ಚಾಮೆತಡ್ಕ : ಮನೆಗಳಿಗೆ ನುಗ್ಗಿದ ನೆರೆ ನೀರು

Team Udayavani, Aug 15, 2018, 10:58 AM IST

15-agust-4.jpg

ಆಲಂಕಾರು: ಮಳೆ ಅಬ್ಬರಕ್ಕೆ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದೆ. ಆಲಂಕಾರು ಹಾಗೂ ಕುಂತೂರು ಗ್ರಾಮದ ಹಲವು ಮನೆಗಳಿಗೆ ನೆರೆ ನೀರು ನುಗ್ಗಿದ್ದು, ಹಲವು ತೋಟ ಗಳು ಜಲಾವೃತವಾಗಿವೆ. ಪೆರಾಬೆ ಗ್ರಾಮದ ನಾಲ್ಕು ಮನೆಗಳಿಗೆ ನೀರು ನುಗ್ಗಿದ್ದು, ಸಂತ್ರಸ್ತರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಆಲಂಕಾರು ಗ್ರಾಮದ ಚಾಮೆತ್ತಡ್ಕ ನಿವಾಸಿ ಇಸ್ಮಾಯಿಲ್‌ ಮನೆಗೆ ನೆರೆ ನೀರು ನುಗ್ಗಿದೆ. ಹನೀಫ್, ಇಸುಬು, ಬುಡೋನ್‌ ಸಾಹೇಬ್‌ ಹಾಗೂ ಇಬ್ರಾಹಿಂ ಅವರ ಮನೆಗಳೂ ಜಲಾವೃತವಾಗಿವೆ. ಇವರಿಗೆ ಸದ್ಯ ಮಹಮ್ಮದ್‌ ಪಿ.ಆರ್‌. ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದಾರೆ. ಮನೆ ಸಾಮಾನು, ಜಾನುವಾರುಗಳಿಗೂ ಜಾಗ ಕೊಟ್ಟಿದ್ದಾರೆ. ಇಸುಬು ಅವರ ಎಂಡೋ ಪೀಡಿತ ಮಗುವನ್ನು ಸ್ಥಳೀಯರು ಸುರಕ್ಷಿತವಾಗಿ ಕರೆ ತಂದಿದ್ದಾರೆ.

ನೀರಿನ ಮಟ್ಟ ಏರುತ್ತಿದ್ದು, ಮನೆಗಳೂ ಅಪಾಯದ ಅಂಚಿನಲ್ಲಿವೆ. ಈ ಮನೆಗಳನ್ನು ಸಂಪರ್ಕಿಸುವ ರಸ್ತೆಗಳೂ ಜಲಾವೃತವಾಗಿವೆ. ಆಲಂಕಾರು ಗ್ರಾಮದ ಕಮ್ತೀಲು ನಿವಾಸಿ ಹುಕ್ರಪ್ಪ ಅವರ ಮನೆ ಹೊರ ಜಗತ್ತಿನ ಸಂಪರ್ಕ ಕಳೆದುಕೊಂಡಿದೆ. ಕೋಡಾಡಿ ನಿವಾಸಿ ಚೆನ್ನಯ ಪೂಜಾರಿ ಅವರ ಒಂದು ಎಕರೆ ಭತ್ತದ ಗದ್ದೆ ಮುಳುಗಿದೆ.

1974ರಲ್ಲಿ ಚಾಮೆತ್ತಡ್ಕಕ್ಕೆ ನೆರೆ ಬಂದಿತ್ತು. 44 ವರ್ಷ ಗಳ ಬಳಿಕ ಮತ್ತೆ ನೆರೆ ನೀರು ಆವರಿಸಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಆಲಂಕಾರು ಗ್ರಾ.ಪಂ. ಅಧ್ಯಕ್ಷೆ ಸುನಂದಾ ಬಾರ್ಕುಲಿ, ಉಪಾಧ್ಯಕ್ಷ ಸುಧಾಕರ ಪೂಜಾರಿ ಕಲ್ಲೇರಿ, ಪೆರಾಬೆ ಗ್ರಾ.ಪಂ. ಕಾರ್ಯದರ್ಶಿ ಲಲಿತಾ ಜಿ.ಡಿ. ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.