ಮಾಧ್ಯಮಗಳು ಮೌಲ್ಯ ಜಾಗೃತಗೊಳಿಸಲಿ
Team Udayavani, Aug 19, 2018, 11:59 AM IST
ಬೆಂಗಳೂರು: ಮಾಧ್ಯಮಗಳು ಜನರಲ್ಲಿನ ಮಾನವೀಯ ಮೌಲ್ಯಗಳನ್ನು ಜಾಗೃತಗೊಳಿಸಬೇಕು ಎಂದು ಆರ್ಟ್ ಆಫ್ ಲೀವಿಂಗ್‌ನ ಸಂಸ್ಥಾಪಕ ರವಿಶಂಕರ ಗುರೂಜಿ ಅಭಿಪ್ರಾಯಪಟ್ಟರು. ಭಾರತೀಯ ಕಾರ್ಯನಿತರ ಪತ್ರಕರ್ತರ ಒಕ್ಕೂಟವು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಶನಿವಾರ ಕನಕಪುರ ರಸ್ತೆಯ ಆರ್ಟ್ ಆಫ್ ಲೀವಿಂಗ್ ಸಂಸ್ಥೆಯಲ್ಲಿ ಆಯೋಜಿಸಿದ್ದ 71ನೇ ರಾಷ್ಟ್ರೀಯ ಮಂಡಳಿ ಸಮಾವೇಶದಲ್ಲಿ ಅವರು ಮಾತನಾಡಿದರು.
ಹೊರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಮಾನವೀಯ ಮೌಲ್ಯಗಳು ಇನ್ನೂ ಜೀವಂತವಾಗಿವೆ. ಮಾಧ್ಯಮಗಳು ಮನುಷ್ಯರಲ್ಲಿನ ಆ ಮಾನವೀಯ ಮೌಲ್ಯಗಳನ್ನು ಮತ್ತಷ್ಟು ಜಾಗೃತಗೊಳಿಸುವ ಕೆಲಸ ಮಾಡಬೇಕು. ಟಿ.ವಿ.ಮಾಧ್ಯಮಗಳಲ್ಲಿ ಬಿತ್ತರವಾಗುವ ಸುದ್ದಿಗಳು ಜನರ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತವೆ. ಹಾಗಾಗಿ ಬಹಳ ಎಚ್ಚರಿಕೆಯಿಂದ ಮಾಧ್ಯಮಗಳು ಕಾರ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.
ನಿವೃತ್ತ ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗ್ಡೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಕಾರ್ಯವೈಖರಿಯ ಕಾವಲುಗಾರನಂತೆ ಮಾಧ್ಯಮ ರಂಗ ಕೆಲಸ ಮಾಡಬೇಕು ಇತ್ತೀಚಿನ ದಿನಗಳಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು ಕುಸಿಯುತ್ತಿವೆ. ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಮಹಾಪ್ರಧಾನ ಕಾರ್ಯದರ್ಶಿ ಪರಮಾನಂದ ಪಾಂಡೆ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸೆೇರಿದಂತೆ ದೇಶದ ನಾನಾ ರಾಜ್ಯಗಳಿಂದ ಆಗಮಿಸಿದ್ದ ಪತ್ರಕರ್ತರು, ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
MUST WATCH
ಹೊಸ ಸೇರ್ಪಡೆ
Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ
Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ
Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್ ಖಾದರ್
ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.