ಮತ್ತೆ ನಿಷ್ಕರ್ಷ
Team Udayavani, Aug 16, 2018, 11:55 AM IST
ಹಳೆಯ ಚಿತ್ರಗಳ ಹೆಸರಿಟ್ಟುಕೊಂಡು ಹೊಸ ಸಿನಿಮಾ ಮಾಡುವುದು ಇತ್ತೀಚೆಗೆ ಟ್ರೆಂಡ್ ಆಗಿದೆ. ಈಗಾಗಲೇ ಹಳೆಯ ಹೆಸರಿಟ್ಟುಕೊಂಡು, ಹಲವು ಹೊಸ ಚಿತ್ರಗಳು ತಯಾರಾಗಿದ್ದು, ಈಗ ಆ ಸಾಲಿಗೆ ಇನ್ನೊಂದು ಸೇರ್ಪಡೆ “ನಿಷ್ಕರ್ಷ’. ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದಲ್ಲಿ ಈ ಹಿಂದೆ ಮೂಡಿಬಂದಿದ್ದ “ನಿಷ್ಕರ್ಷ’ ದೊಡ್ಡ ಹಿಟ್ ಆಗಿತ್ತು. ಈಗ ಅದೇ ಹೆಸರಿನ ಹೊಸ ಚಿತ್ರದ ಚಿತ್ರೀಕರಣ ಆಗಸ್ಟ್ 20ರಿಂದ ಪ್ರಾರಂಭವಾಗಲಿದೆ. ಚಿತ್ರದ ಮುಹೂರ್ತಕ್ಕೆ ಪುನೀತ್ ಆಗಮಿಸಿ, ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಲಿದ್ದಾರೆ.
ಹಿಮಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು ಸಿ.ಎಂ. ವಿಜಯ್ ಎನ್ನುವವರು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಮನೋರಂಜನೆ, ಕುತೂಹಲ ಹಾಗೂ ಕೌಟುಂಬಿಕ ಕಥಾವಸ್ತು ಹೊಂದಿರುವ ಈ ಚಿತ್ರದಲ್ಲಿ ಅನಿಕೇತನ್ ನಾಯಕನಾಗಿ ಕಾಣಿಸಿಕೊಂಡರೆ, “ಹುಲಿರಾಯ’ ಚಿತ್ರದ ಮೂಲಕ ಪರಿಚಿತರಾದ ದಿವ್ಯ ಉರುಡುಗ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಇನ್ನು ಅನಂತ್ ನಾಗ್, ಸಾಯಿಕುಮಾರ್, ಕಿಶೋರ್, ಚಿಕ್ಕಣ್ಣ, ಅಚ್ಯುತ್ ಕುಮಾರ್, ಸುಧಾ ಬೆಳವಾಡಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹೊಸ “ನಿಷ್ಕರ್ಷ’ಕ್ಕಾಗಿ ಬೆಂಗಳೂರು, ಮೈಸೂರು, ರಾಜಸ್ತಾನ ಮುಂತಾದ ಕಡೆ 40 ದಿನಗಳ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು ಸರವಣನ್ ಅವರ ಛಾಯಾಗ್ರಹಣ ಮತ್ತು ಕೆ.ಎಂ. ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ
Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್ ಸ್ಟಾರ್
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.