ಮಳೆ ಇಳಿಮುಖವಾದರೂ ನೆರೆ ಇಳಿದಿಲ್ಲ


Team Udayavani, Aug 16, 2018, 6:00 AM IST

ban16081806medn.jpg

ಬೆಂಗಳೂರು: ಕಳೆದೆರಡು ದಿನಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಿದೆ. ಆದರೆ, ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ತೀರ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಮಧ್ಯೆ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳು ಸೇರಿ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಪಾಯದ ಮಟ್ಟದಲ್ಲಿ ತುಂಗಭದ್ರಾ:
ತುಂಗಭದ್ರಾ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್‌ ನೀರನ್ನು ನದಿಗೆ ಹರಿಸುತ್ತಿರುವುದರಿಂದ ತುಂಗಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಕೃಷ್ಣಾ ಕೊಳ್ಳದ ಪ್ರದೇಶದಲ್ಲೂ ಮಳೆ ಆಗುತ್ತಿರುವುದರಿಂದ ನಾರಾಯಣಪುರ ಜಲಾಶಯದಿಂದ 1,13,000 ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ. ಇದರಿಂದಾಗಿ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. 

ಸುಮಾರು 700 ರಿಂದ 800 ಎಕರೆ ಜಮೀನು ಜಲಾವೃತವಾಗಿದೆ. ಈ ಗ್ರಾಮಗಳಲ್ಲಿ ಡಂಗುರ ಸಾರಿ ನದಿಯತ್ತ ಜನ, ಜಾನುವಾರು ತೆರಳದಂತೆ ಎಚ್ಚರಿಸಲಾಗುತ್ತಿದೆ.ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರಿಂದ ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಟೇಲರೀಸ್‌ ಅಣೆಕಟ್ಟಿನ ಎಲ್ಲ ಗೇಟ್‌ಗಳನ್ನು ಬುಧವಾರ ಸಂಜೆ ಮುಚ್ಚಲಾಗಿದೆ. ಇದರಿಂದ ಶರಾವತಿ ತೀರದ ಜನರಿಗೆ ನೆರೆ ಭೀತಿ ತಪ್ಪಿದೆ.

ಅಪಾಯ ಮಟ್ಟದಲ್ಲಿ ಕಾವೇರಿ:
ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟವನ್ನು 121.43 ಅಡಿಗೆ ಕಾಯ್ದಿರಿಸಿಕೊಳ್ಳಲಾಗಿದ್ದು, 1.20 ಲಕ್ಷ ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಹೇಮಾವತಿ ಜಲಾಶಯದಿಂದ 32 ಸಾವಿರ ಕ್ಯೂಸೆಕ್‌, ಹಾರಂಗಿ ಜಲಾಶಯದಿಂದ 65  ಸಾವಿರ ಕ್ಯೂಸೆಕ್‌ ನೀರು ಕೆಆರ್‌ಎಸ್‌ನತ್ತ ಹರಿದು ಬರುತ್ತಿದೆ. ಇದರಿಂದಾಗಿ ಕಾವೇರಿ ನದಿಯಲ್ಲಿ ಪ್ರವಾಹ ಸ್ಥಿತಿ ಮುಂದುವರೆದಿದೆ. ಟಿಪ್ಪು ಕಾಲದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗುವ ಹಂತ ತಲುಪಿದೆ. ನಿಮಿಷಾಂಬ ದೇವಾಲಯದ ಪ್ರವೇಶ ದ್ವಾರದವರೆಗೆ ಕಾವೇರಿ ನೀರು ಬಂದಿದೆ. ರಾಮಕೃಷ್ಣ ಮಂದಿರ ಜಲಾವೃತಗೊಂಡಿದೆ. ಮಠದ ಸಿಬ್ಬಂದಿಯನ್ನು ರಾತ್ರಿಯೇ ಪೊಲೀಸರು ಅಲ್ಲಿಂದ ತೆರವುಗೊಳಿಸಿ ಮಠಕ್ಕೆ ಬೀಗ ಹಾಕಿದ್ದಾರೆ.

ಯಗಚಿ ಭರ್ತಿ:
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಜೀವನದಿ ಯಗಚಿ 4 ವರ್ಷಗಳ ಬಳಿಕ ಭರ್ತಿಯಾಗಿದ್ದು, ಐದು ಕ್ರಸ್ಟ್‌ಗೇಟ್‌ಗಳ ಮೂಲಕ ನೀರು ಹರಿಸಲಾಗುತ್ತಿದೆ. ತಿ.ನರಸೀಪುರ ಸಮೀಪದ ತ್ರಿವೇಣಿ ಸಂಗಮ ಮೈದುಂಬಿ ಹರಿಯುತ್ತಿದ್ದು, ಹೆಮ್ಮಿಗೆ ಸೇತುವೆ ಮೇಲೆ ರಸ್ತೆ ಸಂಚಾರ ನಿಷೇಧಿಸಲಾಗಿದೆ.

ಶಾಲೆ, ಅಂಗನವಾಡಿಗೆ ರಜೆ:
ಕಾವೇರಿ ನದಿ ಪ್ರದೇಶದಲ್ಲಿರುವ ಪಾಂಡವಪುರ ತಾಲೂಕಿನ ಎಣ್ಣೆಹೊಳೆ ಕೊಪ್ಪಲು ಗ್ರಾಮದ ಶಾಲೆ ಮತ್ತು ಅಂಗನವಾಡಿ ಕೇಂದ್ರಕ್ಕೆ ರಜೆ ಘೋಷಣೆ ಮಾಡಲಾಗಿದೆ.

