ಮಳೆ ಅವಾಂತರ: ನಾಗಸನ್ನಿಧಿಯಲ್ಲಿ  ಪ್ರವಾಸಿಗರ ಕೊರತೆ


Team Udayavani, Aug 22, 2018, 10:54 AM IST

22-agust-2.jpg

ಸುಬ್ರಹ್ಮಣ್ಯ: ನಿತ್ಯವೂ ಭಕ್ತರಿಂದ ತುಂಬಿ ತುಳುಕುತ್ತಿದ್ದ ಕುಕ್ಕೆಯಲ್ಲೀಗ ಜನ ಜಂಗುಳಿಯಿಲ್ಲ. ಸಾಲುಗಟ್ಟಿ ಬರುತ್ತಿದ್ದ ವಾಹನಗಳ ಸದ್ದುಗದ್ದಲವಿಲ್ಲ. ಹೀಗಾಗಿ ಕ್ಷೇತ್ರವೀಗ ಬಿಕೋ ಎನ್ನುತ್ತಿದೆ. ಭಾರೀ ಮಳೆಗೆ ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಅಕ್ಷರಶಃ ಜಲಾವೃತಗೊಂಡಿತ್ತು. ಇಲ್ಲಿನ ಕುಮಾರಧಾರಾ ನದಿ ನೆರೆಯಿಂದ ತುಂಬಿ ಹರಿದಿತ್ತು. ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿತ್ತು. ನೆರೆಯಿಂದ ಕ್ಷೇತ್ರ ಸಂಪರ್ಕಿಸುವ ಮಾರ್ಗದ ನಡುವಿನ ಎಲ್ಲ ಸೇತುವೆಗಳು ಮುಳುಗಿ ಸಂಪರ್ಕ ಕಡಿತಗೊಂಡಿದ್ದವು. ಅದಾದ ಬಳಿಕ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಎಲ್ಲ ದಿಕ್ಕುಗಳಿಂದ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಭೂಕುಸಿತ ಉಂಟಾಗಿ, ಹೊರಗಿನಿಂದ ಕ್ಷೇತ್ರಕ್ಕೆ ಸಂಪರ್ಕ ಕಡಿತಗೊಂಡಿದೆ. ನಾಗರಾಧನೆಗೆ ಪ್ರಸಿದ್ಧಿ ಪಡೆದ ದೇಗುಲಕ್ಕೆ ಭಕ್ತರಿಗೆ ಬರಲು ಭಾರೀ ತೊಡಕುಂಟಾಗಿದೆ. ನಾಗರಾಧನೆಯ ಪುಣ್ಯ ಕ್ಷೇತ್ರಕ್ಕೆ ನಾಡಿನ ವಿವಿಧೆಡೆಯಿಂದ ಪ್ರವಾಸಿಗರು ಬಂದು, ದೇವರ ದರ್ಶನ ಹಾಗೂ ಸೇವೆಗಳನ್ನು ಪೂರೈಸಿ ತೆರಳುತ್ತಿದ್ದರು. ಇದೀಗ ಕ್ಷೇತ್ರಕ್ಕೆ ಆಗಮಿಸುವವರ ಪ್ರವಾಸಿಗರ ಪ್ರಮಾಣದಲ್ಲಿ ಭಾರಿ ಕುಸಿತ ಕಂಡಿದೆ.

ಬೆಂಗಳೂರು – ಮಂಗಳೂರು ನಡುವಿನ ಶಿರಾಡಿ ರಾಷ್ಟ್ರೀಯ ಹೆದ್ದಾರಿ, ಹಾಸನ- ಸಕಲೇಶಪುರ, ಹೊಳೆನರಸೀಪುರ- ಬೆಂಗಳೂರು ಕಡೆಗೆ ಸಂಪರ್ಕಿ ಕಲ್ಪಿಸುವ ಬಿಸಿಲೆ ಘಾಟಿ ರಸ್ತೆ, ಸುಬ್ರಹ್ಮಣ್ಯ- ಸುಳ್ಯ- ಸಂಪಾಜೆ ಮೂಲಕ ಮೈಸೂರು ಹಾಗೂ ಕೇರಳಕ್ಕೂ ಸಂಪರ್ಕ ಕಲ್ಪಿಸುವ ರಸ್ತೆಗಳು ಮಾರ್ಗ ಮಧ್ಯೆ ಉಂಟಾದ ಭೂಕುಸಿತದಿಂದ ವಾಹನ ಓಡಾಟವಿಲ್ಲ. ಬೆಂಗಳೂರು-ಮಂಗಳೂರು ನಡುವಿನ ರೈಲು ಯಾನವೂ ಸ್ಥಗಿತಗೊಂಡಿದೆ. ಇದೀಗ ಸುಬ್ರಹ್ಮಣ್ಯ-ಮಂಜೇಶ್ವರ ರಸ್ತೆ ಹಾಗೂ ಸುಬ್ರಹ್ಮಣ್ಯ- ಧರ್ಮಸ್ಥಳ- ಆಗುಂಬೆ ಚಾರ್ಮಾಡಿ ಘಾಟಿ ರಸ್ತೆ ಓಡಾಟಕ್ಕೆ ಮಾತ್ರ ಮುಕ್ತವಾಗಿದೆ. ಹೀಗಿದ್ದರೂ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಆದ ಮಹಾಮಳೆ‌ ಹಾಗೂ ರಸ್ತೆ ಸಂಪರ್ಕ ಸಮಸ್ಯೆಯಿಂದ ಕ್ಷೇತ್ರಕ್ಕೆ ಪ್ರವಾಸಿಗರು ಬರುತ್ತಿಲ್ಲ.

