ವಾಜಪೇಯಿ ಪಾರ್ಥಿವ ಶರೀರದ ದರ್ಶನಕ್ಕೆ ಬಂದ ಅಗ್ನಿವೇಶ್ ಮೇಲೆ ಹಲ್ಲೆ
Team Udayavani, Aug 17, 2018, 1:34 PM IST
ನವದೆಹಲಿ:ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಹೊರಟಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ನಡೆದಿದೆ.
ವಾಜಪೇಯಿ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲು ತಡೆಯೊಡ್ಡಿ, ವಿರೋಧ ವ್ಯಕ್ತಪಡಿಸಿದ ಗುಂಪು ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಹಂತದಲ್ಲಿ ಅವರನ್ನು ಓಡಿಸಿಕೊಂಡು ಹೋಗುತ್ತಿದ್ದಾಗ ಮಹಿಳೆಯೊಬ್ಬಳು ಚಪ್ಪಲಿಯನ್ನು ಕೈಯಲ್ಲಿ ಹಿಡಿದು ಹೊಡೆಯಲು ಮುನ್ನುಗ್ಗುತ್ತಿರುವುದು ಕೂಡಾ ವಿಡಿಯೋದಲ್ಲಿದೆ.
ಕೊನೆಗೂ ವಾಜಪೇಯಿ ಅವರ ಪಾರ್ಥಿವ ಶರೀರದ ದರ್ಶನ ಪಡೆಯದೆ ಸ್ವಾಮಿ ಅಗ್ನಿವೇಶ್ ಅವರು ವಾಪಸ್ ತೆರಳಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.
ಕಳೆದ ತಿಂಗಳು ಲಿಟ್ಟಿಪಾರಾ ಮೈದಾನದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ವಾಮಿ ಅಗ್ನಿವೇಶ್ ಮೇಲೆ ಜಾರ್ಖಂಡ್ ನ ಪಾಕುರ್ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತರ ಗುಂಪು ಹಲ್ಲೆ ನಡೆಸಿರುವ ಘಟನೆ ನಡೆದಿತ್ತು. ಇದು ಉದ್ದೇಶಪೂರ್ವಕದ ಹಲ್ಲೆ ಎಂದು ಸ್ವಾಮಿ ಅಗ್ನಿವೇಶ್ ಬಳಿಕ ಪ್ರತಿಕ್ರಿಯೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.