ಆರ್.ಎನ್. ಶೆಟ್ಟಿ ಅವರಿಗೆ 90ನೇ ಜನ್ಮದಿನದ ಸಂಭ್ರಮ
Team Udayavani, Aug 15, 2018, 6:00 AM IST
ಬೆಂಗಳೂರು: ಅರವತ್ತರ ದಶಕದಲ್ಲಿ ಆರಂಭಿಸಿದ ಮೂಲ ಸೌಕರ್ಯ ಕಂಪೆನಿಯ ಮೂಲಕ ಹೆದ್ದಾರಿ, ರೈಲ್ವೆ ಸುರಂಗ, ಜಲಾಶಯ, ಅಣೆಕಟ್ಟು, ಕಟ್ಟಡಗಳು ಸೇರಿದಂತೆ ಮಹತ್ವದ ಜನೋಪಕಾರಿ ಯೋಜನೆಗಳನ್ನು ಸಾಕಾರ ಗೊಳಿಸುವ ಜತೆಗೆ 15,000 ಉದ್ಯೋಗ ಕಲ್ಪಿಸಿದ ಹಿರಿಮೆಗೆ
ಪಾತ್ರರಾದ ಉದ್ಯಮಿ ಡಾ.ಆರ್. ಎನ್.ಶೆಟ್ಟಿ ಅವರಿಗೆ ಬುಧವಾರ 90ನೇ ಹುಟ್ಟುಹಬ್ಬದ ಸಂಭ್ರಮ. ಮೂಲ ಸೌಕರ್ಯ, ಕೈಗಾರಿಕಾ, ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ವಾಣಿಜ್ಯ, ಶೈಕ್ಷಣಿಕ, ಇಂಧನ ಹಾಗೂ ನೀರಾವರಿ ಸೇರಿ ಇತರೆ ಕ್ಷೇತ್ರದಲ್ಲಿ ತಮ್ಮದೇ ವಿಶಿಷ್ಟ ಛಾಪು ಮೂಡಿಸಿರುವ ಆರ್.ಎನ್.ಶೆಟ್ಟಿ ಅವರು ಜನೋಪಕಾರಿ ಜತೆಗೆ ಸಮಾಜಮುಖೀ ಕಾರ್ಯದಲ್ಲೂ ತೊಡಗಿಸಿಕೊಂಡು ಮಾದರಿ ಎನಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದ ಮಧ್ಯಮ ವರ್ಗದ ಕುಟುಂಬದಲ್ಲಿ 1928ರ ಆ.15ರಂದು ಜನಿಸಿದ ಡಾ. ರಾಮ ನಾಗಪ್ಪ ಶೆಟ್ಟಿ ಅವರು ಡಿಪ್ಲೊಮಾ ಶಿಕ್ಷಣ ಪಡೆದಿದ್ದಾರೆ. ನಂತರ ತಮ್ಮ ಕೌಶಲ್ಯ ಹಾಗೂ ಉದ್ಯಮಶೀಲತೆಯ ಮೂಲಕ ನಾನಾ ಕ್ಷೇತ್ರಗಳಲ್ಲಿ ಹೊಸ ಮೈಲುಗಲ್ಲು
ಗಳನ್ನು ಸೃಷ್ಟಿಸಿ ಅನುಕರಣೀಯರೆನಿಸಿದ್ದಾರೆ. ಹಿಡಕಲ್ ಜಲಾಶಯ, ತಳ್ಳಿಹಳ್ಳ ಜಲಾಶಯ, ಸೂಪಾ ಜಲಾಶಯ, ಗೇರುಸೊಪ್ಪ ಜಲಾಶಯ, ಮಾಣಿ ಅಣೆಕಟ್ಟು, ವಾರಾಹಿ ಜಲವಿದ್ಯುತ್ ಯೋಜನೆ, ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ, ಕೊಂಕಣ ರೈಲ್ವೆ ಸುರಂಗ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸೇರಿ ಇತರೆ ಮಹತ್ವದ ಮೈಲುಗಲ್ಲುಗಳನ್ನು ಮೂಲ ಸೌಕರ್ಯ ಕ್ಷೇತ್ರದಲ್ಲಿ ಸೃಷ್ಟಿಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನ ಕೂಸಾಗಿದ್ದ ಸುವರ್ಣ ಚತುಷ್ಪಥ ಯೋಜನೆಯಡಿ ಹೆದ್ದಾರಿ 4ರಡಿ ಧಾರವಾಡ- ಬೆಳಗಾವಿ ನಡುವೆ ಕಡಿಮೆ ಅವಧಿಯಲ್ಲಿ
ಗುಣಮಟ್ಟದ ರಸ್ತೆ ನಿರ್ಮಿಸಿದ ಪ್ರಶಂಸೆಗೂ ಪಾತ್ರರಾಗಿದ್ದಾರೆ.
ಬಾಲ್ಯದಿಂದಲೂ ತಾವು ನಿತ್ಯ ಆರಾಧಿಸುತ್ತಾ ಬಂದ ಮುರುಡೇಶ್ವರದ ಪುರಾತನ ಶಿವ ದೇವಾಲಯದ ನವೀಕರಣದ ಜತೆಗೆ 249 ಅಡಿ ಎತ್ತರದ ರಾಜಗೋಪುರ ಹಾಗೂ ಬೆಟ್ಟದ ಮೇಲೆ 123 ಅಡಿ ಎತ್ತರದ ಭವ್ಯ ಶಿವನಮೂರ್ತಿ ನಿರ್ಮಿಸಿದ್ದಾರೆ. ಲಿಫ್ಟ್ ಸೌಕರ್ಯವುಳ್ಳ ಬೃಹತ್ ರಾಜ ಗೋಪುರದಲ್ಲಿ ರಾಮಾಯಣದ ಕಲಾಕೃತಿಗಳನ್ನು ಪ್ರತಿಷ್ಠಾಪಿಸಿ ಪುಣ್ಯ ತಾಣವಾಗಿ ಮಾತ್ರವಲ್ಲದೆ ಪ್ರವಾಸಿ ತಾಣವನ್ನಾಗಿಯೂ ರೂಪಿಸಿದ ಹೆಗ್ಗಳಿಗೆ ಆರ್.ಎನ್.ಶೆಟ್ಟಿ ಅವರಿಗೆ ಸಲ್ಲುತ್ತದೆ.
ಔದ್ಯೋಗಿಕ ಕಾರ್ಯಗಳಷ್ಟೇ ಅಲ್ಲದೇ ಡಾ.ಆರ್.ಎನ್.ಶೆಟ್ಟಿ ಟ್ರಸ್ಟ್ ವತಿಯಿಂದ ಹಲವು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ನಗರ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣ, ವೃತ್ತಿಪರ ಶಿಕ್ಷಣದವರೆಗೆ ವಿದ್ಯಾಭ್ಯಾಸ ನೀಡುತ್ತಿದ್ದಾರೆ. ಹೀಗೆ ನಾನಾ ಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡಿರುವ ಆರ್.ಎನ್.ಶೆಟ್ಟಿಯವರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಪದವಿ, ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಸ್ಮಾರಕ
ಪ್ರಶಸ್ತಿ, ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕಾಸಿಯಾದ “ಕೈಗಾರಿಕಾ ರತ್ನ’ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಗೌರವಗಳು ಅರಸಿ ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.