ಕ್ವಾಂಟಮ್‌ ಕಟ್ಟಳೆಯ ಬೆರಗು, ಬೆಡಗು!


Team Udayavani, Aug 19, 2018, 7:22 AM IST

quantam.jpg

ಒಂದು ಗೋಡೆಯ ಈ ಬದಿಯಲ್ಲಿ ನೀವಿದ್ದೀರಿ. ಇನ್ನೊಂದು ಬದಿಯಲ್ಲಿ ನಿಮ್ಮ ಗೆಳೆಯರು ಕಾಲ್ಚೆಂಡು ಆಡುತ್ತಿದ್ದಾರೆ. ಆ ಚೆಂಡು ಗೋಡೆಗೆ ಬಡಿಯುತ್ತದೆ. ಬಡಿದು ಹಿಂಪುಟಿದು ಅವರ ಕಡೆಗೇ ಸಾಗುತ್ತದೆಯಲ್ಲವೇ? ಒಂದು ವೇಳೆ, ಗೋಡೆಯನ್ನು ತೂರಿ (ಗೋಡೆ ಒಡೆಯದೆಯೇ) ಆ ಚೆಂಡು ನಿಮ್ಮ ತಲೆ ಕುಟುಕುವಂತಿದ್ದರೆ?
ಹೀಗೂ ಯೋಚಿಸೋಣ. ಒಂದು ಪೆಟ್ಟಿಗೆಯಲ್ಲಿ ಯಾರೋ ಬೆಕ್ಕನ್ನಿಟ್ಟು ನಿಮಗೆ ಉಡುಗೊರೆಯಾಗಿ ನೀಡುತ್ತಾರೆ. ಆ ಪೆಟ್ಟಿಗೆಯನ್ನು ತೆಗೆದಾಗಮುದ್ದಾದ ಬೆಕ್ಕು ಮಿಯವ್‌ ಎನ್ನುತ್ತದೆ. ಒಂದು ವೇಳೆ ಉಸಿರು ಕಟ್ಟಿದ್ದಿದ್ದರೆ ಸತ್ತು ಹೋಗಿರುತ್ತದೆ. ಆದರೆ, ನೀವು ಆ ಪೆಟ್ಟಿಗೆ ತೆಗೆಯುವ ಮುನ್ನ ಅದು ಬದುಕಿತ್ತೋ, ಸತ್ತಿತ್ತೋ? ಯಾರೋ ಒಬ್ಬ ವಿಜ್ಞಾನಿ ಬಂದು ಅದು ಬದುಕಿಯೂ ಇತ್ತು, ಸತ್ತೂ ಇತ್ತು ಎಂದರೆ?

ಇಂತಹ ಬೆರಗನ್ನು ಮೂಡಿಸುವ ಭೌತಶಾಸ್ತ್ರದ ಕವಲೇ ಬಿಡಿ ಕಟ್ಟಳೆ (Quantum Theory). ಇದು ಹೊಮ್ಮಿದ ಬರೀ 30 ವರುಷಗಳಲ್ಲಿ, ನಮ್ಮ ಸುತ್ತಣದ ಅರಿವನ್ನೇ ಮೇಲೆಕೆಳಗೆ ಮಾಡಿದ ಕಟ್ಟಳೆ ಇದು. 19ನೇ ಶತಮಾನದ ಕೊನೆಯಲ್ಲಿ, ಜಗತ್ತಿನ ಹೆಚ್ಚಿನ ವಿಜ್ಞಾನಿಗಳು ಒಂದು ತೀರ್ಮಾನಕ್ಕೆ ಬಂದಿದ್ದರು. ತಿಳಿಯ ಬೇಕಾದ್ದನ್ನೆಲ್ಲ ಈಗಾಗಲೇ ತಿಳಿಯಲಾಗಿದೆ, ಇನ್ನು ಹೊಸದಾಗಿ ಕಂಡುಹಿಡಿಯುವಂಥದ್ದು ಏನೂ ಇಲ್ಲ ಎಂದು! ಅವರ ಪ್ರಕಾರ, ಒಂದು ವಸ್ತುವಿನ, ಈ ಹೊತ್ತಿನ ಇರುವು ಮತ್ತು ವೇಗವನ್ನು ಗೊತ್ತುಪಡಿಸಿ ದರೆ, ಮುಂದಿನ ಎಲ್ಲ ಹೊತ್ತುಗಳಲ್ಲಿ ಆ ವಸ್ತುವಿನ ಇರುವು ಮತ್ತು ವೇಗವನ್ನು, ಯಾವುದೇ ಗೊಂದಲಕ್ಕೆ ಎಡೆಯಿಲ್ಲದಂತೆ, ಕಂಡುಹಿಡಿಯಬಹುದಾಗಿತ್ತು. ಇದಕ್ಕೆ, ಹಳೆಯ ಇಲ್ಲವೇ ವಾಡಿಕೆಯ ಕದಲರಿಮೆ (Classical Mechanics) ಎಂದು ಕರೆಯ ಬಹುದು. ಇದರ ಪ್ರಕಾರ, ಜಗತ್ತಿನಲ್ಲಿ ಎಲ್ಲವೂ ನಿಶ್ಚಿತ. ಈ ತಿಳುವಳಿಕೆಯಲ್ಲಿ ತೇಲುತ್ತಿದ್ದ ಭೌತಶಾಸ್ತ್ರಜ್ಞರನ್ನು ಒಮ್ಮೆಲೆ ಬಡಿದೆಬ್ಬಿಸಿದ್ದು ಹಲವು ಪ್ರಯೋಗಗಳು. ಅವುಗಳಲ್ಲಿ ಮುಖ್ಯವಾದವು; ಬೆಳುಕು-ವಿದ್ಯುತ್‌ ಪರಿಣಾಮ ಮತ್ತು ಎಲೆಕ್ಟ್ರಾನ್‌ ಮೇಲ್ವಾಯುವಿಕೆ.
ಒಂದು ಲೋಹದ ಪಟ್ಟಿಯ ಮೇಲೆ ಬೆಳಕ‌ು ಚೆಲ್ಲಿದಾಗ, ಇಲೆಕ್ಟ್ರಾನಿಕ್  ಹೊರಹೊಮ್ಮುವ ಘಟನೆಗೆ, ಬೆಳುಕು-ವಿದ್ಯುತ್‌ ಪರಿಣಾಮ ಎಂದು ಕರೆಯುತ್ತಾರೆ. ಬೆಳಕನ್ನು ಅಲೆಯೆಂದು ತಿಳದು, ಈ ಘಟನೆಯನ್ನು ಮುಂಗಂಡರೆ, ಅದು ಕೊಡುತ್ತಿದ್ದ ಉತ್ತರಗಳೇ ಬೇರೆ. ಅರಸಿಕೆಯಲ್ಲಿ ಕಂಡುಬಂದಂತಹ ಫ‌ಲಿತಾಂಶಗಳೇ ಬೇರೆ! ಆದರೆ, ಅಲೆಬಾಗುವಿಕೆ ಮತ್ತು ಮೇಲ್ವಾಯುವಿಕೆಗಳೆಂಬ ವಿಚಾರಗಳಲ್ಲಿ ಬೆಳಕನ್ನು ಅಲೆಯೆಂದು ಅಂದುಕೊಳ್ಳದೇ ವಿಧಿಯಿಲ್ಲ. ಇಲ್ಲಿ, ಅಲೆಯೆಂದು ತಿಳಿದರೆ ಫ‌ಲಿತಾಂಶ ಸರಿಹೊಂದು ವುದಿಲ್ಲ. ಹಾಗಾಗಿ, ಬೆಳಕು ಸಣ್ಣ ಸಣ್ಣ ತುಣುಕುಗಳೂ ಆಗಿರಬೇಕು ಎಂಬು ದನ್ನು ವಿಜ್ಞಾನಿ ಗಳು ಮನಗಂಡರು. ಆ ತುಣುಕುಗಳು ಬಿಡಿ ಬಿಡಿ ಯಾ ಗಿಯೇ  ಸಾಮರ್ಥ್ಯ ವನ್ನು ಹೊಂದಿರುತ್ತವೆ. ಇನ್ನೊಂದೆಡೆ, ಇಲೆಕ್ಟ್ರಾನಳು ಎರಡು ಕುಳಿಗಳಿರುವ ತೆರೆಯ ಕಡೆಗೆ ಬಿಟ್ಟು, ಆ ತೆರೆಯ ಹಿಂದೆ ಇನ್ನೊಂದು ತೆರೆಯನ್ನಿಟ್ಟು, ಇಲೆಕ್ಟ್ರಾನ್‌ ಎಲ್ಲಿ ಬಂದು ಬಿದ್ದಿತು