ಬೆಂಗಳೂರಿಗೆ ಬಂದ ಅಟಲ್ ಅಸ್ಥಿಗೆ ಸ್ವಾಗತ
Team Udayavani, Aug 23, 2018, 6:30 AM IST
ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮದ ಕಳಶ ಬುಧವಾರ ಬೆಂಗಳೂರಿಗೆ ತರಲಾಗಿದ್ದು , ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಹಸ್ರಾರು ಕಾರ್ಯಕರ್ತರು ಬರಮಾಡಿಕೊಂಡರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಸಂಸದರಾದ ಸುರೇಶ್ ಅಂಗಡಿ, ಶಿವಕುಮಾರ ಉದಾಸಿಯವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದ ಅಸ್ಥಿ ಕಳಶ ಸ್ವೀಕರಿಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಸೇರಿ ಹಲವು ನಾಯಕರು ಸ್ವಾಗತ ಕೋರಿದರು.
ನಂತರ ಅಸ್ಥಿ ಕಳಶ ತೆರೆದ ಜೀಪಿನಲ್ಲಿ ಬೈಕ್ ರ್ಯಾಲಿ ಮೂಲಕ ಮೆರವಣಿಗೆಯಲ್ಲಿ ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ತರಲಾಯಿತು. ಮಾರ್ಗದುದ್ದಕ್ಕೂ ಸಹಸ್ರಾರು ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿಯೂ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ರವಿಕುಮಾರ್ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಹಾಜರಿದ್ದ ಕಾರ್ಯಕರ್ತರು ಹಾಗೂ ಮುಖಂಡರು ಅಸ್ಥಿ ಕಳಶ ಸ್ವಾಗತಿಸಿ ಪುಷ್ಪಾರ್ಚನೆ ಮಾಡಿ ಗೌರವ ಸೂಚಿಸಿದರು.
ರಾಜ್ಯ ಕಚೇರಿಗೆ ಚಿತಾಭಸ್ಮದ ಕಳಶ ಆಗಮಿಸದಾಗ ಅಭಿಮಾನಿಗಳು ಅಟಲ್ ಜೀ, ಅಮರ್ ರಹೇ, ವಾಜಪೇಯಿ ಜಿಂದಾಬಾದ್’ ಎಂದು ಘೋಷಣೆಗಳ ಮೂಲಕ ಗೌರವ ಅರ್ಪಿಸಿದರು. ರಾತ್ರಿ ಹತ್ತು ಗಂಟೆವರೆಗೂ ಚಿತಾಭಸ್ಮಕ್ಕೆ ಗೌರವ ಸಲ್ಲಿಸಲು ಸಾರ್ವಜನಿಕರಿಗೂ ಅವಕಾಶ ಮಾಡಿಕೊಡಲಾಗಿತ್ತು.
ಇಂದು ಕಾವೇರಿಗೆ ವಿಸರ್ಜನೆ
ಗುರುವಾರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ ಮಾಡಲಾಗುವುದು. ಬೆಳಗ್ಗೆ 9 ಗಂಟೆಯಿಂದ ರಾಜ್ಯ ಬಿಜೆಪಿ ಕಾರ್ಯಾಲಯದಿಂದ ಅಸ್ಥಿ ಕಳಶ ತೆರೆದ ಜೀಪಿನಲ್ಲಿ ಮೆರವಣಿಗೆ ನಡೆಸಿ ನವರಂಗ್ ವೃತ್ತ, ವಿಜಯನಗರ, ಗಾಳಿ ಆಂಜನೇಯ ದೇವಸ್ಥಾನ, ರಾಜರಾಜೇಶ್ವರಿ ನಗರ ವೃತ್ತ, ಕೆಂಗೇರಿ ಮೂಲಕ ಸಾಗಲಿದೆ.
ಬಿಡದಿಯಲ್ಲಿ ಕಳಶ ಸ್ವಾಗತಿಸಿ ನಂತರ ರಾಮನಗರ, ಚೆನ್ನಪಟ್ಟಣ, ಮದ್ದೂರು, ಮಂಡ್ಯ ಮೂಲಕ 2 ಗಂಟೆಗೆ ಶ್ರೀರಂಗಪಟ್ಟಣಕ್ಕೆ ತಲುಪಿದ್ದು, ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ ಮಾಡಲಾಗುವುದು. ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಸಂಸದರಾದ ಪಿ.ಸಿ.ಮೋಹನ್, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಮೆರವಣಿಗೆಯಲ್ಲಿ ಸಾಗುವರು. ಪಶ್ಚಿಮ ವಾಹಿನಿ ಬಳಿ ಸಂಸದ ಪ್ರತಾಪಸಿಂಹ ಹಾಗೂ ಶಾಸಕರಾದ ರಾಮದಾಸ್, ಎಲ್.ನಾಗೇಂದ್ರ ಜತೆಗೂಡಲಿದ್ದಾರೆ .
ನಂತರ ಆ.25 ರಂದು ನೇತ್ರಾವತಿ, ಮಲಪ್ರಭಾ, ಕೃಷ್ಣಾ , ಕಾರಂಜಾ, ತುಂಗಭದ್ರಾ, ಶರಾವತಿ , ತುಂಗಾ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.