ಜಿಎಸ್ಬಿ ಸಭಾ ಅಂಧೇರಿ: ಸಾಮೂಹಿಕ ಚೂಡಿಪೂಜೆ
Team Udayavani, Aug 16, 2018, 3:19 PM IST
ಮುಂಬಯಿ: ಜಿಎಸ್ಬಿ ಸಭಾ ಅಂಧೇರಿ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಸಾಮೂಹಿಕ ಚೂಡಿಪೂಜೆಯು ಆ. 12 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜೋಗೇಶ್ವರಿ ಪೂರ್ವದ ಶ್ರೀ ರಾಮೇಶ್ವರ ಮಂದಿರದಲ್ಲಿ ನಡೆಯಿತು.
ಜಿಎಸ್ಬಿ ಸಭಾ ಅಂಧೇರಿ ಇದರ ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯೆಯರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜಿಎಸ್ಬಿ ಸಭಾ ಅಂಧೇರಿ ಗೌರವ ಪ್ರಧಾನ ಕಾರ್ಯದರ್ಶಿ ಯು. ಪಿ. ಭಟ್ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿ ಶುಭಹಾರೈಸಿದರು.
ಮಹಿಳಾ ವಿಭಾಗದ ಪ್ರಮುಖ ರಾದ ಪುಷ್ಪಲತಾ ಕಾಮತ್ ಹಾಗೂ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ| ಅಕ್ಷತಾ ಮಲ್ಯ ಅವರು ದೀಪಪ್ರಜ್ವಲಿಸಿ ಭಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುಷ್ಪಲತಾ ಕಾಮತ್ ಅವರು ಚೂಡಿಪೂಜೆಯ ಮಹತ್ವ ಮತ್ತು ಉದದೇಶವನ್ನು ವಿವರಿಸಿದರು. ಡಾ| ಅಕ್ಷತಾ ಮಲ್ಯ ಅವರು ಆರೋಗ್ಯ ಭಾಗ್ಯದ ಬಗ್ಗೆ ಮಾಹಿತಿ ನೀಡಿ, ಮಹಿಳೆಯರು ಸಮಾಜ ಸೇವೆಯೊಂದಿಗೆ ತಮ್ಮ ಆರೋಗ್ಯದೆಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರು. ಕಾರ್ಯದರ್ಶಿ ಯು. ಪಿ. ಭಟ್ ವಂದಿಸಿದರು.
ಅತಿಥಿಗಳನ್ನು ಸಭಾದ ವತಿಯಿಂದ ಗೌರವಿಸಲಾಯಿತು.ಸಭಾದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗದವರು ಪಾಲ್ಗೊಂಡಿದ್ದರು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.