ಬಂಟರ ಸಂಘ ಕುರ್ಲಾ-ಭಾಂಡೂಪ್‌:ಆಟಿಡೊಂಜಿ ದಿನ


Team Udayavani, Aug 15, 2018, 1:31 PM IST

1308mum03a.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ. 4 ರಂದು ಘಾಟ್‌ಕೋಪರ್‌ ಪೂರ್ವದ ಪಂತ್‌ನಗರದ ಕನ್ನಡ ವೆಲ್ಫೆàರ್‌ ಸೊಸೈಟಿಯ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ ಮಾತನಾಡಿ, ಮಹಾನಗರದಲ್ಲಿ ಯಾಂತ್ರಿಕ ಬದುಕಿನ ನಡುವೆಯೂ ಮಹಿಳೆಯರು ಒಂದಾಗಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಅಭಿನಂದನೀಯ ಎಂದರು.

ಈ ಆಚರಣೆಗಳಿಂದ ಮನುಷ್ಯ ಸಂಬಂ ಧಗಳು ಹತ್ತಿರವಾಗುತ್ತದೆ. ಹಿಂದಿನ ಕಾಲದ ಆಟಿ ತಿಂಗಳಿಗೂ ಇಂದಿನ ಕಾಲಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಆ ದಿನಗಳ ಕಷ್ಟ, ನಷ್ಟಗಳು ಇಂದಿಲ್ಲ. ಔಷಧೀಯ ಗುಣ ವುಳ್ಳ ಸೊಪ್ಪು ಪದಾರ್ಥಗಳನ್ನು ನಮ್ಮ ಹಿರಿ ಯರು ಉಪಯೋಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದರು. ಅಂದಿನ ಆಚಾರ, ವಿಚಾರಗಳನ್ನು ಇಂದಿನ ಮಕ್ಕಳಿಗೆ ತಿಳಿಯಪಡಿಸುವ ಇಂತಹ ಕಾರ್ಯಕ್ರಮಗಳು ನಿಜವಾಗಿಯೂ ಶ್ಲಾಘನೀಯ ಎಂದರು.

ವಿಶೇಷ ಅತಿಥಿಯಾಗಿ ಆಗಮಿಸಿದ ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪಾಧ್ಯಕ್ಷ ಸುಬ್ಬಯ್ಯ ಶೆಟ್ಟಿ ಮಾತನಾಡಿ, ಮಹಿಳೆಯರು ಒಗ್ಗೂಡಿ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತೋಷ ತಂದಿದೆ. ಮಹಿಳೆಯರು ಮುಂದೆ ಬಂದು ಸಮಾಜ ಸೇವೆಯಲ್ಲಿ ತೊಡಗುವಲ್ಲಿ ಪುರುಷರ ಬೆಂಬಲ, ಸಹಕಾರ ಮಹತ್ವದ್ದಾಗಿದೆ. ನಿಮ್ಮಿಂದ ಇನ್ನಷ್ಟು ಅರ್ಥಪೂರ್ಣ ಕಾರ್ಯಕ್ರಮಗಳು ಸದಾ ನಡೆಯುತ್ತಿರಲಿ ಎಂದು ಹಾರೈಸಿದರು.
ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕೋಶಾಧಿಕಾರಿ ಆಶಾ ವಿ. ರೈ, ಜತೆ ಕೋಶಾಧಿಕಾರಿ ರತ್ನಾ ಪಿ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಿನಿ ಶೆಟ್ಟಿ ಪ್ರಾರ್ಥನೆಗೈದರು. ರಂಗಕರ್ಮಿ ನಂದಳಿಕೆ ನಾರಾಯಣ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಯು. ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಮಹಿಳೆಯರು ಇದೇ ರೀತಿಯಲ್ಲಿ ಸಹಕರಿಸಿದರೆ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗುತ್ತದೆ. ಮಹಿಳಾ ವಿಭಾಗದ ಕಾರ್ಯಕ್ರಮಗಳಿಗೆ ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹ, ಸದಾಯಿರಲಿ ಎಂದರು. ಉಪಾಧ್ಯಕ್ಷೆ ಸಂಗೀತಾ ಸಿ. ಶೆಟ್ಟಿ ವಂದಿಸಿದರು. 
ಕೋಶಾಧಿಕಾರಿ ಡಾ| ಪಲ್ಲವಿ ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಸರೋಜಿನಿ ಎಸ್‌. ಶೆಟ್ಟಿ, 
ಜತೆ ಕೋಶಾಧಿಕಾರಿ ವೀಣಾ ಶೆಟ್ಟಿ ಸಹಕರಿಸಿದರು.

