿವಿಧ ಸಂಘಟನೆ ಗಳ ಪದಾಧಿ ಕಾರಿಗಳು, ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಶಿಕ್ಷಣ ಪ್ರತಿಯೊಬ್ಬರ ಹಕ್ಕಾಗಿದೆ. ಡೊಂಬಿವಲಿ ಪ್ರಾದೇಶಿಕ ಸಮಿತಿಯು ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ ಅವರಿಗೆ ಸಹಾಯಹಸ್ತ ನೀಡುತ್ತಿರುವುದು ಅಭಿನಂದನೀಯ. ಇಂದು ಮಹಿಳೆಯರು ವಿವಿಧ ಖಾದ್ಯ ಪದಾರ್ಥಗಳನ್ನು ತಂದು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಅಭಿನಂದನೀಯ. ಇಂತಹ ಕಾರ್ಯಕ್ರಮಗಳು ಕಿರಿಯರಿಗೆ ಮಾದ‌ರಿಯಾಗಿರಲಿ. ಸಂಘದ ಪ್ರತಿಯೊಂದು ಯೋಜನೆಗಳ ಪ್ರಯೋಜನವನ್ನು ಸಮಾಜ ಬಾಂಧವರು ಪಡೆದುಕೊಳ್ಳಬೇಕು. ಸಮಿತಿಯ ಮಹಿಳಾ ವಿಭಾಗದ ನನ್ನ ಪ್ರೋತ್ಸಾಹ, ಸಹಕಾರ ಸದಾಯಿದೆ.
-ರಂಜನಿ ಸುಧಾಕರ ಹೆಗ್ಡೆ  , 
ಕಾರ್ಯಾಧ್ಯಕ್ಷೆ : ಬಂಟರ ಸಂಘ ಮಹಿಳಾ ವಿಭಾಗ

ಶಿಕ್ಷಣ ನೀಡುವುದು ನಮ್ಮ ಧರ್ಮ 
ಹಿಂದಿನ ಕಾಲದ ಕಷ್ಟದ ದಿನಗಳನ್ನು ನೆನಪಿಸಿಕೊಂಡಾಗ ಭಯವಾಗುತ್ತದೆ. ಆದರೆ ಇಂದು ಅದು ಸಂಪೂರ್ಣವಾಗಿ ಬದಲಾವಣೆಯಾಗಿದೆ. ಸಂಘದ ಸಮಾಜಪರ ಯೋಜನೆಗಳನ್ನು ಪ್ರಾದೇಶಿಕ ಸಮಿತಿಗಳು ಸಮಾಜ ಬಾಂಧವರ ಮನೆ-ಮನಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗುತ್ತಿರುವುದು ಅಭಿನಂದನೀಯ. ಮಕ್ಕಳಿಗೆ ಶಿಕ್ಷಣವನ್ನು ನೀಡುವುದು ನಮ್ಮ ಧರ್ಮ. ಇಂದು ಸುಮಾರು 45 ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಿರುವುದು ಸಾಮಾನ್ಯ ಮಾತಲ್ಲ. ದಾನಿಗಳ ಸಹಕಾರದಿಂದ  ಸಮಿತಿಯಿಂದ ಇನ್ನಷ್ಟು ಇಂತಹ ಸೇವೆ ನಿರಂತರವಾಗಿ ನಡೆಯುತ್ತಿರಲಿ ಎಂದು  ಸರಳಾ ಬಿ. ಶೆಟ್ಟಿ (ಮಾಜಿ ಕಾರ್ಯಾಧ್ಯಕ್ಷೆ : ಮಹಿಳಾ ವಿಭಾಗ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌) ಹೇಳಿದರು. 

ಮಹಿಳೆಯರು ಕಷ್ಟಪಟ್ಟು ಉತ್ತಮವಾದ ತಿಂಡಿ-ತಿನಿಸುಗಳೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಕ್ಕೆ ನಿಮಗೆ ವಂದನೆಗಳು. ಇಂದು ಉತ್ತಮವಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದೇನೆ ಎನ್ನಲು ಹೆಮ್ಮೆಯಾಗುತ್ತಿದೆ. ಪ್ರತಿಯೋರ್ವ ವ್ಯಕ್ತಿ ತನ್ನ ತಪ್ಪನ್ನು ತಿದ್ದಿಕೊಂಡು ಮುಂದುವರಿದಾಗ ಮಾತ್ರ ಆತನಿಂದ ನಿಜವಾದ ಸೇವೆಯನ್ನು ಮಾಡಲು ಸಾಧ್ಯವಾಗುತ್ತದೆ. ನಾವೆಲ್ಲರೂ ಒಂದಾಗಿ ಒಗ್ಗಟ್ಟಿನಿಂದ, ಒಮ್ಮತದಿಂದ ಆರ್ಥಿಕವಾಗಿ ಹಿಂದುಳಿದವರ ಸೇವೆಗೆ ಮುಂದಾಗೋಣ.
-ವಿನುತಾ ಶೆಟ್ಟಿ , 
ಕಾರ್ಯಾಧ್ಯಕ್ಷೆ : ಮುಲುಂಡ್‌ ಬಂಟ್ಸ್‌ ಮಹಿಳಾ ವಿಭಾಗ

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.