ಎಲ್ಲೆಡೆ ಖಾಲಿ ಖಾಲಿ
ಕ್ಷೇತ್ರದಲ್ಲಿ ಜನಸಂದಣಿ ಕಾಣುತ್ತಿಲ್ಲ. ವಾಹನ ದಟ್ಟನೆಯೂ ಇಲ್ಲ. ದೇವರ ದರುಶನ ಹಾಗೂ ಸೇವೆಗಳನ್ನು ಪೂರೈಸಿಕೊಳ್ಳಲು ಸರತಿ ಸಾಲು ಇಲ್ಲ. ದೇಗುಲದ ಒಳಾಂಗಣ, ಹೊರಾಂಗಣ, ಆಶ್ಲೇಷಾ ಬಲಿ, ಶೇಷಸೇವೆ, ನಾಗಪ್ರತಿಷ್ಠೆ, ಮಹಾಪೂಜೆ ಮತ್ತು ಪಂಚಾಮೃತ ಮಹಾಭಿಷೇಕಗಳನ್ನು ನೆರವೇರಿಸಲುವ ಸ್ಥಳಗಳು, ರಥಬೀದಿ, ಆದಿ ಸುಬ್ರಹ್ಮಣ್ಯ ಮತ್ತು ಕುಮಾರಧಾರಾ ಸ್ನಾನಘಟ್ಟ ಹೀಗೆ ಕ್ಷೇತ್ರದ ಎಲ್ಲಿಯೂ ಪ್ರವಾಸಿಗರು ಕಂಡುಬರುತ್ತಿಲ್ಲ. ನಗರದ ವಾಹನ ಪಾರ್ಕಿಂಗ್‌ ಸ್ಥಳಗಳು ಕೂಡ ಖಾಲಿ ಬಿದ್ದಿವೆ. ದೇಗುಲದ ವಸತಿಗೃಹ, ಛತ್ರ, ಖಾಸಗಿ ವಸತಿಗೃಹ ಬಿಕೋ ಎನ್ನುತ್ತಿವೆ.

ಸೇವೆಗಳಲ್ಲಿ ಭಾರೀ ಇಳಿಕೆ
ಪ್ರವಾಸಿಗರ ಕೊರತೆಯಿಂದ ದೇಗುಲದಲ್ಲಿ ನಡೆಯುವ ಪ್ರಮುಖ ಸೇವೆಗಳಾದ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಾ ಬಲಿ, ಮಹಾಪೂಜೆ, ತುಲಾಭಾರ, ಕಾರ್ತಿಕ ಪೂಜೆ, ಶೇಷಸೇವೆ, ಮಹಾಭೀಷೇಕ ಇತ್ಯಾದಿ ಸೇವೆಗಳ ಪ್ರಮಾಣದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಮಂಗಳವಾರ ದೇಗುಲದಲ್ಲಿ 47 ಸರ್ಪಸಂಸ್ಕಾರ, 2 ತುಲಾಭಾರ, 21 ಪಂಚಾಮೃತಾಭಿಷೇಕ, 98 ಆಶ್ಲೇಷಾ ಬಲಿ, 15 ನಾಗಪ್ರತಿಷ್ಠೆ, 11 ಮಹಾಪೂಜೆ, 53 ಕಾರ್ತಿಕೇಯ, 79 ಶೇಷಸೇವೆಗಳು ನಡೆದಿವೆ. ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಇದು ಶೇ. 80ರಷ್ಟು ಕಡಿಮೆ. ವ್ಯಾಪಾರಿಗಳೂ ನಷ್ಟಕ್ಕೆ ಒಳಗಾಗಿದ್ದಾರೆ. ಅತಿವೃಷ್ಟಿ ಕಡಿಮೆಯಾಗಿ ಪ್ರಕೃತಿ ಶಾಂತಗೊಂಡು ನಾಡಿನಾದ್ಯಂತ ಜನರು, ಪಶು, ಪಕ್ಷಿ ಸಂಕುಲಗಳು ಶಾಂತಿಯುತವಾಗಿ, ಸುಖ, ನೆಮ್ಮದಿಯಿಂದ ಜೀವನ ನಡೆಸಲು ಕೃಪೆ ತೋರುವಂತೆ ಪ್ರಾರ್ಥಿಸಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸಾನ್ನಿಧ್ಯದಲ್ಲಿ ಮಂಗಳವಾರ ಪ್ರಾತಃಕಾಲ 108 ಸೀಯಾಳಾಭಿಷೇಕ ನಡೆಸಲಾಯಿತು.

ಮಳೆ ಇಳಿಕೆ
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಲ ದಿನಗಳ ಹಿಂದೆ ನೆರೆ ಬಂದು ಅವಾಂತರ ಸೃಷ್ಟಿಸಿದ್ದ ಮಳೆ ಮಂಗಳವಾರ ಕಡಿಮೆಗೊಂಡಿತ್ತು. ದಿನದಲ್ಲಿ ಕೆಲ ಹೊತ್ತು ಮಾತ್ರ ಮಳೆ ಆಗಿದೆ. ನದಿಗಳಲ್ಲಿ ನೆರೆ ಸಂಪೂರ್ಣ ಇಳಿಕೆ ಕಂಡಿದೆ. ಮಳೆ ವಿಶ್ರಾಂತಿ ಪಡೆದಿದೆ. ಜನಜೀವನ ಹಿಂದಿನ ಸ್ಥಿತಿಗೆ ಮರಳುತ್ತಿದೆ.

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.