ಏಕರೂಪ ನಾಗರಿಕ ಸಂಹಿತೆ ನಿರ್ಧಾರವಿಲ್ಲ
Team Udayavani, Aug 21, 2018, 6:00 AM IST
ನವದೆಹಲಿ: ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿ ಭಾರತೀಯ ಕಾನೂನು ಆಯೋಗವು ಯಾವುದೇ ನಿರ್ಧಾರ ಕೈಗೊಳ್ಳುತ್ತಿಲ್ಲ. ಆ.31ರಿಂದ ಆಯೋಗದ ಮುಖ್ಯಸ್ಥ ಬಿ.ಎಸ್.ಚೌಹಾಣ್ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಸಾಲದು ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ ಬುಡಕಟ್ಟು ಜನಾಂಗದ ಪ್ರದೇಶಗಳಲ್ಲಿ ವೈಯಕ್ತಿಕ ಕಾನೂನು ರಕ್ಷಣೆಯ ಪ್ರಸ್ತಾಪವನ್ನು ಆರನೇ ಪರಿಚ್ಛೇದದಲ್ಲಿ ಮಾಡಲಾಗಿರುವು ದರಿಂದ, ಅದರ ಬಗ್ಗೆ ನಿರ್ಧಾರ ಕೈಗೊಳ್ಳ ಬೇಕಿರುವ ಅಡ್ಡಿಯೂ ಇದೆ. ಹೀಗಾಗಿ ಆಯೋಗ ಕೇವಲ ಕೆಲವು ವೈಯಕ್ತಿಕ ಕಾನೂನುಗಳಿಗೆ ತಿದ್ದುಪಡಿ ತರಲು ನಿರ್ಧರಿಸಿದೆ.
2016 ಜುಲೈನಲ್ಲಿ ಕಾನೂನು ಸಚಿವಾಲಯ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರು ವುದು ಸಾಧ್ಯವೇ ಎಂಬುದಾಗಿ ಪರಿಶೀಲಿ ಸುವಂತೆ ಆಯೋಗವನ್ನು ಕೇಳಿತ್ತು. ನಂತರ ಅಕ್ಟೋಬರ್ನಲ್ಲಿ ಸಾರ್ವಜನಿಕರ ಅಭಿಪ್ರಾ ಯವನ್ನೂ ಕೇಳಿತ್ತು. ತ್ರಿವಳಿ ತಲಾಖ್, ಮಹಿಳೆಯರಿಗೆ ಸ್ವತ್ತು ಹಕ್ಕು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಪ್ರಶ್ನಾವಳಿ ಪ್ರಕಟಿಸಿ ಇದಕ್ಕೆ ಸಾರ್ವಜನಿಕರು ಉತ್ತರಿಸು ವಂತೆ ಕೋರಿತ್ತು. ಈ ಮಧ್ಯೆಯೇ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ ಎಂದು ಬಿ.ಎಸ್.ಚೌಹಾಣ್ ಹೇಳಿದ್ದರೂ, ಅಭಿ ಪ್ರಾಯ ಪಡೆಯುವ ಪ್ರಕ್ರಿಯೆ 2018 ಮಾರ್ಚ್ವರೆಗೂ ಮುಂದುವರಿದಿತ್ತು. ಈ ಪ್ರತಿಕ್ರಿಯೆ ಆಧರಿಸಿ ಸಲಹೆಗಳು ಮತ್ತು ತಿದ್ದುಪಡಿ ಕರಡುಗಳನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಆ.31ರೊಳಗೆ ಪ್ರಕಟಿಸಲಾಗುತ್ತದೆ. ಸಾರ್ವಜನಿಕರು ಈ ವಿಚಾರಕ್ಕೆ ಸಂಬಂಧಿಸಿ ಚರ್ಚೆ ನಡೆಸಬಹುದಾಗಿದೆ.
ಈ ಹಿಂದೆ, 6ನೇ ಪರಿಚ್ಛೇದದಲ್ಲಿ ವೈಯಕ್ತಿಕ ಕಾನೂನುಗಳಿಗೆ ವಿನಾಯಿತಿ ಇರುವುದರಿಂದ ಏಕರೂಪ ನಾಗರಿಕ ಸಂಹಿತೆಯೇ ಪರಿಹಾರ ವಾಗದು. ಆರನೇ ಪರಿಚ್ಛೇದವನ್ನು ಬದಿಗಿಟ್ಟು ಸಂವಿಧಾನಕ್ಕೆ ತಿದ್ದುಪಡಿ ತರಲಾಗದು ಎಂದು ಚೌಹಾಣ್ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.