ಎಂದು ನೋಡುವ ಪ್ರಯೋಗವನ್ನು ಕೈಗೊಳ್ಳಲಾ ಯಿತು. ಇದರ ಫ‌ಲಿತಾಂಶವೂ ಸೋಜಿಗವನ್ನುಂಟು ಮಾಡಿತ್ತು. ಯಾವ ಕುಳಿಯಿಂದ ಹಾದು ಬಂದಿತು ಎಂದು ತಿಳಿಯಲು ಹೋಗದಿದ್ದರೆ, ಇಲೆಕ್ಟ್ರಾನ್‌ ಒಂದು ಅಲೆಯಂತೆ ನಡೆದುಕೊಳ್ಳುತ್ತಿತ್ತು. ಒಂದುವೇಳೆ, ಯಾವ ಕುಳಿಯಿಂದ ಬಂದಿತೆಂದು ತಿಳಿಯಹೊರ ಟರೆ, ಅದು ತನ್ನ ಅಲೆಯ ತೊಡಗನ್ನು ಕಳಚಿ, ತುಣುಕಿನ ಅರಿವೆಯನ್ನು ತೊಡುತ್ತಿತ್ತು! ಪ್ರಯೋ ಗಗಳನ್ನ ಮಾಡದೆ, ಒಂದು ಎಲೆಕ್ಟ್ರಾನು ಇದೇ ಕುಳಿಯ ಮೂಲಕ ಹೋದೀತು ಎಂದು ಬರಿದೇ ಕಲ್ಪಿಸಿದರೆ, ಕಡ್ಡಾಯವಾಗಿ ನಮ್ಮ ಊಹೆ ಕೆಟ್ಟಿàತು! ನಾವು ಗಮನಿಸದೇ ಇದ್ದರೆ, ಹಲವು ಕುಳಿಗಳ ಮೂಲಕ ಒಂದೇ ಎಲೆಕ್ಟ್ರಾನು, ಒಂದೇ ಹೊತ್ತಿನಲ್ಲಿ ಸಾಗುವ ಬೆಡಗನ್ನು ಹೊಂದಿರುವುದು ಕಂಡುಬಂದಿತು. ಆಗ, ವಿಜ್ಞಾನಿಗಳ ತಲೆಯಲ್ಲಿ ಮೂಡಿದ್ದ ಪ್ರಶ್ನೆ ಎಂದರೆ ಎಲೆಕ್ಟ್ರಾನ್‌ ಅಲೆಯೋ, ತುಣುಕೋ? ಇಲ್ಲ, ಎರಡೂನೋ?  ಈ ಬಗೆಯ ಗೊಂದಲಕ್ಕೆ wave Particle Duality ಎಂದು ಕರೆಯುತ್ತಾರೆ.
ಇಂತಹ ಹಲವಾರು ಬೆರಗುಗಳ ಬೆನ್ನು ಹತ್ತಿ ಅರಸಿದಾಗ, ವಿಜ್ಞಾನಿಗಳು ಕಂಡುಕೊಂಡ ದಿಟ, ನಿಜಕ್ಕೂ ನೆಲೆಬಿರಿಯುವಂಥಗಿತ್ತು. ನಾವು ಗಮನಿಸದೇ, ಇಲ್ಲ, ಒರೆದು ನೋಡದೆ, ಯಾವುದೇ ಒಂದು ವಸ್ತು (ಅಣು ಅಳತೆಯ ವಸ್ತುಗಳು), ಅಲೆಯೋ ಇಲ್ಲ, ತುಣುಕೋ ಎಂದು ಹೇಳಲು ಬರುವುದಿಲ್ಲ. ಮೊದಲನೆಯದಾಗಿ, ಅಲೆ ಮತ್ತು ತುಣುಕು ಎಂಬ ಬೇರ್ಮೆಗಳೇ ನಿರ್ದಿಷ್ಟವಾಗಿ ನಮ್ಮ ಜಗತ್ತಿನಲ್ಲಿ ಇಲ್ಲ! ಈ ಬೇರ್ಮೆಗಳು, ನಮ್ಮ ಹೊರ ಗಣ್ಣಿಗೆ, ಮನಸ್ಸಿಗೆ ಕಾಣುವ ಹುಸಿ ರೂಪಗಳಷ್ಟೆ. ನಾವು, ಅಣು ಅಳತೆಯ ಕಣಗಳ ಕುರಿತು ಮಾತ ನಾಡುವಾಗ, ಅವು ಒಂದು ನಿರ್ದಿಷ್ಟ ಎಡೆಯಲ್ಲಿ ದೊರಕುವ ಇಲ್ಲ, ನಿರ್ದಿಷ್ಟ ಬಿರುಸಿನಲ್ಲಿ ಸಾಗುವ ಆಗುವಳೆಯನ್ನಷ್ಟೇ ಹೇಳಬ ಹುದು. ಒಂದು ಎಡೆ ಯಲ್ಲಿ ಎಲೆಕ್ಟ್ರಾನಿನ ಇರುವಿನ ಆಗುವಳೆಯು ಹೆಚ್ಚಿ ದ್ದರೆ, ಅಲ್ಲಿ ಆ ಎಲೆಕ್ಟ್ರಾನ್‌ ಹೆಚ್ಚಿನ ಸಲ ಕಂಡುಬರು ವುದು ಎಂದಷ್ಟೇ ಹೇಳಬಹುದೇ ಹೊರತು, ಯಾವತ್ತಿಗೂ  ಕಂಡುಬರುತ್ತದೆ ಎಂದು ಹೇಳಬರುವುದಿಲ್ಲ. ಇನ್ನೊಂದು ಬಗೆಯಲ್ಲಿ ಹೇಳು ವುದಾದರೆ, ಈ ಜಗತ್ತು ಅನಿಶ್ಚಿತತೆಯಿಂದ ಕೂಡಿದೆ.
ಹಾಗಾದರೆ, ಈ ಕಣಗಳು ಒಳಪಡುವ ಕಟ್ಟಳೆಗಳು ಯಾವುವು? ಎಂದು ಅರಸಹೊರಟರೆ, ನಮಗೆ ಸಿಗು ವುದು ಅಲೆಯ ಎಣಿನಂಟು  ಈ ಎಣಿನಂಟು, ಒಂದು ವಸ್ತುವಿನ ಸ್ಥಿತಿಯ ಮಾಹಿತಿ ಯನ್ನು ಹೊಂದಿರುತ್ತದೆ. ಹಾಗೆಯೇ ಈ ಗಣಿತದ ನಂಟು, ಆ ಸ್ಥಿತಿಯ  ಸಾಧ್ಯತೆಗಳನ್ನು ತನ್ನ ಒಡಲೊಳಗೆ, ನೇರಣಿಗೆಯಲ್ಲ  ಅವಿತಿಟ್ಟುಕೊಂಡಿರುತ್ತದೆ. ಆ ವಸ್ತುವನ್ನು ಗಮನಿಸಿದಾಗ, ಯಾವುದೋ ಒಂದು ಸಾಧ್ಯತೆಯಷ್ಟೇ ಉಳಿದು, ಮಿಕ್ಕ ಸಾಧ್ಯತೆಗಳು ಕುಸಿಯುತ್ತವೆ. ಉದಾಹರಣೆಗೆ, ತುಂಬ ಸರಳಗೊಳಿಸಿ ಹೇಳುವು ದಾದರೆ, ಒಂದು ನಾಣ್ಯವನ್ನು ಮೆಲಕ್ಕೆ ಹಾರಿಸಿದಾಗ, ಅದರ ತಲೆಯೋ, ಬಾಲವೋ ಎಂಬ ಸ್ಥಿತಿಗಳೆರಡರ ಬೆರಕೆಯಾಗಿದೆ. ಅಂದರೆ, ನಾಣ್ಯವು ನೆಲಕ್ಕೆ ಬೀಳುವವರೆಗೂ, ಅದರ ಸ್ಥಿತಿಯು ತಲೆಯೂ ಹೌದು, ಬಾಲವೂ ಹೌದು. ಆ ಎರಡೂ ಸ್ಥಿತಿಗಳ ಬೆರಕೆಯಲ್ಲಿ ಇರುತ್ತದೆ. ಆದರೆ, ಕೊನೆಯಲ್ಲಿ ಆ ನಾಣ್ಯವು ನೆಲಕ್ಕೆ ಬಿದ್ದಾಗ , ಯಾವುದಾದರೂ ಒಂದು ಸ್ಥಿತಿ ಉಳಿದು, ಮಿಕ್ಕವು ಕುಸಿದುಹೋಗುತ್ತವೆ (ತಲೆ ಉಳಿದರೆ ಬಾಲ ಅಳಿದುಹೋಗುತ್ತದೆ).

