ಎಸ್ಟೇಟ್‌ನಲ್ಲಿ ಹುಲಿ ಪ್ರತ್ಯಕ್ಷ: ಆತಂಕ
Team Udayavani, Aug 20, 2018, 12:40 PM IST
ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಣಸೂರು ವಲಯದ ಪಕ್ಕದಲ್ಲಿನ ತರಗನ್ ಎಸ್ಟೇಟ್‌ನಲ್ಲಿ ಕಳೆದೊಂದು ವಾರದಿಂದ ಹುಲಿ ಕಾಣಿಸಿಕೊಂಡಿರುವುದಲ್ಲದೆ, ಈಗಾಗಲೆ ಎರಡು ಜಾನುವಾರುಗಳನ್ನು ತಿಂದು ಹಾಕಿದ್ದು, ಮತ್ತೆರಡು ಜಾನುವಾರುಗಳನ್ನು ಗಾಯಗೊಳಿಸಿ ಆತಂಕ ಮೂಡಿಸಿತ್ತು.
ಅಲ್ಲದೆ ಹಸುವೊಂದರ ಮೇಲೆ ದಾಳಿ ಮಾಡುತ್ತಿದ್ದ ಹುಲಿಯನ್ನು ಕಂಡಿರುವ ಗ್ರಾಮಸ್ಥರೊಬ್ಬರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಆರ್.ರವಿಶಂಕರ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಮತ್ತಿಗೋಡು ವಲಯದ ಕಂಠಾಪುರ ಶಿಬಿರದ ಸಾಕಾನೆಗಳಾದ ಅಭಿಮನ್ಯು, ಬಲರಾಮ, ಭೀಮ, ಗಣೇಶ, ದ್ರೋಣ ಆನೆಗಳ ಸಹಾಯದಿಂದ ಪ್ರತ್ಯೇಕ ತಂಡ ರಚಿಸಿಕೊಂಡು 400 ಎಕರೆಗೂ ಹೆಚ್ಚು ಪ್ರದೇಶದ ತರಗನ್ ಎಸ್ಟೇಟ್‌ನಲ್ಲಿ ಹುಲಿ ಪತ್ತೆಗೆ ಕೂಂಬಿಂಗ್ ನಡೆಯುತ್ತಿದೆ.
ಹುಲಿಯಿಂದಾಗಿ ಕಚುವಿನಹಳ್ಳಿ, ನೇರಳೇಗುಪ್ಪೆ, ಕೆ.ಜಿ. ಹಬ್ಬನಕುಪ್ಪೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನತೆ ಆತಂಕಗೊಂಡಿದ್ದಾರೆ. ಸ್ಥಳದಲ್ಲಿ ಸಿ.ಎಫ್.ರವಿಶಂಕರ್, ವೈಲ್ಡ್ ಲೈಫ್ ವಾರ್ಡನ್ ಕೃತಿಕ ಸೇರಿದಂತೆ ತಂಡ ಕಾರ್ಯಾಚರಣೆಗೆ ಮುಂದಾಗಿದೆ. ಕೆ.ಜಿ.ಹಬ್ಬನಕುಪ್ಪೆ ಎಸ್ಟೇಟ್‌ನಲ್ಲಿ ಕಾಣಿಸಿಕೊಂಡಿರುವ ಹುಲಿಯು ಎಸ್ಟೇಟ್‌ನ ಸುತ್ತಮುತ್ತ ಅಡ್ಡಾಡುತ್ತಿರುವ ಮಾಹಿತಿ ಸಿಕ್ಕಿದೆ.
ಅಗತ್ಯ ವಿರುವೆಡೆ ಸಿ.ಸಿ.ಕ್ಯಾಮೆರಾ ಅಳವಡಿಸಲಾಗಿದೆ. ಈಗಾಗಲೆ ಹುಲಿಯನ್ನು ಉದ್ಯಾನದೊಳಗೆ ಸೇರಿಸಲು ಪ್ರಯತ್ನ ನಡೆದಿದೆ. ಪರಿಸ್ಥಿತಿಯನ್ನು ನೋಡಿಕೊಂಡು ಬಗ್ಗೆ ಹಿರಿಯ ಅ ಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದೆಂದು ನಾಗರಹೊಳೆ ಉದ್ಯಾನವನದ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಆರ್.ರವಿಶಂಕರ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.