ಬಂಟರ ಸಂಘ ಮುಂಬಯಿ ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್‌ ಶೆಟ್ಟಿ, ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಭೂಮಿಕಾ ಶೆಟ್ಟಿ, ಸಮಿತಿಯ ಗೌರವ ಕಾರ್ಯದರ್ಶಿ ಗಿರೀಶ್‌ ಶೆಟ್ಟಿ, ಪ್ರಕಾಶ್‌ ಶೆಟ್ಟಿ, ಕೋಶಾಧಿಕಾರಿ ಭರತ್‌ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ತಾರನಾಥ್‌ ಶೆಟ್ಟಿ, ವಿಕಾಸ್‌ ರೈ, ಶಶಿ ಶೆಟ್ಟಿ, ವಿಜು ಶೆಟ್ಟಿ, ನವೀನ್‌, ಸೀತಾರಾಮ್‌ ಶೆಟ್ಟಿ, ಉದಯ್‌ ಎಲ್‌. ಶೆಟ್ಟಿ ವಿಕ್ರೋಲಿ, ಕೃಷ್ಣ ಶೆಟ್ಟಿ, ಸಾಧು ಶೆಟ್ಟಿ, ಚಂದ್ರಹಾಸ್‌ ಶೆಟ್ಟಿ, ನವೀನ್‌ ಶೆಟ್ಟಿ ಇನ್ನಾಬಾಳಿಕೆ, ಸಂತೋಷ್‌ ಶೆಟ್ಟಿ, ಹರೀಶ್‌ ಶೆಟ್ಟಿ ಅವರು ಉಪಸ್ಥಿತರಿದ್ದರು.

