ಬಿಜೆಪಿ ಜತೆ ಕಾಂಗ್ರೆಸ್ ಒಳ ಒಪ್ಪಂದ ಬೇಡ: ವಿಶ್ವನಾಥ್
Team Udayavani, Aug 13, 2018, 6:50 AM IST
ಮೈಸೂರು: ಕಾಂಗ್ರೆಸ್ ಜಾತ್ಯತೀತ ಪಕ್ಷವಾಗಿಯೇ ಉಳಿಯಬೇಕಿದ್ದು, ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಳ್ಳಬೇಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಯಾರಿಗೂ ಗೊತ್ತಿಲ್ಲದಂತೆ ವಿಜಯಪುರದಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು.
ವಿಜಯಪುರದ ಬಿಜೆಪಿ ಜಿಲ್ಲಾಧ್ಯಕ್ಷನನ್ನು ರಾತ್ರೋರಾತ್ರಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ನಾಗಠಾಣಾ ಕ್ಷೇತ್ರದ ಟಿಕೆಟ್ ನೀಡಲಾಯಿತು. ಕಾಂಗ್ರೆಸ್‌ನ ಒಬ್ಬ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಬಿಜೆಪಿ-ಕಾಂಗ್ರೆಸ್ ನಡುವೆ ಈ ರೀತಿ ಹೊಂದಾಣಿಕೆ ನಡೆದಿದ್ದು, ಇದು ಜನರಿಗೆ ಗೊತ್ತಾಗಬೇಕಿದೆ. ಹೀಗಾಗಿ ಕಾಂಗ್ರೆಸ್ಸಿಗರು ಜಾತ್ಯತೀತರಾಗಿರಿ, ಅದನ್ನು ಮಿಕ್ಸ್ ಮಾಡಬೇಡಿ ಎಂದು ತಿಳಿಸಿದರು. ಮುಂದಿನ ಸಂಸತ್ ಚುನಾವಣೆ ನರೇಂದ್ರ ಮೋದಿ ಮತ್ತು ಎಚ್.ಡಿ.ದೇವೇಗೌಡರ ನಡುವೆ ನಡೆದರೂ ಯಾವುದೇ ಅಚ್ಚರಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುತ್ತಿದ್ದೇನೆ. 100 ವರ್ಷ ಚೆನ್ನಾಗಿರಲಿ ಎಂದು ಆಶಿಸುತ್ತೇನೆ. ರಾಷ್ಟ್ರದ ರಾಜಕಾರಣದಲ್ಲಿ ಉಳಿಯಬೇಕೆಂದು ಹೇಳುತ್ತೇನೆ. ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಸಂಬಂಧ ಹೇಗಿದೆ ಎಂಬುದಕ್ಕೆ ಇದಕ್ಕಿಂತ ಬೇರೇನು ಬೇಕು?.
– ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.