28ರೊಳಗೆ ಅಧಿಸೂಚನೆ ಹೊರಡಿಸಲು ನಿರ್ದೇಶನ
Team Udayavani, Aug 14, 2018, 6:35 AM IST
ಬೆಂಗಳೂರು: ಅವಧಿ ಪೂರ್ಣಗೊಳ್ಳಲಿರುವ ಮಹಾನಗರ ಪಾಲಿಕೆಗಳ ಮೇಯರ್,ಉಪಮೇಯರ್, ನಗರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಹಂಚಿಕೆ ಕುರಿತು ಆ.28ರೊಳಗೆ ಅಧಿಸೂಚನೆ ಹೊರಡಿಸುವಂತೆ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಕುರಿತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಸೋಮವಾರ
ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ
ವಿಭಾಗೀಯ ಪೀಠ, ಈ ಸೂಚನೆ ನೀಡಿದೆ. ವಿಚಾರಣೆ ವೇಳೆ ರಾಜ್ಯಸರ್ಕಾರದ ಪರ ವಕೀಲರು,ಅವಧಿ ಪೂರ್ಣಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲು ಪಟ್ಟಿ ಅಧಿಸೂಚನೆಯನ್ನು ಹೊರಡಿಸಿ ಚುನಾವಣಾ ಆಯೋಗಕ್ಕೆ ಸಲ್ಲಿಸುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಆಗಸ್ಟ್ 28ಕ್ಕೆ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.