ಮುತ್ತತ್ತಿಗೆ ಪ್ರವೇಶ ನಿಷೇಧ
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಪ್ರವಾಸಿ ತಾಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಮುತ್ತತ್ತಿಗೆ ಪ್ರವೇಶಿಸುವ ಎಲ್ಲ ಮಾರ್ಗಗಳನ್ನು ಬಂದ್‌ ಮಾಡಲಾಗಿದೆ.

ಟ್ಯಾಂಕರ್‌ ಪಲ್ಟಿ: ಮೂವರ ಸಾವು
ಸಕಲೇಶಪುರ:
ಮಳೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ತಾಲೂಕಿನ ದೊಡ್ಡತಪ್ಪಲು ಸಮೀಪ ಹೆದ್ದಾರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಗ್ಯಾಸ್‌ ತುಂಬಿದ್ದ ಟ್ಯಾಂಕರ್‌ ಮಂಗಳವಾರ ರಾತ್ರಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. 

ಟ್ಯಾಂಕರ್‌ ಕ್ಲೀನರ್‌ ರಾಯಚೂರಿನ ಮಾನ್ವಿ ಮೂಲದ ವೆಂಕಟೇಶ್‌ (31) ಎಂಬುವರ ಮೃತದೇಹ ಮತ್ತೆಯಾಗಿದ್ದು, ಚಾಲಕ ಕೆ.ಆರ್‌ ಪೇಟೆ ತಾಲೂಕು ಕಿಕ್ಕೇರಿ ಸಮೀಪದ ಅನಗಳಲೆ ಗ್ರಾಮದ ಸಂತೋಷ್‌ (34)ನ ಶವ ಇನ್ನೂ ಪತ್ತೆಯಾಗಿಲ್ಲ.
ಇದೇ ವೇಳೆ, ಮಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಮತ್ತೂಂದು ಟ್ಯಾಂಕರ್‌ನ ಚಾಲಕ, ತನ್ನ ಟ್ಯಾಂಕರ್‌ಗೆ ಹ್ಯಾಂಡ್‌ ಬ್ರೇಕ್‌ ಹಾಕಿ, ಪ್ರಪಾತಕ್ಕೆ ಬಿದ್ದಿದ್ದ ಟ್ಯಾಂಕರ್‌ ನೋಡಲು ತೆರಳಿದ್ದ. ಈ ವೇಳೆ, ಹ್ಯಾಂಡ್‌ ಬ್ರೇಕ್‌ ವಿಫ‌ಲಗೊಂಡು ಈ ಟ್ಯಾಂಕರ್‌ ಮುಂದಕ್ಕೆ ಚಲಿಸಿತು. 

ಗಾಬರಿಗೊಂಡ ಚಾಲಕ ಮಂಗಳೂರು ಮೂಲದ ರಾಮ್‌ದೇವ್‌ (48), ಚಲಿಸುತ್ತಿದ್ದ ಟ್ಯಾಂಕರ್‌ ಹತ್ತಿ ನಿಲ್ಲಿಸಲು ಹೋದಾಗ ಟ್ಯಾಂಕರ್‌ನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ. ಈ ಮಧ್ಯೆ, ಟ್ಯಾಂಕರ್‌ ಉರುಳಿ, ಅನಿಲ ಸೋರಿಕೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಪೂರ್ಣವಾಗಿ ವಾಹನಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು.

ಶಿರಾಡಿಯಲ್ಲಿ ನಿರಂತರ ಭೂಕುಸಿತ:
ಶಿರಾಡಿಯಲ್ಲಿ ನಿರಂತರ ಭೂಕುಸಿತವಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಲಘುವಾಹನ ಸಂಚಾರ ಹಾಗೂ 15 ದಿನಗಳ ಕಾಲ ಭಾರೀ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಚಿಕ್ಕೋಡಿಯ 3 ಸೇತುವೆಗಳು ಜಲಾವೃತ:
ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ, ದೂಧಗಂಗಾ, ವೇದಗ‌ಂಗಾ ನದಿಗಳಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಚಿಕ್ಕೋಡಿ  ತಾಲೂಕಿನಲ್ಲಿ ಯಡೂರ-ಕಲ್ಲೋಳ, ದತ್ತವಾಡ-ಮಲಿಕವಾಡ ಹಾಗೂ ಕಾರದಗಾ-ಭೋಜ ಕೆಳಮಟ್ಟದ ಸೇತುವೆಗಳು ನೀರಿನಲ್ಲಿ ಮುಳುಗಿವೆ. ಹಿಡಕಲ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದ ಎಲ್ಲ 10  ಗೇಟ್‌ಗಳನ್ನು ತೆರೆದಿದ್ದು, ನದಿ ತೀರದ ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಗೋಕಾಕ್‌ ಜಲಪಾತ ಸಂಪೂರ್ಣ ತುಂಬಿಕೊಂಡು ಧುಮುಕುತ್ತಿದೆ.

ಟಾಪ್ ನ್ಯೂಸ್

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.