ಲೋಕಸಭಾ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಇನ್ನಿಲ್ಲ
Team Udayavani, Aug 13, 2018, 10:08 AM IST
ನವದೆಹಲಿ: ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ (89ವರ್ಷ) ಅವರು ಸೋಮವಾರ ಬೆಳಗ್ಗೆ ಕೋಲ್ಕತಾದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ತೀವ್ರ ಅನಾರೋಗ್ಯದಿಂದ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸೋಮನಾಥ್ ಚಟರ್ಜಿ ಅವರಿಗೆ ಇಂದು ಬೆಳಗ್ಗೆ ಮತ್ತೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
89 ವರ್ಷದ ಸೋಮನಾಥ್ ಚಟರ್ಜಿ ಅವರು ಕಿಡ್ನಿ ಸಂಬಂಧಿ ಸೋಂಕಿನಿಂದ ಬಳಲುತ್ತಿದ್ದರು. ತೀವ್ರ ಅನಾರೋಗ್ಯಗೊಂಡಿದ್ದ ಚಟರ್ಜಿಯವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಯಾಲಿಸೀಸ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಅವರಿಗೆ ಲಘು ಹೃದಯಾಘಾತವಾಗಿತ್ತು.
ಐಸಿಯುನಲ್ಲಿ ಚಟರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿರುವುದಾಗಿ ಪಿಟಿಐ ನಿನ್ನೆ ವರದಿ ಮಾಡಿತ್ತು. ಕಳೆದ 40 ದಿನಗಳಿಂದ ಚಟರ್ಜಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನಗಳ ಹಿಂದಷ್ಟೇ ಆರೋಗ್ಯ ಸುಧಾರಿಸಿದ ಬಳಿಕ ಅವರನ್ನು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗಿತ್ತು.
ಸಿಪಿಐ(ಎಂ)ನ ಹಿರಿಯ ಮುಖಂಡರಾಗಿರುವ ಸೋಮನಾಥ್ ಚಟರ್ಜಿ ಅವರು 10 ಬಾರಿ ಲೋಕಸಭಾ ಸಂಸದರಾಗಿದ್ದರು, 2004ರಿಂದ 2009ರವರೆಗೆ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಯುಪಿಯ(1) ಸರ್ಕಾರಕ್ಕೆ ಸಿಪಿಐ(ಎಂ) ನೀಡಿದ್ದ ಬೆಂಬಲ ವಾಪಸ್ ಪಡೆದ ನಂತರ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ಚಟರ್ಜಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಪಿಐ(ಎಂ) ಸೋಮನಾಥ್ ಚಟರ್ಜಿ ಅವರನ್ನು ಪಕ್ಷದಿಂದ ಉಚ್ಛಾಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.