ಮಹಾದಾಯಿ: ರಾಜ್ಯಕ್ಕೆ ಭಾಗಶಃ ಜಯ: ಕರ್ನಾಟಕಕ್ಕೆ 13.4 ಟಿಎಂಸಿ ನೀರು


Team Udayavani, Aug 15, 2018, 10:45 AM IST

x-19.jpg

ಹೊಸದಿಲ್ಲಿ: ಕರ್ನಾಟಕ ಮತ್ತು ಗೋವಾ ನಡುವೆ ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಹಾದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಮಂಡಳಿ ತೀರ್ಪು ಪ್ರಕಟಿಸಿದ್ದು, ತನ್ನ ಪಾಲಿನ ನೀರು ಪಡೆಯುವಲ್ಲಿ ಕರ್ನಾಟಕ ಭಾಗಶಃ ಯಶಸ್ವಿಯಾಗಿದೆ. ಮೂರೂ ರಾಜ್ಯಗಳಿಗೆ ನೀರು ಹಂಚಿಕೆ ಮಾಡಿರುವ ನ್ಯಾಯಮಂಡಳಿ ಕರ್ನಾಟಕಕ್ಕೆ 13.42 ಟಿಎಂಸಿ, ಗೋವಾಕ್ಕೆ 24 ಟಿಎಂಸಿ, ಮಹಾರಾಷ್ಟ್ರಕ್ಕೆ 1.30 ಟಿಎಂಸಿ ನೀರು ನೀಡಿದೆ. ಜತೆಗೆ ಮಹಾದಾಯಿ ನದಿ ನೀರನ್ನು ಮಲಪ್ರಭಾ ಕಡೆ ತಿರುಗಿಸಲು ಕೂಡ ನ್ಯಾಯಮಂಡಳಿ ಅನು ಮತಿ ನೀಡಿದ್ದು, ಇದರಿಂದ ಕರ್ನಾಟಕಕ್ಕೆ ಹನಿ ನೀರೂ ಬಿಡುವುದಿಲ್ಲ ಎಂದು ಹೇಳಿದ್ದಲ್ಲದೆ, ಕಳಸಾ- ಬಂಡೂರಿ ನಾಲಾ ಯೋಜನೆಗೆ ಇನ್ನಿಲ್ಲದಂತೆ ಕಾಡಿದ ಗೋವಾಕ್ಕೆ ಭಾರೀ ಹಿನ್ನಡೆಯಾಗಿದೆ. ಮಹಾದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾ| ಜೆ.ಎಂ. ಪಾಂಚಾಲ್‌ ನೇತೃತ್ವದ ನ್ಯಾಯಮಂಡಳಿ ಮಂಗಳವಾರ ತೀರ್ಪು ಪ್ರಕಟಿಸಿದ್ದು, ಸಮಗ್ರ ತೀರ್ಪನ್ನು 12 ಸಂಪುಟಗಳಲ್ಲಿ ಕೇಂದ್ರ ಸರಕಾರಕ್ಕೆ ಸಲ್ಲಿಕೆ ಮಾಡಿದೆ. 

ಮಹಾದಾಯಿ ನದಿಯಲ್ಲಿ ಶೇ. 75ರ ಅವಲಂಬನೆ ಆಧಾರದಲ್ಲಿ 188 ಟಿಎಂಸಿ ನೀರು ಲಭ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮಂಡಳಿ ಈ ಪೈಕಿ ಮೂರು ರಾಜ್ಯಗಳಿಗೆ ಒಟ್ಟಾರೆ 38.72 ಟಿಎಂಸಿ ನೀರು ಹಂಚಿಕೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ ಧನಾತ್ಮಕ ಅಂಶವೆಂದರೆ, ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗೆ ನೀರು ವಿಂಗಡಣೆ ಮಾಡಿ ನೀರು ತಿರುಗಿಸಲು ಅನುಮತಿ ನೀಡಿರುವುದು ಮತ್ತು ಮಹಾದಾಯಿ ನೀರಿನಿಂದ ಜಲವಿದ್ಯುತ್‌ ಯೋಜನೆ ಕೈಗೆತ್ತಿಕೊಳ್ಳಲು ಅನುಮೋದನೆ ಕೊಟ್ಟಿರುವುದು. ಈ ತೀರ್ಪಿನ ಬಗ್ಗೆ ಆಕ್ಷೇಪಗಳಿದ್ದರೆ ಅದನ್ನು ಸಂಬಂಧಿಸಿದ ನ್ಯಾಯಾಂಗದ ಮುಂದೆ ಪ್ರಶ್ನಿಸಲು ಅವಕಾಶವಿದೆ ಎಂದೂ ತೀರ್ಪಿನಲ್ಲಿ ಹೇಳಿದೆ.

ಪ್ರಾಧಿಕಾರ ರಚನೆಗೆ ಸೂಚನೆ
ಮಹಾದಾಯಿ ನದಿ ನೀರು ಹಂಚಿಕೆ ಮತ್ತು ಅದಕ್ಕೆ ಸಂಬಂಧಿಸಿದ ಯೋಜನೆಗಳ ಜಾರಿಗಾಗಿ ಮಹಾದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಬೇಕು ಎಂದು ನ್ಯಾಯಮಂಡಳಿ ಸೂಚಿಸಿದೆ. ಅಲ್ಲದೆ, ಈ ತೀರ್ಪು 2048ರ ಆಗಸ್ಟ್‌ 31ರವರೆಗೆ ಜಾರಿಯಲ್ಲಿರುತ್ತದೆ. ಅನಂತರ ಅದರಲ್ಲಿ ಬದಲಾವಣೆ ಮಾಡಬಹುದು. 

ತೀರ್ಪು ಜಾರಿ ಯಾವತ್ತಿನಿಂದ?
ನ್ಯಾಯಮಂಡಳಿಯ ತೀರ್ಪಿನ ಬಗ್ಗೆ ಕೇಂದ್ರ ಸರಕಾರ ಅಂತಾರಾಜ್ಯ ನದಿ ವಿವಾದ ಕಾಯ್ದೆಯನ್ವಯ ಗೆಜೆಟ್‌ ಅಧಿಸೂಚನೆ ಪ್ರಕಟಿಸಿದ ಬಳಿಕ ತೀರ್ಪು ಜಾರಿಯಾಗಲಿದೆ. ಗೋವಾ ಸ್ವಾಗತ ನ್ಯಾಯಮಂಡಳಿದ ಶಿಫಾರಸನ್ನು ಗೋವಾ ಸಿಎಂ ಮನೋಹರ ಪಾರೀಕರ್‌ ಸ್ವಾಗತಿಸಿದ್ದಾರೆ. 

ಸುಪ್ರೀಂ ಮೆಟ್ಟಿಲೇರುವುದು ಖಚಿತ
ನ್ಯಾಯಮಂಡಳಿ ನೀಡಿರುವ ತೀರ್ಪು ಪ್ರಶ್ನಿಸಿ ಮೂರೂ ರಾಜ್ಯಗಳು ಸುಪ್ರಿಂ ಕೋರ್ಟ್‌ ಮೊರೆ ಹೋಗುವುದು ಬಹುತೇಕ ಖಚಿತವಾಗಿದೆ.

ಟಾಪ್ ನ್ಯೂಸ್

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.