ಪ್ರಯೋಗಾಲಯ ಅಭಿವೃದ್ಧಿಗೆ 10 ಕೋಟಿ
Team Udayavani, Aug 21, 2018, 12:01 PM IST
ಬೆಂಗಳೂರು: ರಾಜ್ಯದ ಹತ್ತು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪ್ರಯೋಗಾಲಯಗಳ ಅಭಿವೃದ್ಧಿಗೆ ತಲಾ 10 ಕೋಟಿ ರೂ. ನೀಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪ್ರಯೋಗಾಲಯದಲ್ಲಿ ಆಧುನಿಕ ಉಪಕರಣ ಸೇರಿದಂತೆ ಸೂಕ್ತ ಸೌಲಭ್ಯ ಇಲ್ಲ ಎಂಬ ದೂರು ಇದು.
ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ದರು. ಆ ಸಭೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಯೋಗಾಲಯಗಳ ಮೌಲ ಸೌಕರ್ಯ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ರಾಜ್ಯದ 10 ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಯೋಗಾಲದಲ್ಲಿ ಹಾಲಿ ಇರುವ ಉಪಕರಣಗಳು ಮತ್ತು ಅಗತ್ಯವಾಗಿ ಬೇಕಿರುವ ಉಪಕರಣಗಳು, ವಿದ್ಯಾರ್ಥಿಗಳ ಅಂಕಿ ಅಂಶ ಸಹಿತ ಎಲ್ಲ ಮಾಹಿತಿಯನ್ನು ಶೀಘ್ರವೇ ಕಳಿಸಿಕೊಡುವಂತೆ ತಾಂತ್ರಿಕ ಶಿಕ್ಷಣ ಇಲಾಖೆ ಎಲ್ಲ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.