ಇದೇ ತಿಳುವಳಿಕೆಯನ್ನು ಬೆಳಕಿಗೆ ಚಾಚಿದರೆ, ನಮಗೆ ಆ ಬೆಳಕು-ವಿದ್ಯುತ್‌ ಪರಿಣಾಮದ ಒಳತಿ ರುಳು ಗೊತ್ತಾಗುತ್ತದೆ. ಬೆಳಕು, ಆ ಲೋಹದೊಳಗಣ ಇಲೆಕ್ಟ್ರಾನ್‌ ಜೊತೆ ಸಂಪರ್ಕವನ್ನು ಏರ್ಪಡಿಸುವಾಗ, ಎಣಿನಂಟಿನ ಹಲವು ಸಾಧ್ಯತೆಗಳು ಕುಸಿದು, ಯಾವುದೋ ಒಂದು ಸಾಧ್ಯತೆ ಉಳಿದುಕೊಳ್ಳುತ್ತದೆ. ಹಾಗಾಗಿ, ಬೆಳಕನ್ನು “ತುಣುಕು’ ಎಂದು ಪರಿಗಣಿಸ ಬೇಕು. ಆದರೆ, ಅದು ಹಲವು ಕುಳಿಗಳ ಮೂಲಕ ಸಾಗುವಾಗಲೋ, ಇಲ್ಲ, ಒಂದು ಕಿರುವಸ್ತುವಿನ ಸುತ್ತ ಬಾಗುವಾಗಲೋ, ಎಲ್ಲ ಬಗೆಯ ಸಾಧ್ಯತೆಗಳನ್ನು ನಾವು ಪರಿಗಣಿಸಿ, ಬೆಳಕನ್ನು “ಅಲೆ’ಯೆಂದು ಗುರುತಿ ಸಬೇಕು. ಇದೇ ತೆರನಾದ ವಾದವನ್ನು ಎಲೆಕ್ಟ್ರಾನಳಿಗೂ ಇಲ್ಲವೇ ಯಾವುದೇ ಕಣಕ್ಕೂ ಹೂಡಬೇಕು! 
ಈಗ ಈ ಅರಿವನ್ನು, ನಮ್ಮ ಪೆಟ್ಟಿಗೆಯೊಳಗಿನ ಬೆಕ್ಕಿನ ಮೇಲೆ ಪ್ರಯೋಗ ಮಾಡೋಣ. ಈ ಪ್ರಯೋಗಕ್ಕೆ ಶ್ರೋಡಿಂಜರನ ಬೆಕ್ಕು ಇಲ್ಲವೇ ಶ್ರೋಡಿಂಜರನ ಯೋಚನೆಯ ಪ್ರಯೋಗ ಎಂಬ ಹೆಸರಿದೆ. ಅವನೇ ಈ ಪ್ರಯೋಗದ ಹೊಳ ಹನ್ನು ಮೊದಲು ಐನಸ್ಟೀನ್‌ಗೆ ತಿಳಿಸಿದ್ದು. ಅದರಂತೆ, ಆ ಪೆಟ್ಟಿಗೆಯೊಳಗೆ, ಒಂದಿಷ್ಟು ಸೂಸುವಿಕೆಗೆ ಒಳಪಡುವ ಅಣುಗಳನ್ನು ಇರಿಸ ಬೇಕು. ಅವುಗಳ ರಚನೆ ಹೇಗಿರಬೇಕೆಂದರೆ, ಒಂದು ವೇಳೆ ಸೂಸುವಿಕೆ ಮೂಡಿದಲ್ಲಿ, ಮಗ್ಗುಲಲ್ಲಿರುವ ಒಂದು ಕೊಡಲಿ ಹೈಡ್ರೋಸಯಾನಿಕ್‌ ಆಸಿಡ್‌ ತುಂಬಿರುವ ಒಂದು ಶೀಶದ ಮೇಲೆ ಬೀಳಬೇಕು ಮತ್ತು ಅದು ಒಡೆದಾಗ ಹೊರಸೂಸುವ ವಾಸನೆ ಯಿಂದ ಬೆಕ್ಕು ಸಾಯಬೇಕು. ಈಗ, ನಮ್ಮ ಗಮನ ದಲ್ಲಿರಬೇಕಾದದ್ದು ಏನೆಂದರೆ, ಸೂಸುವಿಕೆ ಕ್ವಾಂಟಮ… ಕಟ್ಟಳೆಗೆ ಒಳಪಡುತ್ತದೆ. ಅಂದರೆ, ಪೆಟ್ಟಿಗೆ ತೆಗೆದು ಗಮನಿಸುವವರೆಗೂ, ಅದು ಒಂದೇ ಹೊತ್ತಿ ನಲ್ಲಿ ಸೂಸುವ ಮತ್ತು ಸೂಸದ ಸ್ಥಿತಿಗಳಲ್ಲಿ ಬೆರೆತು ಇರಬೇಕು. ನಾವು ನೋಡಿದಾಗಷ್ಟೇ, ಒಂದು ಸ್ಥಿತಿ ಉಳಿದು, ಮಿಕ್ಕದ್ದು ಅಳಿಯುತ್ತದೆ. ಈಗ ಇಲ್ಲಿದೆ ಮಜಾ! ಬೆಕ್ಕಿನ ಬದುಕು ಮತ್ತು ಸಾವು ಎಂಬ ಪಾಡುಗಳು ಈ ಸೂಸುವ ಮತ್ತು ಸೂಸದ ಪಾಡುಗಳ ಮೇಲೆ ನಿಂತಿವೆ! ನಾವು ಪೆಟ್ಟಿಗೆಯನ್ನು ತೆರೆದು ನೋಡದವರೆಗೂ, ಬೆಕ್ಕು ಬದುಕು,  ಸಾವು ಎಂಬುದರ ಕಲಬೆರಕೆಯ ಸ್ಥಿತಿಯಲ್ಲಿ ಇರುತ್ತದೆ! 

ಬಿಡಿ ಕಟ್ಟಳೆಯ ಅರಿವು, ನಮ್ಮ ಜಗತ್ತನ್ನು ನೋಡುವ ಮತ್ತು ಅಥೆìçಸುವ ನಿಟ್ಟಿನಲ್ಲಿ ಹೊಸ ಕಣ್ಣನ್ನೇ ಒದಗಿಸಿದೆ. ಅದರ ಬಳಕೆಯಿಂದ ಲೇಸರ್‌, ಸೂಪರ್‌ ಕಂಡಕ್ಟರ್‌, ಕ್ವಾಂಟಮ್‌ ಕಂಪ್ಯೂಟರ್‌ನಂತಹ, ಮನುಜನ ಬೆಳವಣಿಗೆಯ ಗತಿಯನ್ನೇ ಮಾರ್ಪಡಿಸುವ ತಂತ್ರಜ್ಞಾನಗಳು ಹುಟ್ಟಿಕೊಂಡಿವೆ, ಹುಟ್ಟುಕೊಳ್ಳುವವೂ ಕೂಡ. ಬಿಡಿಕಟ್ಟಳೆಯ ವಿಸ್ಮಯ ಹೇಳುತ್ತಾ ಹೊರಟರೆ ಮುಗಿಯತೀರದು. ಜಗತ್ತಿನ ಗುಟ್ಟನ್ನು ರಟ್ಟುಮಾಡುವಲ್ಲಿ ಮೂಡಿರುವ ಎÇÉಾ ಥಿಯರಿಗಳ ಬೆನ್ನೆಲುಬು ಬಿಡಿ ಕಟ್ಟಳೆ. ತಾನೇ ಕಟ್ಟಲು ನೆರವಾಗಿದ್ದ ಈ ಕಟ್ಟಳೆಯನ್ನು, ದೇವರು ಜೂಜಾಡುವುದಿಲ್ಲ ಎನ್ನುತ್ತಾ, ಅಲ್ಲಗಳೆದಿದ್ದ ಐನಸ್ಟೀನ್‌ ಆದರೆ, ದೇವರು ಬರೀ ಜೂಜಾಡುತ್ತಿಲ್ಲ, ತಾನೇ ಆ ಜೂಜಿನಲ್ಲಿ ಸಿಲುಕಿ, ಹೊರಬರಲಾರದೆ ಒದ್ದಾಡುತ್ತಿದ್ದಾನೆ. ಅವನ ಇರುವು ಕ್ವಾಂಟಮ… ಕಟ್ಟಳೆಯೊಳಗೆ ಸೆರೆಯಾಗಿದೆ!
*ಅಮರ್‌ ಹೊಳೆಗದ್ದೆ 
 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.