ಕಲಾವಿದರ ನೆರವಿಗಾಗಿ ಸಹಾಯವಾಣಿ
Team Udayavani, Aug 19, 2018, 10:44 AM IST
ಬೆಂಗಳೂರು: ಮಾಸಾಶನ ಸಹಿತ ಕಲಾವಿದರ ಅನುಕೂಲಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದ ಕನ್ನಡ ಭವನದಲ್ಲಿ “ಉಚಿತ ಸಹಾಯವಾಣಿ ಕೇಂದ್ರ’ವನ್ನು ಸ್ಥಾಪಿಸಿದ್ದು, ಶನಿವಾರ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ಚಾಲನೆ ನೀಡಿದರು.
ದೂರದ ಪ್ರದೇಶಗಳಿಂದ ಮಾಸಾಶನ ಸಹಿತ ಹಲವು ಉದ್ದೇಶಗಳಿಗಾಗಿ ಕಲಾವಿದರು ಕನ್ನಡ ಭವನಕ್ಕೆ ಭೇಟಿ ನೀಡುತ್ತಾರೆ.ಆದರೆ ಇವರಲ್ಲಿ ಹಲವರಿಗೆ ತಮಗೆ ಸಿಗುವ ಸವಲತ್ತುಗಳ ಬಗ್ಗೆ ಸಂಪೂರ್ಣ ಮಾಹಿತಿ ಇರುವುದಿಲ್ಲ. ಇಲಾಖೆಯ ಯಾವ ಅಧಿಕಾರಿಗಳನ್ನು ಭೇಟಿ ಮಾಡಬೇಕು ಎಂಬ ಬಗ್ಗೆ ತಿಳಿವಳಿಕೆ ಇರುವುದಿಲ್ಲ.ಇಂತಹ ಕಲಾವಿದರುಗಳಿಗೆ ಸಹಾಯವಾಣಿ ಕೇಂದ್ರ ಅಗತ್ಯ ನೆರವು ನೀಡಲಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿಂದ ಬರುವ ಕಲಾವಿದರುಗಳಿಗೆ ಮಾಸಾಶನ ಸಹಿತ ಇನ್ನಿತರ ಸವಲತ್ತುಗಳಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದರ ಬಗ್ಗೆ ಸರಿಯಾದ ತಿಳಿವಳಿಕೆ ಇರುವುದಿಲ್ಲ. ಅಂಥವರಿಗೆ ಸಹಾಯವಾಣಿ ಕೇಂದ್ರ ನೆರವಾಗಲಿದೆ. ಕಲಾವಿದರ ಅನುಕೂಲಕ್ಕಾಗಿಯೇ ಇದನ್ನು ತೆರೆಯಲಾಗಿದ್ದು, ಕಚೇರಿಯ ಸಮಯದಲ್ಲಿ ಮಾತ್ರ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಪಾರ ದರ್ಶಕ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುದು ಎಂದು ತಿಳಿಸಿದರು.
ಗ್ರಂಥಾಲಯ ಇಲಾಖೆಗೆ ಪುಸ್ತಕ ಹಸ್ತಾಂತರ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪ್ರಕಟಿಸಿರುವ ಹಲವು ಪುಸ್ತಕಗಳು ಸಹಿತ 1ಲಕ್ಷದ 5 ಸಾವಿರ ಪುಸ್ತಕಗಳನ್ನು ಸಚಿವೆ ಜಯಮಾಲಾ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ|ಸತೀಶ್ ಕುಮಾರ ಎಸ್.ಹೊಸಮನಿ ಅವರಿಗೆ ಹಸ್ತಾಂತರಿಸಿದರು. ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಐದು ವರ್ಷಗಳಷ್ಟು ಹಳೆಯದಾದ ವಿವಿಧ ಲೇಖಕರ ಪುಸ್ತಕಗಳನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ನೀಡಲಾಯಿತು. ಮುಂದಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಯ ಪ್ರಾಧಿಕಾರಗಳಲ್ಲಿರುವ ಎಲ್ಲಾ ಪುಸ್ತಕಗಳನ್ನು ಗ್ರಂಥಾಲಯ ಇಲಾಖೆಗೆ ನೀಡುವ ಭರವಸೆಯನ್ನು ಸಚಿವೆ ಜಯಾಮಾಲಾ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.