ಕರ್ನಾಟಕ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಗೋವಾ
Team Udayavani, Aug 21, 2018, 6:10 AM IST
ಪಣಜಿ: ನ್ಯಾಯಾಧಿಕರಣ ತೀರ್ಪು ನೀಡುವ ಮುನ್ನವೇ ಕರ್ನಾಟಕವು ಮಹಾದಾಯಿ ನದಿ ನೀರನ್ನು ತಿರುಗಿಸಿಕೊಂಡ ಕುರಿತಂತೆ ಗೋವಾ ಸರ್ಕಾರವು ಕರ್ನಾಟಕದ ವಿರುದ್ಧ ಸೋಮವಾರ ನ್ಯಾಯಾಧಿಕರಣದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.
ಇದರಿಂದಾಗಿ ಮಹದಾಯಿ ನದಿ ನೀರು ಪ್ರಕರಣ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದಂತಾಗಿದೆ. ಅನೇಕ ವರ್ಷಗಳಿಂದ ಟ್ರಿಬ್ಯುನಲ್ನಲ್ಲಿದ್ದ ಮಹದಾಯಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ನ್ಯಾಯಾಧಿಕರಣ ಅಂತಿಮ ತೀರ್ಪು ನೀಡಿತ್ತು. ಈ ತೀರ್ಪಿನಲ್ಲಿ ಮೂರು ರಾಜ್ಯಗಳಿಗೆ ನೀರು ಹಂಚಿಕೆ ಮಾಡಿತ್ತು. ಆದರೆ ಕರ್ನಾಟಕಕ್ಕೆ ಮಹದಾಯಿಯ ಹನಿ ನೀರನ್ನೂ ಕೊಡುವುದಿಲ್ಲ ಎಂದು ಹೇಳುತ್ತಿದ್ದ ಗೋವಾಕ್ಕೆ ಈ ತೀರ್ಪು ಬೇಸರ ತಂದಿತ್ತು. ಇದೀಗ ಮಹದಾಯಿ ಪ್ರಕರಣವನ್ನು ಮತ್ತೆ ಗೋವಾ ಸರ್ಕಾರವು ನ್ಯಾಯಾಲಯಕ್ಕೆ ಒಯ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.