ರಂಗೇರುತ್ತಿದೆ ನಗರ ಸ್ಥಳೀಯ ಸಂಸ್ಥೆ ಚುನಾವಣಾ ಕಣ
Team Udayavani, Aug 23, 2018, 6:40 AM IST
ಬೆಂಗಳೂರು: ರಾಜ್ಯದ 20 ಜಿಲ್ಲೆಗಳ 104 ನಗರ ಸ್ಥಳೀಯ ಸಂಸ್ಥೆಗಳಿಗೆ ಆ.31ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಗುರುವಾರ ಅಂತಿಮ ದಿನವಾಗಿದ್ದು, ಚುನಾವಣಾ ಕಣ ರಂಗೇರುತ್ತಿದೆ.
ಈ ಬಾರಿ ಕೊಡಗು ಸೇರಿದಂತೆ ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಸಂಭವಿಸಿದ ಅತಿವೃಷ್ಠಿ ಹಾನಿ ಹಿನ್ನೆಲೆಯಲ್ಲಿ ಈ ಬಾರಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಜಿದ್ದಾಜಿದ್ದಿ ಇದುವರೆಗೆ ಅಷ್ಟೊಂದು ತೀವ್ರವಾಗಿರಲಿಲ್ಲ. ಆದರೆ, ಕೊನೆಯ ಕೆಲ ದಿನಗಳಲ್ಲಿ ರಾಜಕೀಯ ಪಕ್ಷಗಳ ನಾಯಕರು ಚುನಾವಣೆ ಬಗ್ಗೆ ಗಮನಹರಿಸಲಿದ್ದು, ಸ್ವಲ್ಪ ಮಟ್ಟಿನ ಭಿರುಸು ಕಂಡುಬರಲಿದೆ.
104 ನಗರ ಸ್ಥಳೀಯ ಸಂಸ್ಥೆಗಳ ಸುಮಾರು 2,500 ವಾರ್ಡ್‌ಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ನಿಂದ 2,253, ಬಿಜೆಪಿಯಿಂದ 2,191, ಜೆಡಿಎಸ್‌ನಿಂದ 1,283, ಬಿಎಸ್‌ಪಿಯಿಂದ 111, ಇತರ ಪಕ್ಷಗಳಿಂದ 170 ಹಾಗೂ ಪಕ್ಷೇತರರು 2,539 ಸೇರಿ ಒಟ್ಟು 8,547 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಮುಗಿದ ಬಳಿಕ ಕಣದಲ್ಲಿ ಉಳಿದ ಅಭ್ಯರ್ಥಿಗಳ ಅಂತಿಮ ಚಿತ್ರಣ ಸಿಗಲಿದ್ದು, ಇದರೊಂದಿಗೆ ಪ್ರಚಾರ ಕಾರ್ಯವೂ ಚುರುಕುಗೊಳ್ಳಲಿದೆ.
ಪ್ರಕೃತಿ ವಿಕೋಪದಿಂದಾಗಿ ಕೊಡಗಿನಲ್ಲಿ ಸಂಭವಿಸಿದ ಅನಾಹುತದ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಲ್ಲಿ ಪರಿಹಾರ ಕಾರ್ಯ ಮತ್ತು ಸಂತ್ರಸ್ತರಿಗೆ ನೆರವು ನೀಡಲು ಆದ್ಯತೆ ನೀಡಿವೆ. ಹೀಗಾಗಿ ಈ ಬಾರಿ ಚುನಾವಣಾ ಕಾವು ಅಷ್ಟೊಂದು ತೀವ್ರಸ್ವರೂಪ ಪಡೆದಿಲ್ಲ. ಆದರೆ, ಕೊಡಗು ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಶುಕ್ರವಾರದ ಬಳಿಕ ರಾಜಕೀಯ ಪಕ್ಷಗಳ ನಾಯಕರು ಚುನಾವಣೆಯತ್ತ ಗಮನಹರಿಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಪ್ರಚಾರಕ್ಕೆ ಹೋಗುತ್ತಿಲ್ಲ:
ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೋಗುವುದಿಲ್ಲ. ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸೇರಿದಂತೆ ಸ್ಥಳೀಯ ನಾಯಕರೇ ಚುನಾವಣೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
ಮತದಾರರ ಸೆಳೆಯಲು ನಾನಾ ಕಸರತ್ತು
ಮಂಡ್ಯ: ನಗರಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ವಿವಿಧ ಆಮಿಷಗಳನ್ನು ಮುಂದಿಟ್ಟು,ಮತಯಾಚನೆ ಮಾಡುತ್ತಿದ್ದಾರೆ.
