ಸರ್ಕಾರಿ ಸಂಸ್ಥೆಗಳಿಂದ ಕಳಪೆ ಕಾಮಗಾರಿ


Team Udayavani, Aug 14, 2018, 6:00 AM IST

social-welfare-department-karnataka.jpg

ಬೆಂಗಳೂರು:  ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕಾಗಿ ಕೈಗೊಂಡ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸದ ಮತ್ತು ಗುಣಮಟ್ಟ ಕಾಯ್ದುಕೊಳ್ಳದ ಕಾರಣ ಸರ್ಕಾರಿ ಸಂಸ್ಥೆಯಾದ ಕೆಆರ್‌ಐಡಿಎಲ್‌ ಹಾಗೂ ಜಿಲ್ಲಾ ನಿರ್ಮಿತಿ ಕೇಂದ್ರಗಳಿಗೆ ಇನ್ನು ಮುಂದೆ ಯಾವುದೇ ಕಾಮಗಾರಿಗಳನ್ನು ವಹಿಸದೆ ಇರಲು ಸಮಾಜ ಕಲ್ಯಾಣ ಇಲಾಖೆ ನಿರ್ಧರಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅಧೀನದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ (ಕೆಆರ್‌ಐಡಿಎಲ್‌ -ಹಿಂದಿನ ಕರ್ನಾಟಕ ಭೂಸೇನಾ ನಿಗಮ)  ಹಾಗೂ  ಜಿಲ್ಲಾ ನಿರ್ಮಿತಿ ಕೇಂದ್ರಗಳು ಇನ್ನು ಮುಂದೆ ಸಮಾಜ ಕಲ್ಯಾಣ ಇಲಾಖೆಯ ಯಾವುದೇ ಕಾಮಗಾರಿ ಕೈಗೊಳ್ಳುವಂತಿಲ್ಲ.  ಕಾಮಗಾರಿ ಗುಣಮಟ್ಟ ಮತ್ತು ಕಾಲಮಿತಿ ಪಾಲನೆ ಸಂಬಂಧ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಸಮಾಜ ಕಲ್ಯಾಣ ಇಲಾಖೆ ಈ  ಆದೇಶ ಹೊರಡಿಸಿದೆ.

ಸರ್ಕಾರಿ ಅಧೀನ ಸಂಸ್ಥೆ ನಿರ್ವಹಣೆ ಬಗ್ಗೆಯೇ ಮತ್ತೂಂದು ಇಲಾಖೆ ನಿರ್ಬಂಧ ಹೇರಿರುವುದು ಇಲ್ಲಿ ಗಮನಾರ್ಹ.
ಗುತ್ತಿಗೆದಾರರ ಕಿರಿಕಿರಿ, ಮಧ್ಯವರ್ತಿಗಳ ಹಾವಳಿ ತಡೆ, ದುಬಾರಿ ವೆಚ್ಚಕ್ಕೆ ಕಡಿವಾಣ, ತ್ವರಿತವಾಗಿ ಕಾಮಗಾರಿ ಕೈಗೊಳ್ಳುವ ಹಾಗೂ ಜನರಿಗೆ ಸೇವಾ ಸೌಲಭ್ಯ ಕಲ್ಪಿಸುವ ಕಾಮಗಾರಿಗಳನ್ನು ಸರ್ಕಾರಿ ಸಂಸ್ಥೆಯಿಂದಲೇ ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಹಯೋಗದಲ್ಲಿ ಕೆಆರ್‌ಐಡಿಎಲ್‌ (ಹಿಂದಿನ ಕರ್ನಾಟಕ ಭೂಸೇನಾ ನಿಗಮ) ರಚನೆಯಾಗಿತ್ತು. ಅದರಂತೆ ಬಹಳಷ್ಟು ಇಲಾಖೆಗಳು ಆಯ್ದ ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ಗೆ ವಹಿಸುತ್ತಿವೆ.

