ಮಳೆಗೆ ದ.ಕ. ತತ್ತರ; ತಗ್ಗು ಪ್ರದೇಶ ಜಲಾವೃತ


Team Udayavani, Aug 17, 2018, 8:50 AM IST

1608sub04a.jpg

ಮಂಗಳೂರು/ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಹಾಮಳೆ ಗುರುವಾರವೂ ಮುಂದುವರಿದಿದೆ.

ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಡಲಿನಬ್ಬರವೂ ಜೋರಾಗಿದ್ದು ಸಮುದ್ರ ತೀರದ ನಿವಾಸಿಗಳು ಭೀತಿಗೊಂಡಿದ್ದಾರೆ. 

ಉಪ್ಪಿನಂಗಡಿಯಲ್ಲಿ ಕುಮಾರಧಾರಾ ಮತ್ತು ನೇತ್ರಾವತಿ ನದಿಯ ಸಂಗಮ ಮಂಗಳವಾರ ಬಳಿಕ  ಮೂರು ದಿನಗಳ ಅವಧಿಯಲ್ಲಿ ಎರಡನೇ ಬಾರಿ ಸಂಗಮಕ್ಕೆ ಸಾಕ್ಷಿಯಾಗಿದೆ. ನದಿಗಳೆರಡು ಉಕ್ಕಿ ಹರಿದ ಪರಿಣಾಮ ಉಪ್ಪಿನಂಗಡಿ ಪೇಟೆಯ ತಗ್ಗು ಪ್ರದೇಶ ಜಲಾವೃತವಾಗಿ,ವ್ಯಾಪಾರಿಗಳಿಗೆ ಸಮಸ್ಯೆ ಉಂಟಾಗಿದೆ. 

ಅಲ್ಲಲ್ಲಿ ಗುಡ್ಡ ಕುಸಿತ 
ಉದನೆಯಿಂದ  ಸಕಲೇಶಪುರದ ಮಾರನಹಳ್ಳಿವರೆಗೂ ಹತ್ತಾರು ಕಡೆಗಳಲ್ಲಿ ಗುಡ್ಡ ಕುಸಿತವಾಗಿ ಸಂಚಾರ ಅಸ್ತವ್ಯಸ್ತ ವಾಗಿದೆ. ಉದನೆಯಲ್ಲಿ ಗುಂಡ್ಯ ಹೊಳೆ ಉಕ್ಕಿ ಹರಿದು ಹೆದ್ದಾರಿ ಜಲಾವೃತವಾಗಿದೆ. ಗುಂಡ್ಯ ಹಾಗೂ ಸಕಲೇಶಪುರದ ನಡುವೆ ಅರೆಬೆಟ್ಟದಲ್ಲಿ ರೈಲು ಹಳಿ ಮೇಲೆ ಭಾರೀ ಗುಡ್ಡ ಕುಸಿದಿದೆ. ಗುಂಡ್ಯ ಶಿರಾಡಿ, ಉದನೆ, ಇಚಿಲಂಪಾಡಿ, ಕುರಿಯಾಳಕೊಪ್ಪ, ಪಡುಬೆಟ್ಟು, ಪಟ್ರಮೆ, ಶಿಶಿಲ, ಶಿಬಾಜೆ, ಸುಳ್ಯ ಭಾಗಗಳಲ್ಲಿ ಹಲವು ಮನೆಗಳು ಹಾಗೂ ಕೃಷಿ ಮುಳುಗಡೆಯ ಭೀತಿ ಎದುರಿಸುತ್ತಿವೆ. ಕುಮಾರಧಾರಾ ನದಿಯಲ್ಲಿ ನೀರು ಹೆಚ್ಚಾಗಿಬಹುತೇಕ ಸೇತುವೆಗಳು ಮುಳುಗಿವೆ. ಸುಬ್ರಹ್ಮಣ್ಯ ದ್ವೀಪದಂ ತಾಗಿದೆ. ನೂರಾರು ಮಂದಿ ಸಂತ್ರಸ್ತರಾಗಿದ್ದು ಅವರಿಗೆ 2 ಗಂಜಿಕೇಂದ್ರ, ದೇಗುಲದಿಂದ ಆಹಾರ ಪೂರೈಸಲಾಗಿದೆ.

