ಇಬ್ಬರು ಮಾದಕ ವಸ್ತು ಮಾರಾಟಗಾರರ ಮೇಲೆ ಗುಂಡಿನ ದಾಳಿ
Team Udayavani, Aug 22, 2018, 12:22 PM IST
ಬೆಂಗಳೂರು: ಬಂಧಿಸಲು ಹೋದ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಇಬ್ಬರು ಮಾದಕ ವಸ್ತು ಮಾರಾಟಗಾರರ ಮೇಲೆ ಮಾರತ್‌ಹಳ್ಳಿ ಪೊಲೀಸರು ಮಂಗಳವಾರ ಸಂಜೆ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.
ಕೆ.ಆರ್.ಪುರ ನಿವಾಸಿ ಸಾದಿಕ್ ಷರೀಫ್ ಹಾಗೂ ಹೊಸಕೋಟೆ ನಿವಾಸಿ ಸಯ್ಯದ್‌ನನ್ನು ಬಂಧಿಸಲಾಗಿದ್ದು, ಆರೋಪಿಗಳ ಎಡಗಾಲಿಗೆ ಗುಂಡೇಟು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಧಿತರಿಂದ ಪಿಎಸ್‌ಐ ಗುರುಪ್ರಸಾದ್, ಪೇದೆ ರವಿಶಂಕರ್ ಗಂಭೀರವಾಗಿ ಹಲ್ಲೆಗೊಳಗಾಗಿದ್ದು, ಚಿಕಿತ್ಸೆಗೆ ದಾಖಲಾಗಿದ್ದಾರೆ.
ಇದೇ ವೇಳೆ ಕರ್ನಾಟಕಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಆಂಧ್ರಪ್ರದೇಶದ ವಿ ಕೋಟಾ ತಾಲೂಕಿನ ಎರ್ನಾಗಪಲ್ಲಿ ಗ್ರಾಮದ ನಾಗರಾಜ್ ಮತ್ತು ಷಹಬಾಜ್ ಹಾಗೂ ನಗರದಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿಯನ್ನು ಬಂಧಿಸಲಾಗಿದೆ.
ಕುರುಕಲು ತಿಂಡಿ ಪ್ಯಾಕ್‌ಗಳಲ್ಲಿ ಸರಬರಾಜು: ಆರೋಪಿಗಳ ಪೈಕಿ ನಾಗರಾಜ್ ಆಂಧ್ರದ ಎರ್ನಾಗಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಗುಣಮಟ್ಟದ ಗಾಂಜಾ ಸಂಗ್ರಹಿಸುತ್ತಿದ್ದ. ಈತನಿಂದ ಷಹಬಾಜ್ ಭಾರೀ ಪ್ರಮಾಣದಲ್ಲಿ ಗಾಂಜಾ ಖರೀದಿಸಿ, ಸಂಗ್ರಹಿಸಿಟ್ಟು ಪ್ರತಿಷ್ಠಿತ ಬ್ರ್ಯಾಂಡ್‌ನ ಕುರುಕಲು ತಿಂಡಿ ಪ್ಯಾಕೆಟ್‌ಗಳಲ್ಲಿ ಅಲ್ಪ ಪ್ರಮಾಣದಲ್ಲಿ ಗಾಂಜಾ ಇಟ್ಟು ಕರ್ನಾಟಕಕ್ಕೆ ಸರಬರಾಜು ಮಾಡುತ್ತಿದ್ದ. ಸಾದಿಕ್ ಸೇರಿದಂತೆ ಮುಂತಾದವರು ಮಾರಾಟ ಮಾಡುತ್ತಿದ್ದರು.
ಆರೋಪಿಗಳಿಗೆ ಗುಂಡೇಟು: ಈ ಮಾಹಿತಿ ಪಡೆದ ಮಾರತ್‌ಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ಸಬ್ ಇನ್‌ಸ್ಪೆಕ್ಟರ್ ಗುರುಪ್ರಸಾದ್ ಹಾಗೂ ಮುಖ್ಯ ಪೇದೆ ದೇವರಾಜ್, ಪೇದೆ ರವಿಶಂಕರ್ ತಂಡ ಕೆಲ ದಿನಗಳ ಹಿಂದೆ ನಾಗರಾಜ್ ಮತ್ತು ಷಹಬಾಜ್‌ನನ್ನು ವಶಕ್ಕೆ ಪಡೆದು ಸಾದಿಕ್ ಷರಿಫ್ ಮತ್ತು ಸಯ್ಯದ್ ಬಗ್ಗೆ ಮಾಹಿತಿ ಸಂಗ್ರಹಿಸಿತ್ತು.