ಸಮಾಜ ಕಲ್ಯಾಣ ಇಲಾಖೆಯು ವಾರ್ಷಿಕವಾಗಿ ನೂರಾರು ಕೋಟಿ ರೂ. ಮೊತ್ತದ ಆಯ್ದ ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ ಹಾಗೂ ಜಿಲ್ಲಾ ನಿರ್ಮಿತಿ ಕೇಂದ್ರಗಳಿಗೆ ವಹಿಸುತ್ತಿದೆ. ಆದರೆ ಈ ಎರಡೂ ಸಂಸ್ಥೆಗಳ ಕಾರ್ಯ ನಿರ್ವಹಣೆ ಬಗ್ಗೆ ಅಪಸ್ವರ ಕೇಳಿಬಂದಿದೆ.

ಗುಣಮಟ್ಟದ ಕೊರತೆ
ಕೆಆರ್‌ಐಡಿಎಲ್‌ ಹಾಗೂ ಜಿಲ್ಲಾ ನಿರ್ಮಿತಿ ಕೇಂದ್ರಗಳು ಕೈಗೊಂಡಿರುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಣದಿರುವುದನ್ನು ಸಮಾಜ ಕಲ್ಯಾಣ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಸರ್ಕಾರಿ ಸಂಸ್ಥೆ ಎಂಬ ಕಾರಣಕ್ಕೆ ವಹಿಸಿದ ಕಲ್ಯಾಣ ಕಾರ್ಯಕ್ರಮದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳದ ಸಂಸ್ಥೆಗಳು ನಿರ್ವಹಿಸದ ಕಾಮಗಾರಿಗಳ ತಾಳಿಕೆ- ಬಾಳಿಕೆ ಬಗ್ಗೆ ಸಂಶಯ ಮೂಡುವಂತಾಗಿದೆ. ಜತೆಗೆ ಅನುದಾನವೂ ಸದ್ಬಳಕೆಯಾಗದಂತಾಗಿದೆ.

ಕಾಲಮಿತಿ ಪಾಲನೆ ಇಲ್ಲ
ಸಾಮಾನ್ಯವಾಗಿ ಟೆಂಡರ್‌ ಪ್ರಕ್ರಿಯೆಗೆ ಕಾಲಾವಕಾಶ ಬೇಕಾಗುತ್ತದೆ. ಟೆಂಡರ್‌ ಆಹ್ವಾನಿಸಿದರೂ ಗುತ್ತಿಗೆದಾರರಿಂದ ಸ್ಪಂದನೆ ಸಿಗದಿದ್ದರೆ, ಕೇವಲ ಒಂದು ಗುತ್ತಿಗೆ ಸಂಸ್ಥೆಯಷ್ಟೇ ಪಾಲ್ಗೊಂಡರೆ ಟೆಂಡರ್‌ ರದ್ದಾಗಿ ಮತ್ತೆ ಟೆಂಡರ್‌ ಆಹ್ವಾನಿಸಬೇಕಾಗುತ್ತದೆ. ಇದರಿಂದ ಸಮಯ ಪೋಲಾಗುವ ಕಾರಣ ನೇರವಾಗಿ ಕೆಆರ್‌ಐಡಿಎಲ್‌, ನಿರ್ಮಿತಿ ಕೇಂದ್ರಗಳಿಗೆ ಕಾಮಗಾರಿ ವಹಿಸಲಾಗುತ್ತದೆ. ಆದರೆ ಇಲ್ಲಿಯೂ ಸಾಕಷ್ಟು ವಿಳಂಬವಾಗುತ್ತಿರುವುದರಿಂದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹಿನ್ನಡೆಯಾಗುತ್ತಿದೆ ಎಂಬುದು ಇಲಾಖೆ ಆರೋಪ.

