ವಿಚ್ಛೇದನ ಕೋರಿದ ದಂಪತಿ ಒಂದು ಮಾಡಿದ ಸುಪ್ರೀಂಕೋರ್ಟ್ ಸಿಜೆ
Team Udayavani, Aug 13, 2018, 6:15 AM IST
ಹುಬ್ಬಳ್ಳಿ: ನಗರದ ನೂತನ ತಾಲೂಕು ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೆ ಆಗಮಿಸಿದ್ದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಲೋಕ ಅದಾಲತ್ನಲ್ಲಿ ಕೌಟುಂಬಿಕ ವ್ಯಾಜ್ಯವೊಂದನ್ನು ಖುದ್ದಾಗಿ ಇತ್ಯರ್ಥ ಪಡಿಸಿದರು.
ನಗರದ ಕೇಶ್ವಾಪುರ ನಿವಾಸಿ ಜಗದೀಶ ಶೆಳಗಿ ಹಾಗೂ ಪಾರ್ವತಿ ದಂಪತಿ ವಿಚ್ಛೇದನ ಪ್ರಕರಣ ವಿಶೇಷ ಲೋಕ ಅದಾಲತ್ನಲ್ಲಿ ಸುಪ್ರೀಂಕೋರ್ಟ್ ಸಿಜೆ ದೀಪಕ್ ಮಿಶ್ರಾ ಮುಂದೆ ವಿಚಾರಣೆಗೆ ಬಂತು. ನ್ಯಾಯಿಕ ಸಂಧಾನಕಾರರಾದ ಮಹೇಶ ಪಾಟೀಲ ಹಾಗೂ ವಕೀಲ ಸಂಧಾನಕಾರರಾದ ಶೋಭಾ ಪವಾರ ಪ್ರಕರಣ ನಿರ್ವಹಿಸುತ್ತಿದ್ದರು. ವಿಚ್ಛೇದನ ಕೋರಿದ ದಂಪತಿ ಹಾಗೂ ಮಕ್ಕಳಾದ ರೋಹಿತ, ನಂದಿನಿ, ರಕ್ಷಿತಾ ಹಾಗೂ ಸಿದ್ಧಾರ್ಥ ಅವರನ್ನು ಮುಖ್ಯ ನ್ಯಾಯಮೂರ್ತಿಗಳ ಎದುರು ಹಾಜರುಪಡಿಸಿದರು.
ದೀಪಕ್ ಮಿಶ್ರಾ ಅವರು ಪತಿ-ಪತ್ನಿಗೆ ಕೌಟುಂಬಿಕ ಮೌಲ್ಯಗಳನ್ನು ತಿಳಿಸಿ, ಒಂದಾಗಲು ಸಲಹೆ ನೀಡಿದರು. ನ್ಯಾಯಮೂರ್ತಿಗಳ ಮಾತು ಕೇಳಿದ ದಂಪತಿ ತಮ್ಮ ವಿಚ್ಛೇದನ ಪ್ರಕರಣ ಹಿಂಪಡೆದು ಮರಳಿ ಒಂದಾದರು. ಭಾನುವಾರ ಒಟ್ಟು 9 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಶೇಷ ಲೋಕ ಅದಾಲತ್ನಲ್ಲಿ ಬಗೆಹರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.