ಕೇರಳದಲ್ಲಿ ಪ್ರಕೃತಿ ಹಾನಿಗೆ ಜಿಲ್ಲೆಯ ಸ್ಪಂದನೆ: ಖಾದರ್
Team Udayavani, Aug 17, 2018, 9:19 AM IST
ಮಂಗಳೂರು: ಕೇರಳದಲ್ಲಿ ಭಾರೀ ಮಳೆ ಹಾಗೂ ನೆರೆಯಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಿರಿಯ ನಾಯಕರು, ಜನಪ್ರತಿನಿಧಿಗಳ ಜತೆಸೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ಕೇರಳದ ವಯನಾಡು ಜಿಲ್ಲೆಗೆ ಕಳುಹಿಸಿಕೊಡಲಾಗುವುದು. ಇದಕ್ಕಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸ ಲಾಗುವುದು ಎಂದು ಹೇಳಿದರು.
ಜಿಲ್ಲಾಡಳಿತದಿಂದಲೂ ಕ್ರಮ
ವಯನಾಡು ಜಿಲ್ಲೆಯಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತ ವತಿಯಿಂದಲೂ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ಕಳುಹಿಸಿಕೊಡಲು ಕ್ರಮ ವಹಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಯವರ ಜತೆ ಚರ್ಚಿಸಿದ್ದೇನೆ ಎಂದು ಖಾದರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.