ಬಳಿಕ ಈ ಆರೋಪಿಗಳ ಮೇಲೆ ನಿಗಾವಹಿಸಿದ್ದ ತಂಡ ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಎಚ್‌ಎಎಲ್ ಠಾಣಾ ವ್ಯಾಪ್ತಿಯ ಬೋರ್‌ವೆಲ್ ಜಂಕ್ಷನ್ ಬಳಿ ಪಲ್ಸರ್ ಬೈಕ್‌ನಲ್ಲಿ ಹೋಗುತ್ತಿರುವ ಖಚಿತ ಮಾಹಿತಿ ಸಂಗ್ರಹಿಸಿ ಆರೋಪಿಗಳ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದೆ. ಪೊಲೀಸರನ್ನು ಕಂಡ ಆರೋಪಿಗಳು ತಪ್ಪಿಸಿಕೊಳ್ಳುವ ಯತ್ನದಲ್ಲಿ ಪಿಎಸ್‌ಐ ಗುರುಪ್ರಸಾದ್ ಮತ್ತು ಸಿಬ್ಬಂದಿ ರವಿಶಂಕರ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮಾಹಿತಿ ಪಡೆದ ಪಿಐ ಸಾದಿಕ್ ಪಾಷಾ ಕೂಡ ಸ್ಥಳಕ್ಕೆ ಬಂದು ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದ್ದಾರೆ.
ಆದರೂ ಆರೋಪಿಗಳು ಡ್ಯಾ†ಗರ್‌ನಿಂದ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಮತ್ತು ಪಿಎಸ್‌ಐ ಇಬ್ಬರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಆ ಗುಂಡುಗಳು ಆರೋಪಿಗಳ ಎಡಗಾಲಿಗೆ ತಗುಲಿ ರಕ್ತಗಾಯವಾಗಿ ಕುಸಿದು ಬಿದ್ದಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಬಳಿಯಿದ್ದ 2 ಕೆ.ಜಿ. ಗಾಂಜಾ ಮತ್ತು ಡ್ಯಾ†ಗರ್ ಹಾಗೂ ಮಚ್ಚನ್ನು ವಶಕ್ಕೆ ಪಡೆಯಲಾಗಿದೆ.
8 ಮಂದಿಯ ಬಂಧನ: ಸಯ್ಯದ್ ಮತ್ತು ಸಾದೀಕ್ ಷರೀಫ್ರಿಂದ ಗಾಂಜಾ ಖರೀದಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಾರತ್‌ಹಳ್ಳಿಯ ಮೊಹಿದ್ದುರ್ ಶೇಖ್ (25), ಕೆ.ಆರ್.ಪುರ ಮೊಹಮ್ಮದ್ ಬಿಲಾಲ್ (30), ಗಾರೇಪಾಳ್ಯದ ಹಫೀಜ್ ಉಲ್ (35), ಪಣತ್ತೂರು ಹಫೀಜ್ ಉಲ್ ಶೇಖ್ (35), ಮುನ್ನೆಕೊಳಾಲು ಮೊಹಮ್ಮದ್ ಶುಕರ್ (22), ಮೊಹಮ್ಮದ್ ಅಸ್ಲಾಂ (22), ಮೊಹಮ್ಮದ್ ಶುಹಾಕ್ (25), ಹಫೀಜ್ ಉಲ್ (32) ಎಂಬುವರನ್ನು ಬಂಧಿಸಲಾಗಿದೆ. ಈ ಆರೋಪಿಗಳಿಂದ 3 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಎಂಟು ಮಂದಿ ಆರೋಪಿಗಳು ಕಳೆದ ನಾಲ್ಕು ವರ್ಷಗಳಿಂದ ತಲಾ 50-60 ಮಂದಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಡಿಸಿಪಿ ಅಬ್ದುಲ್ ಅಹದ್ ಹೇಳಿದರು.
ಪೊಲೀಸ್ ಆಯುಕ್ತರ ಸೂಚನೆ: ಇತ್ತೀಚೆಗೆ ನಗರದಲ್ಲಿ ಮಾದಕ ವಸ್ತು ಮಾರಾಟ ಜಾಲ ವಿಸ್ತರಿಸಿಕೊಳ್ಳುತ್ತಿರುವ ಬಗ್ಗೆ ಸರ್ಕಾರ ಪೊಲೀಸ್ ಆಯುಕ್ತರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ವೈಟ್‌ಫೀಲ್ಡ್ ವಲಯ ಡಿಸಿಪಿ ಅಬ್ದುಲ್ ಅಹದ್ ತಮ್ಮ ವಲಯದಲ್ಲಿ ವಿಶೇಷ ತಂಡ ರಚಿಸಿದ್ದರು. ಈ ತಂಡ ಇದೀಗ ಆರೋಪಿಗಳನ್ನು ಬಂದಿಸಿರುವುದನ್ನು ಆಯುಕ್ತ ಟಿ.ಸುನಿಲ್ ಕುಮಾರ್ ಹಾಗೂ ಹೆಚ್ಚುವರಿ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅಭಿನಂದಿಸಿ ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.