ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸಿ
Team Udayavani, Aug 16, 2018, 5:44 PM IST
ಹಾನಗಲ್ಲ: ಬಲಿಷ್ಠ ಭಾರತ ನಿರ್ಮಾಣವಾಗಬೇಕಾದರೆ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ದೇಶ ಭಕ್ತರ ತ್ಯಾಗ ಬಲಿದಾನ ಅರಿತು ನಡೆಯಬೇಕಿದೆ. ಸಿಕ್ಕ ಸ್ವಾತಂತ್ರ್ಯ ಸ್ವೇಚ್ಛಾಚಾರದಿಂದ ಬಳಸಬಾರದು ಎಂದು ಶಾಸಕ ಸಿ.ಎಂ.ಉದಾಸಿ ಹೇಳಿದರು.
ಬುಧವಾರ ಹಾನಗಲ್ಲಿನ ಕ್ರೀಡಾಂಗಣದಲ್ಲಿ ನಡೆದ 72ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು, ಭಾರತ ಇಂದು ವಿಶ್ವದ ಎಲ್ಲ ರಾಷ್ಟ್ರಗಳಿಂದ ಮೆಚ್ಚುಗೆ ಪಡೆದಿದೆ. ಬದ್ಧತೆ ಇರುವ ವ್ಯಕ್ತಿ ಈ ದೇಶದ ಪ್ರಧಾನಿಯಾದರೆ ಎಲ್ಲವೂ ಸಾಧ್ಯ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಿದ್ದಾರೆ. ಭ್ರಷ್ಟಾಚಾರ ಮುಕ್ತ, ಭಯಮುಕ್ತ, ಆತಂಕವಾದ ಮುಕ್ತ ಭಾರತ ನಿರ್ಮಾಣದಿಂದ ಹತ್ತು ಹಲವು ದಿಟ್ಟ ನಿರ್ಧಾರ ಕೈಗೊಂಡ ಫಲ ಇಂದು ಭಾರತ ಜಾಗತಿಕ ಮಟ್ಟದಲ್ಲಿ ಮೇಲೇರಲು ಸಾಧ್ಯವಾಗಿದೆ ಎಂದರು.
ಸ್ವಾತಂತ್ರ್ಯ ಪೂರ್ವ ಆರ್ಥಿಕವಾಗಿ ದುರ್ಬಲಗೊಂಡಿದ್ದರೂ ನೈತಿಕವಾಗಿ ಶ್ರೀಮಂತವಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಭಾರತ ಆರ್ಥಿಕವಾಗಿ ಶ್ರೀಮಂತವಾಗಿದ್ದರೂ ನೈತಿಕವಾಗಿ ದುರ್ಬಲರಾಗುತ್ತಿರುವುದು ವಿಷಾದದ ಸಂಗತಿ. ಹಣ ಮತ್ತು ಅಧಿಕಾರ ಎರಡು ಇದ್ದರೆ ಏನೆಲ್ಲ ಮಾಡಬಹುದು ಎನ್ನುವ ಮನೋಭಾವ ಹೋಗಬೇಕಾಗಿದೆ ಎಂದು ತಿಳಿಸಿದರು. ತಾಲೂಕು ತಹಶೀಲ್ದಾರ್ ಶಕುಂತಲಾ ಚೌಗಲಾ ಮಾತನಾಡಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ಪುರಸಭೆ ಅಧ್ಯಕ್ಷ ಎ. ಹಸಿನಾಬಿ ನಾಯ್ಕನವರ, ಮಾಜಿ ಅಧ್ಯಕ್ಷೆ ಯಲ್ಲವ್ವ ಕಂಚಿಗೊಲ್ಲರ, ಸದಸ್ಯ ರವಿರಾಜ ಕಲಾಲ, ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.