ಜ್ಞಾನಾರ್ಜನೆಯೊಂದಿಗೆ ವ್ಯಕ್ತಿತ್ವ ನಿರ್ಮಾಣ
Team Udayavani, Aug 19, 2018, 5:10 PM IST
ಬೆಳಗಾವಿ: ಇಂಜಿನಿಯರಿಂಗ್ ಕಲಿಕೆಯ ನಾಲ್ಕು ವರ್ಷಗಳ ಕಾಲಾವಧಿಯಲ್ಲಿ ತಾಂತ್ರಿಕ ಸೂಕ್ತ ತಿಳಿವಳಿಕೆ, ಜ್ಞಾನ ಸಂಪಾದನೆಯ ಜತೆಗೆ ಪದವಿಯ ಹಂತಕ್ಕೆ ತಕ್ಕಂತೆ ಒಳ್ಳೆಯ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳುವುದು ತುಂಬಾ ಅಗತ್ಯವಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ| ಕರಿಸಿದ್ಧಪ್ಪ ಹೇಳಿದರು. ನಗರದ ಜೆಜಿಐ ಸಂಸ್ಥೆಯ ಮಚ್ಛೆಯಲ್ಲಿನ ಜೈನ ಇಂಜಿನಿಯರಿಂಗ್ ಕಾಲೇಜ್‌ದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಹೊಸದಾಗಿ ಪ್ರವೇಶ ಹೊಂದಿದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಂತ್ರಿಕ ಜ್ಞಾನ, ಸೂಕ್ತ ಕೌಶಲ್ಯ ರೂಢಿಸಿಕೊಳ್ಳಲು ನಿರಂತರ ಶ್ರಮಿಸಬೇಕು. ಇದಕ್ಕೆ ಪೂರಕವಾದ ಒಳ್ಳೆಯ ವ್ಯಕ್ತಿತ್ವ ಬೆಳಸಿಕೊಳ್ಳಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜೆಜಿಐ ನಿರ್ದೇಶಕ ಪ್ರೊ| ಆರ್.ಜಿ. ಧಾರವಡಕರ ಮಾತನಾಡಿ, ಜೆಜಿಐ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಾವತ್ತೂ ಪ್ರಯತ್ನಿಸುತ್ತ ಬಂದಿದೆ. ಸಂಸ್ಥೆಯ ಎರಡೂ ಇಂಜನಿಯರಿಂಗ್ ಕಾಲೇಜಿನಲ್ಲಿ ಪ್ರತಿಭಾವಂತ ಪ್ರಾಧ್ಯಾಪಕರಿದ್ದು, ಜ್ಞಾನಾರ್ಜನೆಯ ದೃಷ್ಟಿಯಿಂದ ವಿದ್ಯಾರ್ಥಿಗಳು ಅವರಿಂದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮಚ್ಛೆಯ ಜೈನ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಹಾಗೂ ನಿರ್ದೇಶಕ ಡಾ| ಕೆ.ಜಿ. ವಿಶ್ವನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೈನ ಇಂಜಿನಿಯರಿಂಗ್ ಮತ್ತು ಸಂಶೋಧನ ಕಾಲೇಜಿನ ಪ್ರಾಚಾರ್ಯ ಡಾ| ಎಸ್.ವಿ. ಗೋರಬಾಳ ಸ್ವಾಗತಿಸಿದರು. ಡೀನ್ ಪ್ರೊ| ಪಿ.ವೈ. ಚಿಟ್ಟಿ ವಿವಿಧ ಕೋರ್ಸ್‌ಗಳ ಬಗ್ಗೆ ಮಾಹಿತಿ ನೀಡಿದರು. ಜೈನ ಎಂಬಿಎ ಕಾಲೇಜಿನ ಮುಖ್ಯಸ್ಥ ಡಾ| ರೋಹಿತರಾಜ್ ನಿರೂಪಿಸಿದರು. ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥ ಡಾ| ಗುರುಪ್ರಸಾದ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.