ಹೆಚ್ಚು ವೆಚ್ಚ
ಟೆಂಡರ್‌ ಆಹ್ವಾನಿಸಿದರೆ ಗುತ್ತಿಗೆದಾರರ ನಡುವೆ ಸ್ಪರ್ಧೆ ಏರ್ಪಟ್ಟು ಕಾಮಗಾರಿ ಮೊತ್ತಕ್ಕಿಂತಲೂ ಕಡಿಮೆ ಮೊತ್ತಕ್ಕೆ ಟೆಂಡರ್‌ ಮಂಜೂರಾಗುವ ಸಾಧ್ಯತೆ ಹೆಚ್ಚು. ಇದರಿಂದ ಹಣ ಉಳಿತಾಯವಾಗುತ್ತದೆ. ಆದರೆ ಕೆಆರ್‌ಐಡಿಸಿಎಲ್‌ಗೆ ಕಾಮಗಾರಿ ವಹಿಸಿದರೆ ಶೇ.100ರಷ್ಟು ವೆಚ್ಚದ ಜತೆಗೆ ಜಿಎಸ್‌ಟಿ, ಕಾರ್ಮಿಕರ ಶುಲ್ಕ, ಮೂರನೇ ವ್ಯಕ್ತಿ ಪರಿವೀಕ್ಷಣೆ ಹಾಗೂ ಆಡಳಿತಾತ್ಮಕ ವೆಚ್ಚಕ್ಕಾಗಿ ಕಾಮಗಾರಿ ವೆಚ್ಚದ ಶೇ.18.05ರಷ್ಟು ಹೆಚ್ಚುವರಿ ಶುಲ್ಕ ಭರಿಸಬೇಕಾಗುತ್ತದೆ. ಅಂದರೆ ಒಟ್ಟು ಶೇ.18.05ರಷ್ಟು ಶುಲ್ಕ ಭರಿಸಬೇಕಿದ್ದು, ಹೊರೆ ಎನಿಸುತ್ತದೆ.

ಈ ಎಲ್ಲ ಕಾರಣಗಳಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಇವುಗಳ ಆಡಳಿತ ವ್ಯಾಪ್ತಿಯಲ್ಲಿರುವ ನಿಗಮಗಳು, ಸಂಸ್ಥೆ ಹಾಗೂ ಕೇಂದ್ರಗಳು ಇನ್ನು ಮುಂದೆ ಯಾವುದೇ ಕಾಮಗಾರಿಯನ್ನು ಕೆಆರ್‌ಐಡಿಎಲ್‌ ಹಾಗೂ ಜಿಲ್ಲಾ ನಿರ್ಮಿತಿ ಕೇಂದ್ರಗಳಿಗೆ ವಹಿಸಬಾರದು. ನಿಯಮಾನುಸಾರ ಟೆಂಡರ್‌ ಆಹ್ವಾನಿಸಿ ಹಂಚಿಕೆ ಮಾಡುವಂತೆ ಇಲಾಖೆ ಆ.10ರಂದು ಆದೇಶ ಹೊರಡಿಸಿದೆ.

ಅಕ್ರಮ ಆರೋಪ
ಕೆಆರ್‌ಐಡಿಎಲ್‌ ಕೈಗೊಳ್ಳುವ ಕಾಮಗಾರಿಗಳ ಅನುಷ್ಠಾನದಲ್ಲೂ ಅಕ್ರಮಗಳಿವೆ. ಆರ್ಥಿಕ ವರ್ಷದ ಅಂತ್ಯದಲ್ಲಿ ಅಂದರೆ ಫೆಬ್ರುವರಿ, ಮಾರ್ಚ್‌ನಲ್ಲಿ ಆಯ್ದ ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ಗೆ ವಹಿಸಿರುವುದಾಗಿ ಹಣ ವರ್ಗಾಯಿಸಲಾಗುತ್ತದೆ. ಇದರಿಂದ ಆ ವರ್ಷದಲ್ಲೇ ಅನುದಾನ ಬಳಸಲಾಗಿದೆ ಎಂಬಂತಾಗುತ್ತದೆ. ಆದರೆ ಕಾಮಗಾರಿ ಜಾರಿಯಾಗುವುದಿಲ್ಲ. ಹೊಸ ಆರ್ಥಿಕ ವರ್ಷದಲ್ಲಿ ಕೆಆರ್‌ಐಡಿಎಲ್‌ನಿಂದ ಆ ಹಣ ವಾಪಸ್‌ ಪಡೆಯಲಾಗುತ್ತದೆ. ಇದರಿಂದ ಕಾಮಗಾರಿ ಅನುಷ್ಠಾನವಾಗದೆ, ಫ‌ಲಾನುಭವಿವಳಿಗೆ ಸೌಲಭ್ಯಗಳು ಸಿಗದಂತಾಗುತ್ತದೆ. ಆ ಹಿನ್ನೆಲೆಯಲ್ಲಿ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

– ಎಂ. ಕೀರ್ತಿಪ್ರಸಾದ್‌
 

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.