ವಾರ್ಡ್ ವಾರು ಮತದಾರರ ಪಟ್ಟಿಯನ್ನು ಕೈಯಲ್ಲಿಟ್ಟು ಕೊಂಡಿರುವ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ವಾರ್ಡ್‌ನಲ್ಲಿ ಎಷ್ಟು ಮತದಾರರಿದ್ದಾರೆ. ಯಾರ್ಯಾರ ಓಟು ಸ್ಥಳೀಯ ವಾರ್ಡ್‌ನಲ್ಲಿದೆ, ವಾರ್ಡ್‌ನ ಹೊರಗೆ ಎಷ್ಟು ಮತಗಳಿವೆ. ವಾರ್ಡ್‌ನ ಮತದಾರರಾಗಿದ್ದು ಉದ್ಯೋಗವನ್ನರಿಸಿಕೊಂಡು ನಗರದಿಂದ ಹೊರಗೆ ಹೋಗಿರುವ ಮತದಾರರು ಎಷ್ಟು ಎಂಬೆಲ್ಲಾ ಲೆಕ್ಕಾಚಾರವನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ. ಮತಕ್ಕಾಗಿ ಉಡುಗೊರೆಗಳನ್ನು ತಲುಪಿಸುವ ವ್ಯವಸ್ಥಿತ ಕಾರ್ಯತಂತ್ರ ನಡೆಸಿದ್ದಾರೆ.
ಪ್ರತಿಷ್ಠಿತ ಬಡಾವಣೆಗಳಲ್ಲಿರುವ ಜನರ ಬಳಿ ವಿನಯದಿಂದ ಮತಯಾಚನೆ ಮಾಡುವ ಅಭ್ಯರ್ಥಿಗಳು, ಕೊಳಚೆ ಪ್ರದೇಶಗಳ ನಿವಾಸಿಗಳ ಬಳಿ ಒಂದು ಮತಕ್ಕೆ ಇಂತಿಷ್ಟು ಹಣ ಅಥವಾ ಉಡುಗೊರೆ ನೀಡುವುದರೊಂದಿಗೆ ಮತಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದಾರೆ.
ಅರಿಶಿನ-ಕುಂಕುಮವನ್ನು ಬೆಳ್ಳಿ ಬಟ್ಟಲುಗಳಲ್ಲಿ ಇಟ್ಟು ಮತ ಕೇಳುವುದು, ಕವರ್‌ಗಳಲ್ಲಿ ಸೀರೆಯನ್ನಿಡುವುದು, ಮೂಗುತಿ, ಬೆಳ್ಳಿ ಕಾಲು ಚೈನು, ಕಾಲುಂಗುರ, ಮೂಗುತಿಯನ್ನು ಪ್ಯಾಕ್ ಮಾಡಿಸಿ ವೀಳ್ಯದೆಲೆ ಮೇಲಿಟ್ಟು ಮತದಾರರಿಗೆ ನೀಡುವ ಮೂಲಕ ಮತ ಸೆಳೆಯುವ ತಂತ್ರ ಅನುಸರಿಸುತ್ತಿದ್ದಾರೆ. ಮತ್ತೆ ಕೆಲವರು ಆ ಕುಟುಂಬದಲ್ಲಿರುವ ಮತದಾರರನ್ನು ಲೆಕ್ಕ ಹಾಕಿ ಒಂದು ಓಟಿಗೆ 1000 ರೂ.ನಂತೆ ಕವರ್‌ನಲ್ಲಿಟ್ಟು ನೀಡಿ ಕೈಮುಗಿದು ಮತಯಾಚನೆ ಮಾಡುತ್ತಿದ್ದಾರೆ. ಕೊಳಚೆ ಪ್ರದೇಶದ ಜನರಿಗೆ ಹಣ-ಮದ್ಯ ಕೊಟ್ಟು ಮತಗಳನ್ನು ಕೇಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಪಾರ್ಟಿಫಂಡ್ ನಿರೀಕ್ಷೆ: ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಪಾರ್ಟಿಫಂಡ್ ಹೆಸರಿನಲ್ಲಿ ಒಂದಷ್ಟು ಹಣ ನೀಡುತ್ತಿವೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳಿಗೆ 1 ಲಕ್ಷ ರೂ.ವರೆಗೆ ಪಾರ್ಟಿಫಂಡ್ ಸಿಗುವ ಸಾಧ್ಯತೆ ಇದೆ. ಜೆಡಿಎಸ್‌ನಲ್ಲಿ ಶಾಸಕರು ಸೇರಿದಂತೆ ಪ್ರಮುಖ ನಾಯಕರು ಹಣವನ್ನು ತಮ್ಮ ಪಕ್ಷಗಳ ಅಭ್ಯರ್ಥಿಗಳ ಚುನಾವಣಾ ಖರ್ಚಿಗೆ ನೀಡುತ್ತಿದ್ದಾರೆ. ಆದರೂ, ಬಹುಪಾಲು ಖರ್ಚನ್ನು ಅಭ್ಯರ್ಥಿಗಳೇ ಭರಿಸುವುದು ಅನಿವಾರ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.