ಉಕ್ಕಿ ಹರಿದ ನೇತ್ರಾವತಿ: ಹಲವು ಪ್ರದೇಶ ಮುಳುಗಡೆ


Team Udayavani, Aug 17, 2018, 1:45 AM IST

ukki-harida-16-8.jpg

ಬಂಟ್ವಾಳ: ಸತತ ಮಳೆ, ಉಪ್ಪಿನಂಗಡಿಯಿಂದ ನೇತ್ರಾವತಿ ನದಿಯಲ್ಲಿ ನೀರು ಹರಿದು ಬರುತ್ತಿದ್ದು ಗುರುವಾರ ಮುಂಜಾನೆಯಿಂದಲೇ ನೆರೆ ಉಕ್ಕೇರಿ 3 ಗಂಟೆ ಸುಮಾರಿಗೆ ಅಪಾಯ ಮಟ್ಟ 9 ಮೀ. ದಾಟುವ ಮೂಲಕ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಹಲವಾರು ಮನೆಗಳು ಮುಳುಗಡೆ ಆಗಿದ್ದು, ಜನರು ಮತ್ತು ಸೊತ್ತುಗಳನ್ನು ತೆರವು ಮಾಡಲಾಗಿದೆ.

ಬುಧವಾರ ಸಂಜೆ ಹೊತ್ತಿಗೆ 7 ಮೀ.ಗೆ ಇಳಿದಿದ್ದ ನೆರೆ ನೀರು ಗುರುವಾರ ಬೆಳಗ್ಗೆ ಏರಿಕೆ ಕಂಡಿತು. ಜಕ್ರಿಬೆಟ್ಟು ರಾಯರಚಾವಡಿ, ಬಂಟ್ವಾಳ ಬಸ್ತಿಪಡ್ಪು, ಬಂಟ್ವಾಳ ಬಡ್ಡಕಟ್ಟೆ, ಕಂಚುಗಾರ ಪೇಟೆ, ಪಾಣೆ ಮಂಗಳೂರು ಆಲಡ್ಕ, ನಂದಾವರ ಸೇತುವೆ, ಪಾಣೆಮಂಗಳೂರು ಅಕ್ಕರಂ ಗಡಿ, ಜೈನರಪೇಟೆ, ಗೂಡಿನಬಳಿ, ಪಾಣೆಮಂಗಳೂರು ಸುಣ್ಣದಗೂಡು ಪ್ರದೇಶಗಳು ಜಲಾವೃತ ಆಗಿವೆ.


ಪಾಣೆಮಂಗಳೂರು ಭಯಂಕೇಶ್ವರ ದೇವಸ್ಥಾನದ ಸುತ್ತು ವಠಾರಕ್ಕೆ ನೀರು ಬಂದಿದೆ. ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದೇವಸ್ಥಾನದ ಹೊರಾಂಗಣ ರಸ್ತೆಯ ಮಟ್ಟಕ್ಕೆ ನೀರು ಏರಿಕೆಯಾಗಿದೆ. ಬಂಟ್ವಾಳದ ಅಗ್ನಿ ಶಾಮದ ಠಾಣೆ ನೀರಿನಿಂದ ಆವೃತ್ತವಾಗಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ದೋಣಿ ಬಳಸಿ ಅಲಡ್ಕದಲ್ಲಿ ಮನೆಯೊಳಗೆ ಇದ್ದವರನ್ನು ಸುರಕ್ಷಿತ ಪ್ರದೇಶಕ್ಕೆ ಸಾಗಿಸಲಾಗಿದೆ. ಡಿಸಿ ಶಶಿಕಾಂತ್‌ ಸೆಂಥಿಲ್‌ ಮತ್ತು ಹಿರಿಯ ಅಧಿಕಾರಿಗಳು ಮುಳುಗಡೆ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಶಾಲೆಗಳಿಗೆ ರಜೆ
ಭಾರೀ ಮಳೆ ಮತ್ತು ನೆರೆ ಸಾಧ್ಯತೆಯ ಮಾಹಿತಿ ಗುರುವಾರ ಬೆಳಗ್ಗೆ ಲಭ್ಯ ಆಗುತ್ತಿದ್ದಂತೆ ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಶಿವಪ್ರಕಾಶ್‌ ಅವರು ಪ್ರಾಥಮಿಕ, ಪ್ರೌಢ, ಅಂಗನವಾಡಿ ಶಾಲೆಗಳಿಗೆ ರಜೆಯನ್ನು ಘೋಷಿಸಿ ತುರ್ತು ಆದೇಶ ರವಾನಿಸಿದರು.


ಡ್ಯಾಂ ನೀರು ಹೊರಕ್ಕೆ

ಶಂಭೂರು ಎಎಂಆರ್‌ ಡ್ಯಾಂನಲ್ಲಿ ಗುರುವಾರ ಬೆಳಗ್ಗಿನಿಂದ ಪ್ರತೀ 3 ಗಂಟೆಗಳಿಗೆ ಒಮ್ಮೆ ಸೈರನ್‌ ಮೊಳಗಿಸಿ ಮುನ್ನೆಚ್ಚರಿಕೆ ನೀಡಲಾಯಿತು. ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಕ್ರಸ್ಟ್‌ ಗೇಟ್‌ಗಳನ್ನು ತೆರೆದು ನೀರು ಹೊರಕ್ಕೆ ಹರಿಸಲಾಗುತ್ತಿದೆ. ಇಲ್ಲಿ ಗರಿಷ್ಠ ನೀರಿನ ಮಟ್ಟ 18.9 ಮೀಟರಾಗಿದ್ದು, ನೀರಿನ ಮಟ್ಟವನ್ನು ಕಾಯ್ದುಕೊಳ್ಳುವುದಕ್ಕಾಗಿ ಎಲ್ಲ ಗೇಟ್‌ಗಳನ್ನು ತೆರೆದಿರುವುದಾಗಿ ಮೂಲಗಳು ಹೇಳಿವೆ. ತುಂಬೆ ಡ್ಯಾಂನಲ್ಲಿಯೂ ಎಲ್ಲ ಗೇಟ್‌ ಗಳನ್ನು ಗರಿಷ್ಠ ಮಟ್ಟಕ್ಕೆ ಏರಿಸುವ ಮೂಲಕ ನೀರು ಸರಾಗ ಹರಿಯುವಿಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮನಪಾ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.