ಬಿಎಸ್‌ವೈ ಮತ್ತೆ ಸಿಎಂ ಆಗೋದು ಖಚಿತ
Team Udayavani, Aug 13, 2018, 12:40 PM IST
ಕೆಂಗೇರಿ: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೂಮ್ಮೆ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಶಿವಕುಮಾರ ಸ್ವಾಮಿ ಸಭಾಮಂಟಪದಲ್ಲಿ ಅಯೋಜಿಸಿದ್ದ ಬೆಂಗಳೂರು ನಗರ ಜಿಲ್ಲೆ ಯಶವಂತಪುರ ಮಂಡಲ ಆಯೋಜಿಸಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಪಕ್ಷ ಸಂಘಟಿಸಬೇಕು. ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಬಲವರ್ಧನೆ ಮಾಡಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಗದ್ದೆಗಳಿಗೆ ಭತ್ತ ನಾಟಿ ಮಾಡಿದ ಮಾತ್ರಕ್ಕೆ ರೈತರ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ನಟ ಜಗ್ಗೇಶ್ ಮಾತನಾಡಿ, ಸಂಘಟನಾತ್ಮಕವಾಗಿ ಸಾಗದೇ ನಾನು ಎಂದು ಮೆರೆದವರು ನಾಶವಾಗುವರು ಎನ್ನುವುದಕ್ಕೆ ಸಿದ್ದರಾಮಯ್ಯ ಅವರೇ ನಿದರ್ಶನ ಎಂದು ತಿಳಿಸಿದರು.
ಈ ವೇಳೆ ಯಶವಂತಪುರ ಮಂಡಲ ಅಧ್ಯಕ್ಷ ಮಾರೇಗೌಡ, ಪಾಲಿಕೆ ಸದಸ್ಯರಾದ ಶಾರಧ, ಜಿಪಂ ಮಾಜಿ ಸದಸ್ಯ ಶಿವಕುಮಾರ, ಪಾಲಿಕೆ ಮಾಜಿ ಸದಸ್ಯ ರ.ಅಂಜಿನಪ್ಪ, ಉಗ್ರಿ ನರಸಿಂಹಯ್ಯ, ಜೆ.ರಮೇಶ್, ಕೆ.ಆರ್.ಸುಧೀರ್, ಅನಿಲ್ ಚಳಗೇರಿ, ನವೀನ್ ಯಾದವ್, ಧನಲಕ್ಷ್ಮೀ, ಪ್ರೇಮಾ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.