ಗೀತಾ ಎಸ್‌. ಶೆಟ್ಟಿ, ನಿರ್ಮಲಾ ಶೆಟ್ಟಿ, ಸುಕನ್ಯಾ ಶೆಟ್ಟಿ, ಸುಗಂಧಿ ಶೆಟ್ಟಿ, ಶಾಂತಾ ಎನ್‌. ಶೆಟ್ಟಿ, ಶಾಲಿನಿ ಶೆಟ್ಟಿ, ವಿನುತಾ ಶೆಟ್ಟಿ, ಜ್ಯೋತಿ ಶೆಟ್ಟಿ, ಮಲ್ಲಿಕಾ ಶೆಟ್ಟಿ, ವಿನುತಾ ಶೆಟ್ಟಿ, ಶರ್ಮಿಳಾ ಶೆಟ್ಟಿ, ವಜ್ರಾ ವಿ. ಶೆಟ್ಟಿ, ಗೀತಾ ಶೆಟ್ಟಿ, ಜ್ಯೋತಿ ಶೆಟ್ಟಿ, ಅನಿತಾ ಶೆಟ್ಟಿ, ದೀಪಾ ಶೆಟ್ಟಿ, ಸುರೇಖಾ ಶೆಟ್ಟಿ, ಸರಿತಾ ಶೆಟ್ಟಿ, ವಿದ್ಯಾ ಶೆಟ್ಟಿ, ವೇದಾ ಶೆಟ್ಟಿ, ವನಿತಾ ಶೆಟ್ಟಿ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ನಮ್ಮ ಸಮಾಜದಲ್ಲಿ ತೀರಾ ಬಡತನದಲ್ಲಿ ಬದುಕುತ್ತಿರುವ ಸಮಾಜ ಬಾಂಧವರ ಕಷ್ಟ, ಸುಖಗಳಿಗೆ ಸ್ಪಂದಿಸಿದರೆ ಮಾತ್ರ ನಮ್ಮ ಸಮಾಜ ಸೇವೆಗೆ ಸಾರ್ಥಕತೆ ಲಭಿಸುತ್ತದೆ. ಇಂದಿನ ಕಾರ್ಯಕ್ರಮವನ್ನು ಕಂಡಾಗ ಸಂತೋಷವಾಗುತ್ತಿದೆ. ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಯು. ಶೆಟ್ಟಿ ಅವರು ವಿಕ್ರೋಲಿ ಬಂಟ್ಸ್‌ ಮುಖಾಂತರ ಗುರುತಿಸಿಕೊಂಡು ಅಲ್ಲೂ ಬಹಳಷ್ಟು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಿದ ಶ್ರೇಯಸ್ಸನ್ನು ಹೊಂದಿದ್ದಾರೆ. ಪ್ರಸ್ತುತ ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಚುಕ್ಕಾಣಿಯನ್ನು ಹಿಡಿದು ಇಲ್ಲೂ ಮಹಿಳೆಯರನ್ನು ಸಂಘಟಿಸಿ ಕ್ರಿಯಾಶೀಲರಾಗಿದ್ದಾರೆ. ಅವರ ಕಾರ್ಯಕ್ರಮಗಳಿಗೆ ನಮ್ಮ ಪ್ರೋತ್ಸಾಹ, ಸಹಕಾರ ಸದಾಯಿದೆ.
-ಇಂದ್ರಾಳಿ ದಿವಾಕರ ಶೆಟ್ಟಿ, ಸಮನ್ವಯಕರು : ಮಧ್ಯ ಪ್ರಾದೇಶಿಕ ಸಮಿತಿಗಳು ಬಂಟರ ಸಂಘ ಮುಂಬಯಿ

ಸಮಿತಿಯ ಮಹಿಳೆಯರ ಉತ್ಸುಕತೆಯನ್ನು ಕಂಡಾಗ ಹೆಮ್ಮೆಯಾಗುತ್ತಿದೆ. ವೈದ್ಯಕೀಯ ಶಿಬಿರ, ಆರೋಗ್ಯ ಮಾಹಿತಿ ಶಿಬಿರ, ಆರೋಗ್ಯ ವಿಚಾರ ಸಂಕಿರಣ, ಶೈಕ್ಷಣಿಕ ಸಹಾಯ ಇನ್ನಿತರ ಕಾರ್ಯಕ್ರಮಗಳಲ್ಲಿ ಮಹಿಳಾ ವಿಭಾಗದ ಪಾತ್ರ ಮಹತ್ತರವಾಗಿದೆ. ಆಟಿಡೊಂಜಿ ದಿನ ಕಾರ್ಯಕ್ರಮವು ಯುವಪೀಳಿಗೆಗೆ ಬಹಳಷ್ಟು ಮಹತ್ವದ್ದಾಗಿದೆ. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಯು. ಶೆಟ್ಟಿ ಅವರ ತಂಡಕ್ಕೆ ನಮ್ಮ ಸಹಕಾರ, ಪ್ರೋತ್ಸಾಹ ಸದಾಯಿದೆ.
– ಸಿ.ಎ. ವಿಶ್ವನಾಥ ಶೆಟ್ಟಿ, ಕಾರ್ಯಾಧ್ಯಕ್ಷರು, ಬಂಟರ ಸಂಘ ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿ
 

ಟಾಪ್ ನ್ಯೂಸ್

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.