ಕಾಲುವೆ ಕಾಮಗಾರಿ ಆರಂಭಿಸಲು ಒತ್ತಾಯ
Team Udayavani, Aug 21, 2018, 3:33 PM IST
ಸಿರವಾರ: ತಾಲೂಕಿನ ಮಲ್ಲಟ ಗ್ರಾಮದಲ್ಲಿ ನಾರಾಯಣಪುರ ಬಲದಂಡೆ ವ್ಯಾಪ್ತಿಯ ವಡವಟ್ಟಿ ಶಾಖೆ ಉಪ ವಿತರಣೆ ಕಾಲುವೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸೋಮವಾರ ಮಲ್ಲಟ, ವಡವಟ್ಟಿ, ಪಟಕಂದೊಡ್ಡಿ, ಗೊಲ್ಲದಿನ್ನಿ, ನುಗಡೋಣಿ, ಕವಿತಾಳ ಗ್ರಾಮಗಳ ರೈತರು ರಸ್ತೆತಡೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದ ರೈತರು, ವಿತರಣೆ ಕಾಲುವೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದು, ಕಾಮಗಾರಿ ಪ್ರಾರಂಭಕ್ಕೆ ಚಾಲನೆ ನೀಡಿ ಹತ್ತು ವರ್ಷ ಗತಿಸಿದೆ. ಇನ್ನೂ ಯಾವುದೇ ಕಾಮಗಾರಿ ಪ್ರಾರಂಭವಾಗಿಲ್ಲ. ಹಲವಾರು ಬಾರಿ ರೈತರು ಧರಣಿ ನಡೆಸಿ, ಮನವಿ ಸಲ್ಲಿಸಿದರೂ ಅಧಿಕಾರಿಗಳು ಮತ್ತು ಸರ್ಕಾರ ಗಮನಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಕಾಮಗಾರಿ ಪ್ರಾರಂಭ ಮಾಡಬೇಕು.
ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರೈತರ ಮನವಿ ಸ್ವೀಕರಿಸಿ, ಸಮಸ್ಯೆ ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್, ಉಪ ವಿತರಣೆ ಕಾಲುವೆ ಕಾಮಗಾರಿಯನ್ನು ಶೀಘ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ನಂತರ ರೈತರು ಪ್ರತಿಭಟನೆ ಹಿಂಪಡೆದರು.
ರಸ್ತೆ ತಡೆ ಪರಿಣಾಮ ಸಿರವಾರ-ಲಿಂಗಸುಗೂರು ರಸ್ತೆಯಲ್ಲಿ ಸುಮಾರು ಅರ್ಧ ಗಂಟೆ ವಾಹನಗಳ ಸಂಚಾರ ಬಂದ್ ಆಗಿತ್ತು. ಮಹೇಬೂಬ್ ಖುರೇಷಿ, ಬಸವ ನಾಯಕ ಮಲ್ಲಟ, ರಮೇಶ ಭಂಡಾರಿ, ಶಿಖರೇಶ ಸ್ವಾಮಿ, ರಾಜೇಶ ಪಾಟೀಲ, ಅಶೋಕ ಪಾಟೀಲ, ಪೂಜಾರಿ ರಂಗಪ್ಪ, ಎಸ್.ಮಾರೆಪ್ಪ, ರವಿ ಚಲುವಾದಿ, ವೆಂಕಟೇಶ ಖಾನಾಪುರು, ಮಲ್ಲಟ, ವಡವಟ್ಟಿ, ಪಟಕಂದೊಡ್ಡಿ, ಗೊಲದಿನ್ನಿ, ನುಗಡೋಣಿ, ಕವಿತಾಳ ಸೇರಿ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಾರಾಯಣಪುರ ಬಲದಂಡೆ ನಾಲೆ ಮುಖ್ಯ ಎಂಜಿನಿಯರ್ ಪರಶುರಾಮ, ಮಾನ್ವಿ ಸಿಪಿಐ ಚಂದ್ರಶೇಖರ ನಾಯಕ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.