ಬೆಳ್ತಂಗಡಿ, ಬಂಟ್ವಾಳ, ಧರ್ಮಸ್ಥಳ, ಗುರುವಾಯನಕೆರೆ, ಮಡಂತ್ಯಾರು, ವೇಣೂರು, ಸುರತ್ಕಲ್‌, ಕಾಸರಗೋಡು, ಕಲ್ಮಕಾರು, ಕೊಲ್ಲಮೊಗ್ರು, ಹರಿಹರ, ಬಾಳುಗೋಡು, ಐನಕಿದು, ಗುತ್ತಿಗಾರು, ಮಡಪ್ಪಾಡಿ, ದೇವಚಳ್ಳ, ನಾಲ್ಕೂರು, ಕಮಿಲ, ಪಂಜ, ಬಳ್ಪ, ಪುತ್ತೂರು, ಯೇನೆಕಲ್ಲು ಭಾಗಗಳಲ್ಲಿ ಭಾರೀ ಗಾಳಿ ಮಳೆಯಾಗಿದೆ.

ತುಂಬಿ ಹರಿದ ತುಂಬೆ ಅಣೆಕಟ್ಟು 
ಬಂಟ್ವಾಳ:
ಮಂಗಳೂರಿಗೆ ನೀರುಣಿಸುವ ತುಂಬೆ  ಅಣೆಕಟ್ಟಿ ನಲ್ಲಿ ನೀರು ತುಂಬಿ ಹರಿಯುತ್ತಿದ್ದು, ತೀರ ಪ್ರದೇಶದಲ್ಲಿ ಆತಂಕ ನೆಲೆಸಿದೆ. ಜಕ್ರಿಬೆಟ್ಟು, ನಂದಾವರಗಳಲ್ಲಿ ನೆರೆನೀರು ನುಗ್ಗಿದೆ.

ಆ.25ರ ವರೆಗೆ
ಶಿರಾಡಿ ರಸ್ತೆ ಬಂದ್‌    
      
ರಾಷ್ಟ್ರೀಯ ಹೆದ್ದಾರಿ 75ರ ಮಾರನಹಳ್ಳಿಯಿಂದ ಅಡ್ಡಹೊಳೆ ವರೆಗಿನ ಶಿರಾಡಿಘಾಟ್‌ ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಾ ಗುತ್ತಿದ್ದು, ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ, ರಸ್ತೆ ದುರಸ್ತಿ ಆಗುವವರೆಗೂ ಆ.25ರ ಬೆಳಗ್ಗೆ 6 ಗಂಟೆವರೆಗೆ ಶಿರಾಡಿ ಘಾಟಿ ರಸ್ತೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರ ನಿಷೇಧಿಸಿ ಎಂದು ದ.ಕ. ಜಿಲ್ಲಾಧಿಕಾರಿ 
ಎಸ್‌.ಶಶಿಕಾಂತ್‌ ಸೆಂಥಿಲ್‌ ಅಧಿಸೂಚನೆ ಹೊರಡಿಸಿದ್ದಾರೆ.

ವೊಲ್ವೋಗೆ ಬದಲಿ ಮಾರ್ಗ 
ಶಿರಾಡಿ ಘಾಟಿ ಮತ್ತು ಸಂಪಾಜೆ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಬೆಂಗಳೂರಿಗೆ ಸಂಚರಿಸುವ ವೊಲ್ವೋ ಬಸ್‌ಗಳು ಹಗಲಲ್ಲಿ ಕಾರ್ಕಳ, ಕುದುರೆಮುಖ, ಕಳಸ, ಮೂಡಿಗೆರೆ, ಹಾಸನ ಮೂಲಕ ಸಾಗಲಿವೆ ಎಂದು ವಿಭಾಗಾಧಿಕಾರಿ ದೀಪಕ್‌ ರಾವ್‌ ಅವರು ತಿಳಿಸಿದ್ದಾರೆ.

ಮಂಗಳೂರು ರಸ್ತೆ 4ನೇ ದಿನ ಬಂದ್‌
ಮಡಿಕೇರಿ
: ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸತತ ನಾಲ್ಕನೇ ದಿನವೂ ಬಂದ್‌ ಆಗಿದ್ದು, ಮದೆನಾಡು ಬಳಿ ಕುಸಿದ ಮಣ್ಣನ್ನು ತೆರವು  ಗೊಳಿಸುತ್ತಿದ್ದಂತೆ ಮತ್ತೆ ಹಲವು ಭಾಗಗಳಲ್ಲಿ ಬರೆ ಕುಸಿಯುತ್ತಿದೆ. ಮಡಿಕೇರಿ ಸಮೀಪ ಕಾಲೂರಿನ ಜನ ದ್ವೀಪವಾಸಿ ಗಳಂತಾಗಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.